ಕರ್ನಾಟಕ ಕ್ರೀಡಾ ಪೋಷಕ ರತ್ನ ಪ್ರಶಸ್ತಿಗೆ ಅರ್ಜಿ ಆಹ್ವಾನ

31/07/2021

ಮಡಿಕೇರಿ ಜು.31 : ರಾಜ್ಯದ ಕ್ರೀಡಾಪಟುಗಳು ಕಳೆದ 5 ವರ್ಷಗಳಲ್ಲಿ ಕ್ರೀಡಾ ಕ್ಷೇತ್ರದಲ್ಲಿ ಸಾಧಿಸಿದ ಅತ್ಯತ್ತಮ ಸಾಧನೆಗಳನ್ನು ಗುರುತಿಸಿ ಕ್ರೀಡಾ ಪೋಷಕರಿಗೆ 2021-22 ನೇ ಸಾಲಿನಲ್ಲಿ ರೂ. 5 ಲಕ್ಷಗಳ ನಗದು ಬಹುಮಾನಗಳೊಂದಿಗೆ ‘’ಕರ್ನಾಟಕ ಕ್ರೀಡಾ ಪೋಷಕ ರತ್ನ’’ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು.
ಕೊಡಗು ಜಿಲ್ಲೆಯ ಆಸಕ್ತ ಕ್ರೀಡಾಪಟುಗಳು ಅರ್ಜಿ ನಮೂನೆಗಳನ್ನು ಜನರಲ್ ತಿಮ್ಮಯ್ಯ ಜಿಲ್ಲಾ ಕ್ರೀಡಾಂಗಣದ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆದು ಆಗಸ್ಟ್ 25 ರೊಳಗೆ ಪ್ರಸ್ತಾವನೆಯನ್ನು ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ 08272-228985 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕರಾದ ಜಿ.ಎಸ್.ಗುರುಸ್ವಾಮಿ ತಿಳಿಸಿದ್ದಾರೆ.