Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
9:34 PM Sunday 17-October 2021

ವಚನ ಗಾಯನ ಕಾರ್ಯಕ್ರಮ : ವಚನಕಾರರು ಕನ್ನಡದ ಬೇಸಾಯಗಾರರು : ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ

02/08/2021

ಮಡಿಕೇರಿ ಆ 2 : ವಚನಕಾರರು ಸಂಸ್ಕೃತದ ಆಚಾರ್ಯರಲ್ಲ, ಅವರು ಅಚ್ಚ ಕನ್ನಡದ ಬೇಸಾಯಗಾರರು. ವಚನದ ಭಾಷೆ ಅದು ದೇವವಾಣಿ ಅಲ್ಲ ಜನವಾಣಿ. ಎಂದು ಅರಮೇರಿ ಕಳಂಚೇರಿ ಮಠದ ಶ್ರೀ ಶ್ರೀ ಶಾಂತಮಲ್ಲಿಕಾರ್ಜುನ ಸ್ವಾಮೀಜಿ ನುಡಿದರು.

ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಏರ್ಪಡಿಸಿದ ವಚನ ಗಾಯನ ಕಾರ್ಯಕ್ರಮವನ್ನು ಗೂಗಲ್ ಮೀಟ್ ನಲ್ಲಿ ಉದ್ಘಾಟಿಸಿ ಮಾತನಾಡಿದರು.
ಈ ನಾಡು ಆಚಾರ್ಯ ಪರಂಪರೆ, ದಾಸ ಪರಂಪರೆ, ಶರಣ ಪರಂಪರೆ ಗಳನ್ನು ಜಗತ್ತಿಗೆ ಪರಿಚಯಿಸಿ ಕೊಟ್ಟಿದೆ. ಈ ಮಣ್ಣಲ್ಲಿ ಸಹಸ್ರಾರು ಮಂದಿ ಸಂತರು ಶರಣರು ಆಗಿರುವುದನ್ನು ನಾವು ಕಾಣುತ್ತೇವೆ. ತಾಯಿಯಂದಿರಿಗೆ, ಹೆಣ್ಣುಮಕ್ಕಳಿಗೆ ಒಂದು ಅಪ್ರತಿಮವಾದ ಸ್ಥಾನಮಾನವನ್ನು ಕಲ್ಪಿಸಿಕೊಟ್ಟಿದೆ. ಶರಣರು ಸ್ಥಾಪಿಸಿದ ಅನುಭವ ಮಂಟಪದಲ್ಲಿ ಸುಮಾರು 33000 ವಚನಕಾರ್ತಿಯರು ಇದ್ದರು ಎಂದರು.
ಕೊರೋನಾದ ಕ್ಲಿಷ್ಟಕರ ಸಮಯದಲ್ಲಿ ವಚನ ಗೀತಗಾಯನ ಕಾರ್ಯಕ್ರಮದ ಮೂಲಕ ಕೊಡಗು ಜಿಲ್ಲಾ ಲೇಖಕ ಮತ್ತು ಕಲಾವಿದರ ಬಳಗ ಮಾಡುತ್ತಿರುವ ಸಾಹಿತ್ಯ ಸೇವೆ ಅಭಿನಂದನಾರ್ಹ ಎಂದರು.
ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ಅಧ್ಯಕ್ಷ ಹೆಚ್.ವಿ.ಶಿವಪ್ಪ ಮಾತನಾಡಿ, ವಚನ ಸಾಹಿತ್ಯ ಹಲವಾರು ಪ್ರಕಾರಗಳಿಂದ ರಚನೆಯಾಗಿದೆ. ದುಃಖದ ಸನ್ನಿವೇಶವಿರಬಹುದು, ಶೃಂಗಾರವಿರಬಹುದು, ಸಾಮಾಜಿಕ ಬದ್ಧತೆ ಇರಬಹುದು, ಆರ್ಥಿಕ ವ್ಯವಸ್ಥೆಯ ಪರಿಕಲ್ಪನೆ ಇರಬಹುದು. ಅವೆಲ್ಲವೂ ಜನರಿಗೆ ಮನಮುಟ್ಟುವಂತೆ ಶರಣರು ವಚನಗಳಲ್ಲಿ ಹೇಳಿದ್ದಾರೆ. ವಚನಗಳು ಜನಸಾಮಾನ್ಯರಿಗೆ ಅರ್ಥವಾಗುವ ಅತಿ ಸುಲಭವಾದ ಕನ್ನಡ ಭಾಷೆಯಲ್ಲಿ ರಚಿತವಾಗಿದೆ.
ಬಳಗದ ಅಧ್ಯಕ್ಷ ಕೇಶವ ಕಾಮತ್ ಎಂ. ಪಿ. ಮಾತನಾಡುತ್ತಾ ವಚನ ಗೀತ ಗಾಯನ ಕಾರ್ಯಕ್ರಮಕ್ಕೆ ಗಾಯಕರ ಅಭೂತಪೂರ್ವ ಬೆಂಬಲ ಬಂದಿದೆ. ಹನ್ನೆರಡನೇ ಶತಮಾನಕ್ಕೂ ಹಿಂದೆ ಸಾಹಿತ್ಯ ಕ್ಲಿಷ್ಟಕರವಾದ ಸಂಸ್ಕೃತ ಭಾಷೆಯಲ್ಲಿದ್ದು, ಅದು ಜನ ಸಾಮಾನ್ಯರಿಗೆ ತಲುಪುತ್ತಲಿರಲಿಲ್ಲ. ವಚನ ಸಾಹಿತ್ಯ ಬಂದ ನಂತರ ಅವು ಸುಲಭ ಕನ್ನಡದಲ್ಲಿ ಇದ್ದು, ಎಲ್ಲರಿಗೂ ತಲುಪುವಂತಾಯಿತು. ವಚನ ಸಾಹಿತ್ಯದ ಗಾಯನದ ಜತೆಗೆ ಅದರ ಅರ್ಥ ಮತ್ತು ಅದರ ಒಳಹರವು ಅರ್ಥ ಮಾಡಿಕೊಂಡು ಅದರಲ್ಲಿರುವ ಸಕಾರಾತ್ಮಕ ವಿಚಾರಗಳನ್ನು ಜೀವನದಲ್ಲಿ ಅಳವಡಿಸಿ ಕೊಳ್ಳಬೇಕಾಗಿದೆ ಎಂದು ನುಡಿದರು.

