ಅರೆಭಾಷೆ ಗೌಡ ಅಧ್ಯಯನ ಪೀಠ ಪ್ರಸ್ತಾವನೆ ಕೈಬಿಡಲಾಗಿದೆ

14/09/2021

ಮಡಿಕೇರಿ ಸೆ.14 : ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಅರೆಭಾಷೆ ಗೌಡ ಜನಾಂಗದ ಅಧ್ಯಯನ ಪೀಠ ಪ್ರಾರಂಭಿಸುವ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ ನಾರಾಯಣ ತಿಳಿಸಿದ್ದಾರೆ.
ವಿಧಾನ ಪರಿಷತ್ ನಲ್ಲಿ ಎಂಎಲ್‌ಸಿ ಶಾಂತೆಯoಡ ವೀಣಾಅಚ್ಚಯ್ಯ ಅವರು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು ಪ್ರಸ್ತಾವನೆ ಕೈಬಿಟ್ಟ ಬಗ್ಗೆ ಸ್ಪಷ್ಟೀಕರಣ ನೀಡಿದ್ದಾರೆ.
ರಾಜ್ಯದಲ್ಲಿ ಕೋಬಿಡ್-19 ಸೋಂಕಿನಿoದ ಉಂಟಾದ ಪರಿಸ್ಥಿತಿಯನ್ನು ನಿಭಾಯಿಸಿ ಆರ್ಥಿಕ ಸ್ಥಿತಿಯನ್ನು ಸುಸ್ಥಿತಿಗೆ ತರುವ ಸಂಪನ್ಮೂಲವನ್ನು ಕೋಢೀಕರಿಸುವುದು ಅಗತ್ಯವಾಗಿದೆ. ಇದಕ್ಕಾಗಿ ಸರ್ಕಾರ ಮಿತವ್ಯಯ ಪಾಲಿಸುವ ಅವಶ್ಯಕತೆ ಇರುವ ಕಾರಣ ಮಂಗಳೂರು ವಿಶ್ವವಿದ್ಯಾಲಯದಲ್ಲಿ ಪ್ರಸಕ್ತ ಸಾಲಿನಲ್ಲಿ ಅರೆಭಾಷೆ ಗೌಡ ಜನಾಂಗದ ಅಧ್ಯಯನ ಪೀಠ ಪ್ರಾರಂಭಿಸುವ ಪ್ರಸ್ತಾವನೆಯನ್ನು ಕೈಬಿಡಲಾಗಿದೆ ಎಂದು ಡಾ.ಅಶ್ವತ್ ನಾರಾಯಣ ಸ್ಪಷ್ಟಪಡಿಸಿದ್ದಾರೆ.