ಪ್ರವಾಸಿಗರ ಕಣ್ಮನ ಸೆಳೆಯುವ ಚಿಕ್ಲಿಹೊಳೆ ಜಲಾಶಯ

July 8, 2021

ಚಿಕ್ಲಿಹೊಳೆ ಜಲಾಶಯ ದುಬಾರೆಯಿಂದ ಸುಂಟಿಕೊಪ್ಪದ ಕಡೆಗಿನ ರಸ್ತೆಯಲ್ಲಿ ಸಾಗಿದರೆ ಚಿಕ್ಲಿಹೊಳೆ ಜಲಾಶಯವನ್ನು ತಲುಪಬಹುದು. ಈ ಜಲಾಶಯವನ್ನು ಕುಶಾಲನಗರ ಹಾಗೂ ಪಿರಿಯಾಪಟ್ಟಣ ವ್ಯಾಪ್ತಿಯ ಸುಮಾರು 18 ಗ್ರಾಮಗಳು 862 ಹೆಕ್ಟೇರ್ ಪ್ರದೇಶಕ್ಕೆ ನೀರನ್ನು ಒಗದಿಸುವ ಉದ್ದೇಶದಿಂದ ಕಾವೇರಿ ನದಿಯ ಉಪನದಿಯಾದ ಚಿಕ್ಲಿಹೊಳೆಗೆ 1982 ರಲ್ಲಿ ಸುಮಾರು 12 ಕೋಟಿ ವೆಚ್ಚದಲ್ಲಿ ನಿರ್ಮಿಸಲಾಗಿದೆ. ಆದರೆ ಬ್ರಿಟಿಷರ ಕಾಲದಲ್ಲಿಯೇ ಕೃಷಿಗೆ ನೀರು ಹರಿಸಲು ಇಲ್ಲಿ ಹೊಳೆಗೆ ಅಡ್ಡಲಾಗಿ ಕಟ್ಟೆ ನಿರ್ಮಿಸಲಾಗಿತ್ತು ಎನ್ನಲಾಗಿದೆ. ಸ್ವಾತಂತ್ರ್ಯ ನಂತರ 1978 ರಲ್ಲಿಶಂಕುಸ್ಥಾಪನೆ ನೆರವೇರಿಸಿ 1982 ರಲ್ಲಿ ಜಲಾಶಯ ನಿರ್ಮಾಣವಾಯಿತು. ಒಂದೆಡೆ ಕಾಫಿ ತೋಟ ಮತ್ತೊಂದೆಡೆ ಅರಣ್ಯ ಇದರ ನಡುವಿನ ಪ್ರಕೃತಿಯ ಮಡಿಲಲ್ಲಿ ನಿರ್ಮಾಣಗೊಂಡ ಜಲಾಶಯ ಪ್ರವಾಸಿಗರನ್ನು ಸೂಜಿಗಲ್ಲಿನಂತೆ ಸೆಳೆಯುತ್ತದೆ.

ಇಲ್ಲಿಗೆ ಮಳೆಗಾಲದಲ್ಲಿ ಭೇಟಿ ನೀಡುವುದು ಅತ್ಯಂತ ಸೂಕ್ತ

error: Content is protected !!