ಮಾಜಿ ಕೇಂದ್ರ ಸಚಿವ ಆಸ್ಕರ್ ಫರ್ನಾಂಡಿಸ್ ನಿಧನ

13/09/2021

ಬೆಂಗಳೂರು ಸೆ.13 : ಮಾಜಿ ಕೇಂದ್ರ ಸಚಿವ ಹಾಗೂ ಕಾಂಗ್ರೆಸ್ ಪಕ್ಷದ ಹಿರಿಯ ಮುಖಂಡ ಆಸ್ಕರ್ ಫರ್ನಾಂಡಿಸ್ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು.
ಕೆಲವು ದಿನಗಳ ಹಿಂದೆ ಮನೆಯಲ್ಲಿ ಕುಸಿದು ಬಿದ್ದಿದ್ದ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.
1980 ರಲ್ಲಿ 7 ನೇ ಲೋಕಸಭೆಗೆ ಉಡುಪಿ ಕ್ಷೇತ್ರದಿಂದ ಮೊದಲ ಬಾರಿಗೆ ಆಯ್ಕೆಯಾಗಿದ್ದ ಆಸ್ಕರ್ ಫರ್ನಾಂಡಿಸ್ 1984, 1989, 1991, 1996 ರಲ್ಲಿ ಕೂಡ ಗೆಲುವು ಸಾಧಿಸಿದ್ದರು.
ಮಾ.27, 1941 ರಲ್ಲಿ ಜನಿಸಿದ್ದ ಆಸ್ಕರ್ ಫರ್ನಾಂಡಿಸ್, ರಾಜಕೀಯವಾಗಿ ಉನ್ನತ ಹುದ್ದೆಗಳನ್ನು ನಿಭಾಯಿಸಿ ಅನುಭವವುಳ್ಳ ನಾಯಕರಾಗಿದ್ದರು.