ರಾಯ್ ಡಿಸೋಜ ಸಾವಿನ ಘಟನೆಗೆ ಖಂಡನೆ : ವಿರಾಜಪೇಟೆಯಲ್ಲಿ ಕಾಂಗ್ರೆಸ್ ಪ್ರತಿಭಟನೆ

June 12, 2021

ವಿರಾಜಪೇಟೆ ಜೂ.12 : ಮಾನಸಿಕ ಅಸ್ವಸ್ಥ ರಾಯ್ ಡಿಸೋಜ ಅವರ ಸಾವಿನ ಪ್ರಕರಣವನ್ನು ಖಂಡಿಸಿ ಮತ್ತು ತಪ್ಪಿತಸ್ತ ಪೊಲೀಸ್ ಸಿಬ್ಬಂದಿಗಳನ್ನು ಅಮಾನತುಗೊಳಿಸಬೇಕೆಂದು ಆಗ್ರಹಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ಹಾಗೂ ವಿವಿಧ ಸಂಘ, ಸಂಸ್ಥೆಗಳು ವಿರಾಜಪೇಟೆಯಲ್ಲಿ ಪ್ರತಿಭಟನೆ ನಡೆಸಿದವು.
ಪೊಲೀಸರು ಅಮಾಯಕನ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ ಪ್ರತಿಭಟನಾಕಾರರು ಘಟನೆ ಕುರಿತು ಉನ್ನತ ಮಟ್ಟದ ತನಿಖೆ ನಡೆಸಬೇಕೆಂದು ಒತ್ತಾಯಿಸಿದರು.
ಮನವಿ ಸ್ವೀಕಾರದ ವಿಚಾರಕ್ಕೆ ಸಂಬಂಧಿಸಿದಂತೆ ಕೆಲವು ಕಾಲ ಗೊಂದಲ ಸೃಷ್ಟಿಯಾಗಿ ಅಸಮಾಧಾನ ವ್ಯಕ್ತಪಡಿಸಿದ ಪ್ರಸಂಗವೂ ನಡೆಯಿತು.
ಕಾಂಗ್ರೆಸ್ ಜಿಲ್ಲಾಧ್ಯಕ್ಷ ಧರ್ಮಜ ಉತ್ತಪ್ಪ ಅವರ ನೇತೃತ್ವದಲ್ಲಿ ಪ್ರತಿಭಟನೆಯಲ್ಲಿ ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡರಂಜಿ ಪೂಣಚ್ಚ, ನಗರರಾಧ್ಯಕ್ಷ ಮೋಹನ್, ಕಾನೂನು ಘಟಕದ ಅಧ್ಯಕ್ಷ ಡಿ.ಸಿ.ಧ್ರುವಕುಮಾರ್, ಕೆ.ಪಿ.ಸಿ.ಸಿ ಸದಸ್ಯ ಆರ್.ಕೆ.ಸಲಾಂ, ವಕೀಲ ಎಂ.ಎಸ್.ಪೂವಯ್ಯ, ಪ್ರಮುಖರಾದ ರಫೀಕ್, ಹನೀಫ್ ಬಿಳುಗುಂದ, ಟಾಟು ಮೊಣ್ಣಪ್ಪ, ಉಮ್ಮರ್ ಫಾರೂಕ್, ರಕ್ಷಿತ್ ಚೆಂಗಪ್ಪ, ವಿವಿಧ ಘಟಕಗಳ ಸದಸ್ಯರು ಹಾಜರಿದ್ದರು.

error: Content is protected !!