ಚೇರಂಬಾಣೆ ಅಪಘಾತ : ಗುತ್ತಿಗೆದಾರ ಹಾಗೂ ಚಾಲಕನ ವಿರುದ್ಧ ಪ್ರಕರಣ ದಾಖಲು

July 18, 2021

ಮಡಿಕೇರಿ ಜು.18 : ಚೇರಂಬಾಣೆ ಕೊಳಗದಾಳು ಬಳಿಯ ಪಾಕ ರಸ್ತೆಯಲ್ಲಿ ತಡೆಗೋಡೆ ನಿರ್ಮಿಸುತ್ತಿದ್ದ ಸಂದರ್ಭ ಕಾಂಕ್ರೀಟ್ ಲಾರಿ ಮಗುಚಿ ಬಿದ್ದು, ಇಬ್ಬರು ಕಾರ್ಮಿಕರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಬಂಧಿಸಿದಂತೆ ಗುತ್ತಿಗೆದಾರ ಮತ್ತು ಲಾರಿ ಚಾಲಕನ ವಿರುದ್ಧ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಘಟನೆ ನಡೆದ ಬಳಿಕ ಲಾರಿ ಚಾಲಕ ಪರಾರಿಯಾಗಿದ್ದು, ಆತನ ಪತ್ತೆಗಾಗಿ ಪೊಲೀಸರು ಶೋಧ ನಡೆಸುತ್ತಿದ್ದಾರೆ.
ಗದಗ ಮೂಲದ ಸಂತೋಷ್ ಬಂಡಾರಿ(27) ಮತ್ತು ಪ್ರವೀಣ್(21) ಎಂಬವರ ಮೃತದೇಹಗಳನ್ನು ಭಾನುವಾರ ಮಡಿಕೇರಿ ಜಿಲ್ಲಾಸ್ಪತ್ರೆಯ ಶವಾಗಾರಕ್ಕೆ ಸ್ಥಳಾಂತರಿಸಿ ಮರಣೋತ್ತರ ಪರೀಕ್ಷೆ ನಡೆಸಿದ ಬಳಿಕ ವಾರಸುದಾರರಿಗೆ ಒಪ್ಪಿಸಲಾಯಿತು.

error: Content is protected !!