ಕರಿಕೆ ಗೇಟ್ : ಅಧಿಕಾರಿಗಳಿಗೆ ಎಸ್‌ಪಿ ಕಟ್ಟುನಿಟ್ಟಿನ ಸೂಚನೆ

14/09/2021

ಮಡಿಕೇರಿ ಸೆ.14 : ಕೋವಿಡ್ ಮತ್ತು ನಿಫಾ ವೈರಸ್ ನ ಆತಂಕದಲ್ಲಿರುವ ಕೇರಳದ ಗಡಿಯಲ್ಲಿ ಕೊಡಗು ಜಿಲ್ಲಾಡಳಿತ ತೀವ್ರ ನಿಗಾ ವಹಿಸಿದೆ.
ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕ್ಷಮಾಮಿಶ್ರ ಅವರು ಇಂದು ಗಡಿ ಭಾಗದ ಕರಿಕೆ ಚೆಕ್ ಪೋಸ್ಟ್ ಗೆ ಭೇಟಿ ನೀಡಿ ಪರಿಶೀಲಿಸಿದರು. ಕೇರಳ ರಾಜ್ಯದಿಂದ ಬರುವವರ ಮೇಲೆ ತೀವ್ರ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದರು.
ಕರ್ತವ್ಯದಲ್ಲಿದ್ದ ಪೊಲೀಸ್, ರೆವಿನ್ಯೂ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳಿಂದ ಚೆಕ್ ಪೋಸ್ಟ್ ಮೂಲಕ ಸಂಚರಿಸುವ ವಾಹನಗಳ ತಪಾಸಣೆ ನಡೆಸುವ ಕಾರ್ಯದ ಬಗ್ಗೆ ಮಾಹಿತಿ ಪಡೆದರು.