ಸ್ಪರ್ಧಾತ್ಮಕ ಪರೀಕ್ಷೆಗೆ ಆನ್‍ಲೈನ್ ತರಬೇತಿ : ಅರ್ಜಿ ಆಹ್ವಾನ

14/09/2021

ಮಡಿಕೇರಿ ಸೆ.14 : ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್-ಲೈನ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ(2021-22) ಪ್ರಥಮ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ದ್ವಿತೀಯ ಪಿ.ಯು.ಸಿ ಮುಕ್ತಾಯದವರೆಗೂ 24 ತಿಂಗಳು ಅಥವಾ 2023 ರ ಏಪ್ರಿಲ್/ ಮೇ ಮಾಹೆಯಲ್ಲಿ ನಡೆಯಲಿರುವ ಜೆಇಇ/ ನೀಟ್ ಪ್ರವೇಶ ಪರೀಕ್ಷೆಯವರೆಗೂ ಹಾಗೂ ದ್ವಿತೀಯ ಪಿ.ಯು.ಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ 10 ತಿಂಗಳು ಅಥವಾ 2022 ರ ಏಪ್ರಿಲ್/ಮೇ ಮಾಹೆಯಲ್ಲಿ ನಡೆಯಲಿರುವ ಜೆಇಇ/ ನೀಟ್ ಪ್ರವೇಶ ಪರೀಕ್ಷೆಯವರೆಗೂ ಆನ್‍ಲೈನ್ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಸೆಪ್ಟೆಂಬರ್, 18 ರ ಸಂಜೆ 5.30 ರೊಳಗೆ ಸಲ್ಲಿಸಲು ಅವಕಾಶವಿರುತ್ತದೆ.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ತಿಳಿಸಿದ್ದಾರೆ.