ಗ್ರಾಹಕರ ಆಯೋಗದ ಅಧ್ಯಕ್ಷ ಲೋಕೇಶ್ ಕುಮಾರ್ ರಿಂದ ಸುಂಟಿಕೊಪ್ಪದ ಚಾಲಕರಿಗೆ ನೆರವು

June 19, 2021

ಸುಂಟಿಕೊಪ್ಪ ಜೂ.19 : ಸುಂಟಿಕೊಪ್ಪ ವಾಹನ ಚಾಲಕರ ಸಂಘದ ಪದಾಧಿಕಾರಿಗಳಿಗೆ ಹಾಸನ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಎ.ಲೋಕೇಶ್ ಕುಮಾರ್ ಆಹಾರ ಸಾಮಾಗ್ರಿಗಳ ಕಿಟ್ ವಿತರಿಸಿದರು.
ಲಾಕ್‌ಡೌನ್ ನಿಂದ ಬಾಡಿಗೆ ವಾಹನಗಳ ಚಾಲಕರಿಗೆ ಬಾಡಿಗೆ ಇಲ್ಲದೆ ಅವರ ಜೀವನವು ತೀವ್ರ ಸಂಕಷ್ಟಕ್ಕೀಡಾಗಿದ್ದು ಇದ್ದರಿಂದ ಬಾಡಿಗೆ ವಾಹನಗಳ ಚಾಲಕರಿಗೆ ನೇರವಾಗುವ ದಿಸೆಯಲ್ಲಿ ಹಾಸನ ಜಿಲ್ಲಾ ಗ್ರಾಹಕರ ಆಯೋಗದ ಅಧ್ಯಕ್ಷರಾದ ಎ.ಲೋಕೇಶ್ ಕುಮಾರ್ ಸಂಘದ ಮೂಲಕ ಆಹಾರ ಕಿಟ್ ನೀಡಿದರು.
ಈ ಸಂದರ್ಭ ಗ್ರಾಮ ಪಂಚಾಯಿತಿ ಸದಸ್ಯರಾದ ಮಂಜುನಾಥ್, ವಾಹನ ಚಾಲಕರ ಸಂಘದ ಅಧ್ಯಕ್ಷ ಬಿ.ಎಂ.ಪೂವಪ್ಪ ಹಾಗೂ ಪದಾಧಿಕಾರಿಗಳು ಇದ್ದರು.

error: Content is protected !!