ಆನ್ ಲೈನ್ ತರಗತಿಗಳು ಸ್ಥಗಿತ : ಕೊಡಗು ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ನಿರ್ಧಾರ

30/07/2021

ಮಡಿಕೇರಿ ಜು.30 : ಕರ್ನಾಟಕ ರಾಜ್ಯ ಖಾಸಗಿ ಶಾಲೆಗಳ ಸಂಘದ ಪ್ರಧಾನ ಕಾರ್ಯದರ್ಶಿ ಶಶಿಕುಮಾರ್ ಮೇಲಿನ ಹಲ್ಲೆಯನ್ನು ಖಂಡಿಸಿ ಆನ್ ಲೈನ್ ತರಗತಿಗಳನ್ನು ಸ್ಥಗಿತಗೊಳಿಸಲು ನಿರ್ಧರಿಸಿರುವುದಾಗಿ ಕೊಡಗು ಜಿಲ್ಲಾ ಅನುದಾನ ರಹಿತ ಶಿಕ್ಷಣ ಸಂಸ್ಥೆಗಳ ಒಕ್ಕೂಟ ತಿಳಿಸಿದೆ.
ಹಲ್ಲೆ ನಡೆಸಿದವರನ್ನು ಬಂಧಿಸಿ ಕಠಿಣ ಶಿಕ್ಷೆ ವಿಧಿಸಬೇಕೆಂದು ಒತ್ತಾಯಿಸಿ ಒಕ್ಕೂಟದ ಪದಾಧಿಕಾರಿಗಳು ಜಿಲ್ಲಾಧಿಕಾರಿಗಳ ಮೂಲಕ ಇಂದು ಸರ್ಕಾರಕ್ಕೆ
ಮನವಿ ಪತ್ರ ಸಲ್ಲಿಸಿದರು.
ಒಕ್ಕೂಟದ ಅಧ್ಯಕ್ಷ ಝರುಗಣಪತಿ ಮಾತನಾಡಿ ಹಲ್ಲೆ ಮಾಡಿದವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿದರು.
ಹತ್ತಾರು ವರ್ಷಗಳಿಂದ ಖಾಸಗಿ ವಿದ್ಯಾ ಸಂಸ್ಥೆಗಳ ಧ್ವನಿಯಾಗಿರುವ ಶಶಿಕುಮಾರ್ ಮೇಲಿನ ಆಕ್ರಮಣವನ್ನು ಕೊಡಗು ಒಕ್ಕೂಟ ಬಲವಾಗಿ ಖಂಡಿಸುತ್ತದೆ. ದುಷ್ಕರ್ಮಿಗಳ ದಾಳಿ ಆತಂಕಕ್ಕೆ ಕಾರಣವಾಗಿದೆ ಎಂದರು. ಒಕ್ಕೂಟದ ಉಪಾಧ್ಯಕ್ಷ ಎಂ.ಟಿ.ದಾಮೋದರ್, ಪ್ರಧಾನ ಕಾರ್ಯದರ್ಶಿ ತಿಮ್ಮಯ್ಯ ಕೊಟ್ರಂಗಡ ಮತ್ತಿತರರು ಈ ಸಂದರ್ಭ ಹಾಜರಿದ್ದರು.