ಶ್ರೀಮಂಗಲ : ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ

27/07/2021

ಮಡಿಕೇರಿ ಜು.27 : ಪತ್ನಿಯ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿದ ವ್ಯಕ್ತಿಯೊಬ್ಬನನ್ನು ಶ್ರೀಮಂಗಲ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಪೊಲೀಸ್ ತುರ್ತು ಸೇವಾ ಸಂಖ್ಯೆ 112 ಕ್ಕೆ ಕರೆ ಬಂದ ಹಿನ್ನೆಲೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಗಾಯಾಳು ಮಹಿಳೆಯನ್ನು ಆಸ್ಪತ್ರೆಗೆ ದಾಖಲಿಸಿದರು. ಪತ್ನಿಯನ್ನು ವಿಚಾರಣೆಗೊಳಪಡಿಸಲಾಗಿದೆ.
ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಶ್ರೀಅಯ್ಯಪ್ಪ ದೇವಾಲಯದ ಬಳಿ ಘಟನೆ ನಡೆದಿದೆ.