ಪ್ರತಿಷ್ಠಿತ ಶಾಲೆಗಳಿಗೆ ದಾಖಲು : ಅರ್ಜಿ ಆಹ್ವಾನ

14/09/2021

ಮಡಿಕೇರಿ ಸೆ.14 : ಪ್ರಸಕ್ತ(2021-22) ಸಾಲಿಗೆ ಸಮಾಜ ಕಲ್ಯಾಣ ಇಲಾಖಾ ವತಿಯಿಂದ ಉತ್ತಮ ಗುಣಮಟ್ಟದ ಶಿಕ್ಷಣ ನೀಡಲು ಪರಿಶಿಷ್ಟ ಜಾತಿ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಿಗೆ ದಾಖಲಿಸಲು ಅರ್ಜಿ ಆಹ್ವಾನಿಸಲಾಗಿದೆ.
5 ನೇ ತರಗತಿಯಲ್ಲಿ ಶೇ.60 ಕ್ಕಿಂತ ಹೆಚ್ಚು ಅಂಕ ಗಳಿಸಿರಬೇಕು. ಆಯ್ಕೆಯಾದ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳಿಗೆ ಜಿಲ್ಲೆಯ ಪ್ರತಿಷ್ಠಿತ ಶಾಲೆಯಲ್ಲಿ 6 ನೇ ತರಗತಿಗೆ ಪ್ರವೇಶ ಅವಕಾಶವನ್ನು ಕಲ್ಪಿಸಲಾಗುವುದು. ವಿದ್ಯಾರ್ಥಿಗಳಿಂದ ಜಾತಿ ದೃಢೀಕರಣ ಪ್ರಮಾಣ ಪತ್ರ, ಆದಾಯ ದೃಢೀಕರಣ ಪತ್ರ ಹಾಗೂ ಮುಖ್ಯೋಪಾಧ್ಯಾಯರಿಂದ ದೃಢೀಕೃತಗೊಂಡ ಅಂಕ ಪಟ್ಟಿಯನ್ನು ಸಲ್ಲಿಸುವುದು. ಪರಿಶಿಷ್ಟ ಜಾತಿ ವಿದ್ಯಾರ್ಥಿಗಳ ಪೋಷಕರ ಆದಾಯ ಮಿತಿ ರೂ.2 ಲಕ್ಷ ಒಳಗೆ ಇರಬೇಕು (ಈ ಬಗ್ಗೆ ತಹಶೀಲ್ದಾರ ಅವರಿಂದ ಪಡೆದ ಆದಾಯ ಪ್ರಮಾಣ ಪತ್ರ ಸಲ್ಲಿಸುವುದು).
ಅರ್ಜಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-08274-249476 ನ್ನು ಸಂಪರ್ಕಿಸಬಹುದು ಎಂದು ಮಡಿಕೇರಿ ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.