ಕೊಡಗಿನಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.5.5

June 17, 2021

ಮಡಿಕೇರಿ ಜೂ.17 : ಕೊಡಗು ಜಿಲ್ಲೆಯಲ್ಲಿ 1009 ಕೋವಿಡ್ ಸಕ್ರಿಯ ಪ್ರಕರಣಗಳಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ ಸಾವು ಉಂಟಾಗಿಲ್ಲ. ಇಲ್ಲಿಯವರೆಗೆ ಒಟ್ಟು 352 ಮರಣ ಪ್ರಕರಣಗಳು ವರದಿಯಾಗಿದೆ. ಕಂಟೈನ್‌ಮೆAಟ್ ವಲಯಗಳ ಸಂಖ್ಯೆ 185 ಆಗಿದೆ. ಜಿಲ್ಲೆಯಲ್ಲಿ ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.5.5 ಆಗಿದೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ತಿಳಿಸಿದ್ದಾರೆ.
ಜಿಲ್ಲೆಯಲ್ಲಿ ಗುರುವಾರ 113 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. 80 ಆರ್‌ಟಿಪಿಸಿಆರ್ ಮತ್ತು 33 ಪ್ರಕರಣಗಳು ರ‍್ಯಾಪಿಡ್ ಆಂಟಿಜನ್ ಪರೀಕ್ಷೆಯ ಮೂಲಕ ಕಂಡು ಬಂದಿದೆ.
ಮಡಿಕೇರಿ ತಾಲ್ಲೂಕಿನಲ್ಲಿ 30, ವಿರಾಜಪೇಟೆ ತಾಲೂಕಿನಲ್ಲಿ 36 ಮತ್ತು ಸೋಮವಾರಪೇಟೆ ತಾಲ್ಲೂಕಿನಲ್ಲಿ 47 ಹೊಸ ಕೋವಿಡ್-19 ಪ್ರಕರಣಗಳು ಪತ್ತೆಯಾಗಿದೆ.
ಜಿಲ್ಲೆಯಲ್ಲಿನ ಒಟ್ಟು ಕೋವಿಡ್-19 ಪ್ರಕರಣಗಳ ಸಂಖ್ಯೆ 27,549 ಆಗಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 291 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಇಲ್ಲಿಯವರೆಗೆ ಒಟ್ಟು 26,188 ಮಂದಿ ಗುಣಮುಖರಾಗಿದ್ದಾರೆ.

error: Content is protected !!