ಅಪಾಯದಂಚಿನಲ್ಲಿ ಚಾಮಿಯಾಲ- ದೇವಣಗೇರಿ ಸೇತುವೆ : ಡಿಸಿಗೆ ಮನವಿ

27/07/2021

ಮಡಿಕೇರಿ ಜು.27 : ಕದನೂರು ಗ್ರಾ.ಪಂ ವ್ಯಾಪ್ತಿಯ ಮಲ್ಲಮ್ಮಟ್ಟಿ ಅರಮೇರಿಯಿಂದ ಚಾಮಿಯಾಲ, ದೇವಣಗೇರಿ, ಬೈರಂಬಾಡಕ್ಕೆ ತೆರಳುವ ಮುಖ್ಯ ರಸ್ತೆಯಲ್ಲಿರುವ ಸೇತುವೆ ಬಿರುಕು ಬಿಟ್ಟಿದ್ದು, ಆತಂಕವನ್ನು ಸೃಷ್ಟಿಸಿದೆ.
ತಕ್ಷಣ ಸೇತುವೆ ದುರಸ್ತಿ ಕಾರ್ಯ ಕೈಗೊಂಡು ಮುಂದಿನ ದಿನಗಳಲ್ಲಿ ಆಗಬಹುದಾದ ಅನಾಹುತವನ್ನು ತಪ್ಪಿಸಬೇಕೆಂದು ಜಾತ್ಯತೀತ ಜನತಾದಳದ ವಿರಾಜಪೇಟೆ ತಾಲ್ಲೂಕು ಅಲ್ಪಸಂಖ್ಯಾತರ ಘಟಕದ ಜಂಟಿ ಕಾರ್ಯದರ್ಶಿ ಸೈಫುದ್ದೀನ್ ಒತ್ತಾಯಿಸಿದ್ದಾರೆ.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರಿಗೆ ಮನವಿ ಪತ್ರ ಸಲ್ಲಿಸಿರುವ ಅವರು ಗ್ರಾಮದ ಸಮಸ್ಯೆಗಳ ಬಗ್ಗೆ ವಿವರಿಸಿದರು.
ಮುಖ್ಯ ರಸ್ತೆಯಲ್ಲಿರುವ ಸೇತುವೆ ಬಿರುಕು ಬಿಟ್ಟು ಅಪಾಯದ ಅಂಚಿನಲ್ಲಿದೆ. ಅಲ್ಲದೆ ರಸ್ತೆಯಲ್ಲಿ ಬೃಹತ್ ಗುಂಡಿಗಳಿದ್ದು, ವಾಹನ ಸಂಚಾರ ದುಸ್ತರವಾಗಿದೆ. ರಸ್ತೆ ಬದಿಯಲ್ಲಿ ಸಮರ್ಪಕವಾದ ಚರಂಡಿ ವ್ಯವಸ್ಥೆ ಕೂಡ ಇಲ್ಲದೆ ರಸ್ತೆ ಜಲಾವೃತವಾಗುತ್ತಿದೆ ಎಂದು ಸೈಫುದ್ದೀನ್ ತಿಳಿಸಿದರು.
ತಕ್ಷಣ ಜಿಲ್ಲಾಧಿಕಾರಿಗಳು ಸೇತುವೆ, ಚರಂಡಿ ಮತ್ತು ರಸ್ತೆ ದುರಸ್ತಿ ಕಾರ್ಯಕ್ಕೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದರು.
ಸ್ಥಳೀಯ ಗ್ರಾಮಸ್ಥರು ಮನವಿ ಪತ್ರ ಸಲ್ಲಿಸುವ ಸಂದರ್ಭ ಹಾಜರಿದ್ದರು.