ಉಳಿದಿರುವ ಪರೀಕ್ಷೆಗಳನ್ನು ನಡೆಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧಾರ

July 20, 2021

ಮಂಗಳೂರು ಜು.20 : ಏಪ್ರಿಲ್ 2021 ರ 1, 3, 5 ಮತ್ತು 7 ನೇ ಸೆಮಿಸ್ಟರ್ ಪದವಿ ಪರೀಕ್ಷೆಗಳನ್ನು ಆಗಸ್ಟ್ 2 ರಿಂದ ನಡೆಸಲು ಮಂಗಳೂರು ವಿಶ್ವವಿದ್ಯಾನಿಲಯ ನಿರ್ಧರಿಸಿದ್ದು, ಪರೀಕ್ಷೆಗೆ ಬೇಕಾದ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಅಧಿಸೂಚನೆಯಲ್ಲಿ ತಿಳಿಸಿದೆ.

ಕೋವಿಡ್ ಕಾರಣದಿಂದ ಪರೀಕ್ಷೆಗಳು ಮುಂದೂಡಲ್ಪಟ್ಟಿತ್ತು. ಇದೀಗ ಬಾಕಿ ಉಳಿದಿರುವ ಪರೀಕ್ಷೆಗಳನ್ನು ನಡೆಸಲಾಗುವುದು. 1 ಮತ್ತು 3 ನೇ ಸೆಮಿಸ್ಟರ್ ನ ಸ್ನಾತಕೋತ್ತರ ಪದವಿ ಪರೀಕ್ಷೆಗಳು ಆಗಸ್ಟ್ 5 ರಿಂದ ನಡೆಯಲಿದೆೆ.
ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಲಾಗಿದೆ.

error: Content is protected !!