ಕೊಡಗು ಕಾಂಗ್ರೆಸ್ಸಿಗರು ಮಾತನಾಡಲಿ

31/07/2021

ಮಡಿಕೇರಿ ಜು.31 : ಈಗಾಗಲೇ ಅಪಘಾತ ಪ್ರಕರಣಕ್ಕೆ ಹಲವು ಬಣ್ಣಗಳು ಬಂದು ಆಗಿದೆ, ಈ ವಿಚಾರದಲ್ಲಿ ಜಿಲ್ಲೆಯ ಜನರಲ್ಲಿ ಅನೇಕ ಗೊಂದಲಗಳಿವೆ. ಇದನ್ನು ಬಗೆ ಹರಿಸುವ ಕಾರ್ಯವನ್ನು ವಿರೋಧ ಪಕ್ಷದ ಸ್ಥಾನದಲ್ಲಿರುವ ಸ್ಥಳೀಯ ಕಾಂಗ್ರೆಸ್ಸಿಗರು ಮಾಡಬೇಕಾಗುತ್ತದೆ. ಆದ್ದರಿಂದ ಜಿಲ್ಲೆಯ ಎಲ್ಲಾ ಕಾಂಗ್ರೆಸ್ ಘಟಕಗಳ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರು ಒಗ್ಗಟ್ಟಾಗಿ ಸಂವಿಧಾನದ ಚೌಕಟ್ಟಿನಡಿ ಸತ್ಯಾಂಶವನ್ನು ಜನರಿಗೆ ಬಹಿರಂಗವಾಗಿ ತಿಳಿಸುವ ಕಾರ್ಯವಾಗಬೇಕು ಎಂದು ಎಐಸಿಸಿ ವಕ್ತಾರ ಹಾಗೂ ಸುಪ್ರೀಂಕೋರ್ಟ್ ವಕೀಲ ಬ್ರಿಜೇಶ್ ಕಾಳಪ್ಪ ತಿಳಿಸಿದ್ದಾರೆ.

ಹೀಗೆ ಮಾಡದಿದ್ದಲ್ಲಿ ಜಾತಿ, ಧರ್ಮದ ಹೆಸರಿನಲ್ಲಿ ರಾಜಕೀಯ ಬೇಳೆ ಬೇಯಿಸಿಕೊಳ್ಳುವವರ ಸಂಖ್ಯೆ ಹೆಚ್ಚಾಗುವ ಆತಂಕ ಸೃಷ್ಟಿಯಾಗುತ್ತದೆ ಎಂದು ಅಭಿಪ್ರಾಯಪಟ್ಟಿದ್ದಾರೆ.
ಮಿಜೋರಾಂ ಮತ್ತು ಅಸ್ಸಾಂ ರಾಜ್ಯದಲ್ಲಿ ಬಿಜೆಪಿ ಆಡಳಿತವೇ ಇದ್ದು, ಇಲ್ಲಿ ಘರ್ಷಣೆ ಪ್ರಕರಣಗಳು ಹೆಚ್ಚಾಗುತ್ತಿವೆ, ಘರ್ಷಣೆಯಿಂದ ಪೊಲೀಸರು ಸಾವನ್ನಪ್ಪಿದ್ದಾರೆ. ಬಿಜೆಪಿಗೆ ಅಧಿಕಾರ ನಡೆಸಲು ಸಾಧ್ಯವಿಲ್ಲ ಎನ್ನುವುದು ಇದರಿಂದ ಸಾಬೀತಾಗಿದೆ. ಈ ರೀತಿಯ ವಿಚಾರಗಳನ್ನು ಜನರಿಗೆ ತಲುಪಿಸುವ ಕಾರ್ಯವಾಗಬೇಕಾಗಿದೆ ಎಂದು ಅವರು ಹೇಳಿದ್ದಾರೆ.