ತರಬೇತಿ ಭತ್ಯೆಗೆ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ

July 2, 2021

ಮಡಿಕೇರಿ ಜು.2 : ಜಿಲ್ಲಾ ಪಂಚಾಯತ್, ಸಮಗ್ರ ಗಿರಿಜನ ಯೋಜನೆಯಡಿಯಲ್ಲಿ 2021-22ನೇ ಸಾಲಿನಲ್ಲಿ ಪರಿಶಿಷ್ಠ ಪಂಗಡದ ಕಾನೂನು ಪದವೀಧರರನ್ನು ನ್ಯಾಯವಾಧಿ ವೃತ್ತಿಯ ಪ್ರಾಯೋಗಿಕ ತರಬೇತಿ ಕಾರ್ಯಕ್ರಮದಡಿ ಮಾಸಿಕ ತರಬೇತಿ ಭತ್ಯೆಗೆ ಆಯ್ಕೆ ಮಾಡಲು ಪರಿಶಿಷ್ಠ ಪಂಗಡದ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಆಗಸ್ಟ್, 14 ವರೆಗೆ ಅವಧಿ ನೀಡಲಾಗಿದ್ದು ಇಲಾಖಾ ವೆಬ್‍ಸೈಟ್ www.tw.kar.nic.in ಅರ್ಜಿ ಸಲ್ಲಿಸಿ. ಸಲ್ಲಿಸಿದ ಅರ್ಜಿ ಮತ್ತು ಅಗತ್ಯ ದಾಖಲೆಗಳೊಂದಿಗೆ ಕಚೇರಿಗೆ ಸಲ್ಲಿಸಬೇಕು.
ಅಭ್ಯರ್ಥಿಯು ಪರಿಶಿಷ್ಠ ಪಂಗಡದ ಜಾತಿಗೆ ಸೇರಿದ್ದು, ಕೊಡಗು ಜಿಲ್ಲೆಯವರಾಗಿರಬೇಕು. ವಯಸ್ಸು 40 ವರ್ಷ ಮೀರಿರಬಾರದು. ಅಭ್ಯರ್ಥಿಯ ಮತ್ತು ಪೋಷಕರ ಆದಾಯ 2.50 ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲಾದ ಕೊನೆಯ ದಿನಾಂಕಕ್ಕೆ ಮೊದಲು ಅಭ್ಯರ್ಥಿಯು ಯಾವುದೇ ಪದವಿಯ ನಂತರ ಕಾನೂನು ಪದವಿ ಅಥವಾ ಪಿ.ಯು.ಸಿ ಯ ನಂತರ 5 ವರ್ಷಗಳ ಕಾನೂನು ಪದವಿ ಪಡೆದಿರಬೇಕು. ತರಬೇತಿಗೆ ಆಯ್ಕೆಯಾದ ಅಭ್ಯರ್ಥಿಗಳನ್ನು ಕನಿಷ್ಠ 15 ವರ್ಷ ಸೇವೆ ಸಲ್ಲಿಸಿರುವ ಜಿಲ್ಲಾ ಪಬ್ಲಿಕ್ ಪ್ರಾಸಿಕ್ಯೂಟರ್/ ಸರ್ಕಾರಿ ವಕೀಲರು/ ವೃತ್ತಿಪರ ವಕೀಲರ ಬಳಿ ತರಬೇತಿಗೆ ನಿಯೋಜಿಸಲಾಗುವುದು.
ಅರ್ಜಿಯು ಅಪೂರ್ಣವಾಗಿದ್ದಲ್ಲಿ ಅಂತಹ ಅರ್ಜಿಗಳನ್ನು ಪರಿಗಣಿಸುವುದಿಲ್ಲ. ಕಾನೂನು ಪದವಿಯಲ್ಲಿ ತೇರ್ಗಡೆ ಹೊಂದಿದ 2 ವರ್ಷದೊಳಗೆ ಬಾರ್ ಕೌನ್ಸಿಲ್‍ನಲ್ಲಿ ನೊಂದಾಯಿಸಿದ ನಂತರ ಶಿಷ್ಯವೇತನ ಮತ್ತು ಎನ್ರೋಲ್‍ಮೆಂಟ್ ಫೀಯನ್ನು ನೀಡತಕ್ಕದ್ದು. ಸುಳ್ಳು ದಾಖಲಾತಿ ನೀಡುವ ಅಭ್ಯರ್ಥಿಗಳಿಗೆ ಕಾನೂನಾತ್ಮಕ ಶಿಕ್ಷೆ ಹಾಗೂ ತರಬೇತಿ ಅವಧಿಯಲ್ಲಿ ನೀಡಲಾದ ಶಿಷ್ಯವೇತನದ ಶೇ. 10 ಬಡ್ಡಿಯೊಂದಿಗೆ ವಸೂಲಿ ಮಾಡಲಾಗುವುದು.
ತರಬೆತಿಗೆ ಅಯ್ಕೆಯದ ಮಹಿಳಾ ಅಭ್ಯರ್ಥಿಗಳು ತರಬೇತಿ ಅವಧಿಯಲ್ಲಿ ಗರ್ಭಿಣಿ ಸ್ಥಿತಿಯಲ್ಲಿರುವ ಮಹಿಳಾ ಅಭ್ಯರ್ಥಿಗಳಿಗೆ 135 ದಿನಗಳ ತರಬೇತಿ ಭತ್ಯೆ ರಹಿತ ರಜೆಯನ್ನು (2 ವರ್ಷಗಳ ತರಬೇತಿಗೆ 1 ಬಾರಿ ಮಾತ್ರ) ವೈದ್ಯಕೀಯ ಪ್ರಮಾಣ ಪತ್ರ ಪಡೆದು ರಜೆ ಮಂಜೂರು ಮಾಡಿ, ತರಬೇತಿಯನ್ನು ಪೂರ್ಣಗೊಳಿಸಲು ಅವಕಾಶ ಕಲ್ಪಸಲಾಗಿದೆ.
ಹೆಚ್ಚಿನ ಮಾಹಿತಿಗೆ ದೂ.ಸಂ.08272-200500, 08274-261261, 08272-223552, 08276-281115 ಅಥವಾ ಯೋಜನಾ ಸಮನ್ವಯಾಧಿಕಾರಿಗಳು, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ, ಕೊಡಗು ಜಿಲ್ಲೆ, ಮಡಿಕೆರಿ, ತಾಲ್ಲೂಕು ಪರಿಶಿಷ್ಠ ಕಲ್ಯಾಣಾಧಿಕಾರಿ ಕಚೇರಿ ಪೊನ್ನಂಪೇಟೆ, ಸಹಾಯಕ ನಿರ್ದೇಶಕರು(ಗ್ರೇಡ್-01), ಸಮಾಜ ಕಲ್ಯಾಣ ಇಲಾಖೆ ಮಡಿಕೇರಿ, ಸಹಾಯಕ ನಿರ್ದೇಶಕರು (ಗ್ರೇಡ್-02) ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ ಇಲ್ಲಿ ಸಂಪರ್ಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಅವರು ತಿಳಿಸಿದ್ದಾರೆ.

error: Content is protected !!