ಕೊಡಗಿನಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.9.8

June 10, 2021

ಮಡಿಕೇರಿ ಜೂ.10 : ಕೊಡಗು ಜಿಲ್ಲೆಯಲ್ಲಿ ಗುರುವಾರ ಬೆಳಗ್ಗೆ 11 ಗಂಟೆ ವೇಳೆಗೆ 235 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 170 ಆರ್.ಟಿ.ಪಿ.ಸಿ.ಆರ್ ಮತ್ತು 65 ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ದೃಢಪಟ್ಟಿದೆ. 2100ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 1 ಸಾವು ಉಂಟಾಗಿದ್ದು, ಒಟ್ಟು 342 ಮರಣ ಪ್ರಕರಣಗಳು ವರದಿಯಾಗಿದೆ.
ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.9.8 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಸೋಮವಾರಪೇಟೆ ತಾಲೂಕಿನಲ್ಲಿ 105, ವಿರಾಜಪೇಟೆ ತಾಲ್ಲೂಕಿನಲ್ಲಿ 88 ಮತ್ತು ಮಡಿಕೇರಿ ತಾಲ್ಲೂಕಿನಲ್ಲಿ 42 ಹೊಸ ಪ್ರಕರಣಗಳು ಪತ್ತೆಯಾಗಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 26,756 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 113 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 24,314 ಮಂದಿ ಗುಣಮುಖರಾಗಿದ್ದಾರೆ.

error: Content is protected !!