ಕಾರ್ಯಕ್ರಮದಲ್ಲಿ 15 ಗಾಯಕರು ಶಿವ ಶರಣರು ರಚಿಸಿದ ವಿವಿದ ವಚನಗಳನ್ನು ಹಾಡಿದರು.
ಕೊಡಗು ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ತಿನ ನಿಕಟಪೂರ್ವ ಅಧ್ಯಕ್ಷ, ಬಳಗದ ಸಲಹೆಗಾರ ಟಿ.ಪಿ.ರಮೇಶ್, ಉಪಾಧ್ಯಕ್ಷರಾದ ಎಂ.ಇ.ಮೊಹಿದ್ದೀನ್, ರೇವತಿ ರಮೇಶ್, ಪ್ರಧಾನ ಕಾರ್ಯದರ್ಶಿ ವಿಲ್ಫ್ರಡ್ ಕ್ರಾಸ್ತಾ, ನಿರ್ದೇಶಕರಾದ ಬಿ.ಎ.ಷಂಶುದ್ದೀನ್, ಎಸ್.ಐ. ಮುನಿರ್ ಅಹ್ಮದ್, ,ಬಿ.ಎನ್.ಮನುಶೆಣೈ, ಕೆ.ಟಿ.ಬೇಬಿ ಮ್ಯಾಥ್ಯೂ, ಟಿ.ಜಿ.ಪ್ರೇಮಕುಮಾರ್, ಉಮೇಶ್ ಭಟ್, ಬಿ.ಆರ್.ಜೋಯಪ್ಪ, ರಂಜಿತ್ ಕೆ.ಯು, ಪ್ರತಿಮಾ ರೈ, ಸಂಗೀತ ಮತ್ತು ನೃತ್ಯ ಶಿಕ್ಷಕರುಗಳಾದ ವಿ.ಟಿ ಶ್ರೀನಿವಾಸ್, ವತ್ಸಲಾ ನಾರಾಯಣ್, ಚಂದ್ರಕಲಾ ವಿಷ್ಣುಮೂರ್ತಿ, ರಾಜೇಶ್ ಆಚಾರ್ಯ ಇತರರು ಉಪಸ್ಥಿತರಿದ್ದರು.
ಎಂಬತ್ತಕ್ಕೂ ಹೆಚ್ಚು ಜನರು ಕಾರ್ಯಕ್ರಮಕ್ಕೆ ಸೇರ್ಪಡೆಗೊಂಡಿದ್ದು 300ಕ್ಕೂ ಹೆಚ್ಚು ಗಾನಪ್ರಿಯರು ವೀಕ್ಷಿಸಿದರು.
ಬಳಗದ ನಿರ್ದೇಶಕ ಟಿ.ಜಿ.ಪ್ರೇಮ್ ಕುಮಾರ್ ನಿರೂಪಿಸಿದರು. ಕಾರ್ಯಕ್ರಮದ ಸಂಯೋಜಕ ಲೋಕನಾಥ್ ಅಮೆಚೂರ್ ಸ್ವಾಗತಿಸಿದರು. ಬಳಗದ ಉಪಾಧ್ಯಕ್ಷೆ ಪಿ.ರೇವತಿ ರಮೇಶ್ ಮತ್ತು ಕೋಶಾಧಿಕಾರಿ ಕಡ್ಲೇರ ತುಳಸಿ ಮೋಹನ್ ಅತಿಥಿಗಳ ಪರಿಚಯ ಮಾಡಿದರು.ಬಳಗದ ನಿರ್ದೇಶಕ ಕೆ.ವಿ.ಉಮೇಶ್ ವಂದಿಸಿದರು.


[