ಲಾರಿ ಡಿಕ್ಕಿ : ನಾಲ್ವರು ಚೆಸ್ಕಾಂ ಸಿಬ್ಬಂದಿಗಳಿಗೆ ಗಂಭೀರ ಗಾಯ

June 12, 2021

ಮಡಿಕೇರಿ ಜೂ.12 : ವಿದ್ಯುತ್ ಲೈನ್ ದುರಸ್ತಿ ಮಾಡುತ್ತಿದ್ದ ಸಂದರ್ಭ ಲಾರಿಯೊಂದು ಡಿಕ್ಕಿಯಾಗಿ ನಾಲ್ವರು ಚೆಸ್ಕಾಂ ಸಿಬ್ಬಂದಿಗಳು ಗಂಭೀರವಾಗಿ ಗಾಯಗೊಂಡಿರುವ ಘಟನೆ ಮಡಿಕೇರಿ ಸಮೀಪದ ಬೆಟ್ಟಗೇರಿ ಗ್ರಾಮದಲ್ಲಿ ನಡೆದಿದೆ.
ಎಲ್ಲಾ ಗಾಯಾಳುಗಳನ್ನು ಮಡಿಕೇರಿಯ ಅಶ್ವಿನಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಲಾರಿ(ಕೆ.ಎ.40-3298) ಮತ್ತು ಚಾಲಕನನ್ನು ವಶಕ್ಕೆ ಪಡೆಯಲಾಗಿದ್ದು, ಮಡಿಕೇರಿ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ.

error: Content is protected !!