ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ಉತ್ತೀರ್ಣರಾದವರು ಕೇವಲ…

14/09/2021

ಬೆಂಗಳೂರು ಸೆ.14 : 2021ನೇ ಸಾಲಿನ ಶಿಕ್ಷಕರ ಅರ್ಹತಾ ಪರೀಕ್ಷೆಯಲ್ಲಿ ರಾಜ್ಯದಲ್ಲಿ ಕೇವಲ ಶೇ.19.43 ರಷ್ಟು ಅಭ್ಯರ್ಥಿಗಳು ಉತ್ತೀರ್ಣರಾಗಿದ್ದಾರೆ.
ಸರ್ಕಾರಿ ಶಾಲೆಗಳಲ್ಲಿ ಸುಮಾರು 23,025 ರಷ್ಟು ಹುದ್ದೆಗಳು ಖಾಲಿ ಇದ್ದು, ಈಗ ಪ್ರಕಟಗೊಂಡಿರುವ ಫಲಿತಾಂಶ ಶಿಕ್ಷಕ ಹುದ್ದೆ ಆಕಾಂಕ್ಷಿಗಳಲ್ಲಿ ತೀವ್ರ ನಿರಾಸೆ ಮೂಡಿಸಿದೆ.
ಹಿರಿಯ ಪ್ರಾಥಮಿಕ ಶಾಲೆ ಶಿಕ್ಷಕರ ಅರ್ಹತಾ ಪ್ರವೇಶ ಪರೀಕ್ಷೆಗೆ ನೋಂದಣಿ ಮಾಡಿಕೊಂಡಿದ್ದ 1,49,552 ಅಭ್ಯರ್ಥಿಗಳ ಪೈಕಿ 1,38,710 ಅಭ್ಯರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾಗಿದ್ದರು. ಇದರಲ್ಲಿ ಸಾಮಾನ್ಯ ವರ್ಗಕ್ಕೆ ಸೇರಿದ 19,523 ಅಭ್ಯರ್ಥಿಗಳು ಶೇ.60ಕ್ಕಿಂತ ಹೆಚ್ಚು ಅಂಕಗಳನ್ನು ಗಳಿಸಿದರೆ, ಪರಿಶಿಷ್ಟ ಜಾತಿ, ಪಂಗಡಕ್ಕೆ ಸೇರಿದ 6,591 ಅಭ್ಯರ್ಥಿಗಳು ಶೇ.55-60ರ ನಡುವೆ ಅಂಕಗಳನ್ನು ಪಡೆದಿದ್ದಾರೆ.