ಕರ್ನಾಟಕದಲ್ಲಿ ಹಂತ ಹಂತವಾಗಿ ಅನ್ ಲಾಕ್

June 9, 2021

ಬೆಂಗಳೂರು ಜೂ.9 : ಕರ್ನಾಟಕ ರಾಜ್ಯದಲ್ಲಿ ಜೂ.14 ರವರೆಗೆ ಕೋವಿಡ್ ಲಾಕ್ ಡೌನ್ ಜಾರಿಯಲ್ಲಿದೆ. ನಂತರದ ದಿನಗಳಲ್ಲಿ ಒಂದೇ ಬಾರಿಗೆ ಅನ್ ಲಾಕ್ ಜಾರಿ ಮಾಡುವುದಿಲ್ಲವೆಂದು ಕಂದಾಯ ಸಚಿವ ಆರ್.ಅಶೋಕ್ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪರಿಸ್ಥಿತಿಯನ್ನು ಅವಲೋಕಿಸಿ ಅನ್ ಲಾಕ್ ನಿರ್ಧಾರ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 2000 ದಿಂದ 500 ಕ್ಕೆ ಇಳಿಕೆಯಾಗಬೇಕು. ಪಾಸಿಟಿವಿಟಿ ದರ ಕಡಿಮೆ ಇರುವ ಜಿಲ್ಲೆಗಳಲ್ಲಿ ಹಂತ ಹಂತವಾಗಿ ಅನ್ ಲಾಕ್ ಜಾರಿ ಮಾಡಲಾಗುವುದು ಎಂದು ಹೇಳಿದರು.
ಒಂದೇ ಬಾರಿಗೆ ಅನ್ ಲಾಕ್ ಮಾಡಿದರೆ ಮತ್ತೆ ಸೋಂಕು ವ್ಯಾಪಿಸುವ ಅಪಾಯವಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮಗಳೊಂದಿಗೆ ವಿನಾಯಿತಿ ನೀಡಲಾಗುವುದು. ಮುಖ್ಯಮಂತ್ರಿಗಳ ನಿರ್ಧಾರವೇ ಅಂತಿಮವಾಗಿರುತ್ತದೆ. ಅಂತರ ಜಿಲ್ಲಾ ವಾಹನಗಳ ಸಂಚಾರ ಮತ್ತು ಬಸ್ ಗಳ ಸಂಚಾರದ ಬಗ್ಗೆ ಇನ್ನೂ ನಿರ್ಧಾರ ಮಾಡಿಲ್ಲವೆಂದು ಅಶೋಕ್ ತಿಳಿಸಿದರು.

error: Content is protected !!