ಪಿಯುಸಿ ಫಲಿತಾಂಶ : 445 ವಿದ್ಯಾರ್ಥಿಗಳಿಗೆ 600ಕ್ಕೆ 600 ಅಂಕಗಳು

July 20, 2021

ಬೆಂಗಳೂರು ಜು.20 : ರಾಜ್ಯದಲ್ಲಿ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು, 6,66,497 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. 3,35,138 ವಿದ್ಯಾರ್ಥಿಗಳು ಹಾಗೂ 3,31,359 ವಿದ್ಯಾರ್ಥಿನಿಯರು ತೇರ್ಗಡೆಗೊಂಡಿದ್ದು, ಈ ಬಾರಿ ವಿದ್ಯಾರ್ಥಿಗಳೇ ಮೇಲುಗೈ ಸಾಧಿಸಿದ್ದಾರೆ.
1,95,650 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 2,52,056 ವಿದ್ಯಾರ್ಥಿಗಳು ಫಸ್ಟ್ ಕ್ಲಾಸ್ ಪಡೆದಿದ್ದರೆ ಮತ್ತು 1,47,055 ವಿದ್ಯಾರ್ಥಿಗಳು ಸೆಕೆಂಡ್ ಕ್ಲಾಸ್ ನಲ್ಲಿ ಉತ್ತೀರ್ಣ ಹೊಂದಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ ಪ್ರಥಮ ಸ್ಥಾನದಲ್ಲಿದ್ದು, 445 ವಿದ್ಯಾರ್ಥಿಗಳು 600ಕ್ಕೆ 600 ಅಂಕಗಳನ್ನು ಪಡೆದಿದ್ದಾರೆ. ಬೆಂಗಳೂರು ದಕ್ಷಿಣ 2ನೇ ಸ್ಥಾನ ಪಡೆದುಕೊಂಡಿದೆ.

error: Content is protected !!