ಅನ್ ಲಾಕ್ ಸಮಾಲೋಚನೆ : ಗುರುವಾರ ಕೊಡಗು ಜಿಲ್ಲಾಧಿಕಾರಿಯೊಂದಿಗೆ ಸಿಎಂ ಚರ್ಚೆ

June 9, 2021

ಮಡಿಕೇರಿ ಜೂ.9 : ಕೋವಿಡ್ ಲಾಕ್ ಡೌನ್ ಮಾರ್ಗಸೂಚಿ ಜೂ.14 ಕ್ಕೆ ಅಂತಿಮಗೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಅನ್ ಲಾಕ್ ಕ್ರಮಗಳು ಹೇಗಿರಬೇಕು ಎನ್ನುವ ಬಗ್ಗೆ ರಾಜ್ಯ ಸರ್ಕಾರ ಚಿಂತನೆಯಲ್ಲಿ ತೊಡಗಿದೆ.

ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಜೂ.10 ರಂದು ಕೊಡಗು, ದಕ್ಷಿಣಕನ್ನಡ, ಮೈಸೂರು, ಚಾಮರಾಜನಗರ ಸೇರಿದಂತೆ 12 ಕ್ಕೂ ಹೆಚ್ಚು ಜಿಲ್ಲೆಯ ಜಿಲ್ಲಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚರ್ಚೆ ನಡೆಸಲಿದ್ದಾರೆ. ಶೇ.5 ಅಥವಾ 6 ಕ್ಕಿಂತ ಕಡಿಮೆ ಪಾಸಿಟಿವಿಟಿ ದರವಿರುವ ಜಿಲ್ಲೆಗಳಲ್ಲಿ ಅನ್ ಲಾಕ್ ಹಂತ ಹಂತವಾಗಿ ಜಾರಿಯಾಗಲಿದೆ ಎಂದು ಹೇಳಲಾಗುತ್ತಿದ್ದು, ಕೊಡಗು ಶೇ.8 ಪಾಸಿಟಿವಿಟಿ ದರ ಹೊಂದಿದೆ.

error: Content is protected !!