ಮುಂದುವರಿದ ಅರಣ್ಯಾಧಿಕಾರಿಗಳ ಕಾರ್ಯಾಚರಣೆ : ಕಾಫಿ ತೋಟದಲ್ಲಿದ್ದ ಬೀಟೆ ನಾಟಾಗಳು ವಶ

June 16, 2021

ಕುಶಾಲನಗರ ಜೂ.16 : ಕುಶಾಲನಗರ ಸಮೀಪದ ಮೀನುಕೊಲ್ಲಿ ಅರಣ್ಯ ಪ್ರದೇಶ ವ್ಯಾಪ್ತಿಯ ವಾಲ್ನೂರು ತ್ಯಾಗತ್ತೂರು ಗ್ರಾಮದ ಕಾಫಿ ತೋಟವೊಂದರಲ್ಲಿ ಅಕ್ರಮವಾಗಿ ಸಂಗ್ರಹಿಸಿಟ್ಟಿದ್ದ ಬೀಟೆ ನಾಟಾಗಳನ್ನು ವಶಪಡಿಸಿಕೊಳ್ಳುವಲ್ಲಿ ಅರಣ್ಯ ಇಲಾಖೆ ಯಶಸ್ವಿಯಾಗಿದೆ.
ಸುಮಾರು 2.5 ಲಕ್ಷ ರೂ. ಮೌಲ್ಯದ 15 ಬೀಟೆ ನಾಟಾಗಳನ್ನು ವಶಪಡಿಸಿಕೊಳ್ಳಲಾಗಿದೆ. ಅಕ್ರಮವಾಗಿ ಬೀಟೆ ನಾಟಾಗಳನ್ನು ಸಾಗಿಸಲು ಯತ್ನಿಸುತ್ತಿದ್ದ ಆರೋಪಿಗಳು ಅರಣ್ಯ ಅಧಿಕಾರಿಗಳ ದಾಳಿ ಸಂದರ್ಭ ಸ್ಥಳದಿಂದ ಪರಾರಿಯಾಗಿದ್ದಾರೆ.
ಮಡಿಕೇರಿ ಉಪ ವಿಭಾಗದ ಅರಣ್ಯ ಸಂರಕ್ಷಣಾಧಿಕಾರಿ ಶಿವರಾಮ್ ಬಾಬು, ಸೋಮವಾರಪೇಟೆ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎ.ನೆಹರು ಮಾರ್ಗದರ್ಶನದಲ್ಲಿ ಕುಶಾಲನಗರ ವಲಯ ಅರಣ್ಯಾಧಿಕಾರಿ ಅನನ್ಯಕುಮಾರ್ ಹಾಗೂ ಮೀನುಕೊಲ್ಲಿ ಉಪ ವಲಯ ಅರಣ್ಯಾಧಿಕಾರಿ ಕೂಡಕಂಡಿ ಸುಬ್ರಾಯ, ಅರಣ್ಯ ರಕ್ಷಕ ರವಿ ಅಟ್ನಾಳ, ಆರ್.ಆರ್.ಟಿ ಸಿಬ್ಬಂದಿಗಳಾದ ಅಪ್ಪಸ್ವಾಮಿ, ದುರ್ಗೇಶ್, ತಿಲಕ್, ಆಶಿಕ್, ಜಗದೀಶ್ ಹಾಗೂ ಚಾಲಕ ವಾಸು ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.

error: Content is protected !!