Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:31 AM Tuesday 26-October 2021

ವಸತಿ ಯೋಜನೆ : ಸಮರ್ಪಕ ಅನುಷ್ಠಾನಕ್ಕೆ ಜಿಲ್ಲಾಧಿಕಾರಿ ಸೂಚನೆ

15/09/2021

ಮಡಿಕೇರಿ ಸೆ.15 : ವಸತಿ ಯೋಜನೆಯಡಿ ನಿವೇಶನ ರಹಿತರಿಗೆ ಮನೆ ನಿರ್ಮಾಣಕ್ಕಾಗಿ ಗುರುತಿಸಿ ಕಾಯ್ದಿರಿಸಲ್ಪಟ್ಟ ಸ್ಥಳದಲ್ಲಿ ಶೀಘ್ರ ನಿವೇಶನ ರಹಿತರಿಗೆ ದೊರಕುವಂತೆ ಮಾಡಬೇಕು ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಅವರು ಸೂಚಿಸಿದರು.
ವಸತಿ ಯೋಜನೆಯಡಿ ನಿವೇಶನ ರಹಿತರಿಗೆ ಮನೆ ನಿರ್ಮಾಣಕ್ಕಾಗಿ ಮತ್ತು ಯೋಜನೆಯ ಪ್ರಗತಿಯ ಬಗ್ಗೆ ಸಂಬಂದಪಟ್ಟ ಅಧಿಕಾರಿಗಳಿಂದ ಮಾಹಿತಿ ಪಡೆದು ಮಾತನಾಡಿದ ಜಿಲ್ಲಾಧಿಕಾರಿ ಅವರು ಜಿಲ್ಲೆಯಲ್ಲಿ ಮಳೆ ಹಾನಿ, ಪ್ರಾಕೃತಿಕ ವಿಕೋಪದಿಂದ ಮನೆ ಕಳೆದುಕೊಂಡವರಿಗೆ ವಸತಿ ಯೋಜನೆಯಡಿ ಸೌಲಭ್ಯ ನೀಡುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಸರ್ಕಾರಿ ಜಾಗಗಳು ಎಲ್ಲೆಲ್ಲಿ ಒತ್ತುವರಿಯಾಗಿದೆ ಎಂಬುದನ್ನು ಗುರುತಿಸಿ ಶೀಘ್ರವೇ ಹೋಬಳಿವಾರು ನಿವೇಶನ ರಹಿತರಿಗೆ ನಿವೇಶನ ಲಭ್ಯವಾಗುವಂತೆ ಮಾಡಬೇಕು ಎಂದು ಸೂಚಿಸಿದರು.
ಎರಡು ವಾರಗಳ ಒಳಗೆ ಒತ್ತುವರಿಯಾದ ಜಾಗಗಳನ್ನು ಮತ್ತೊಮ್ಮೆ ಸರ್ವೇ ಮಾಡಿ, ಒತ್ತುವರಿಯಾದ ಜಾಗಗಳಿಂದ ಯಾವುದೇ ರೀತಿಯ ತೊಂದರೆ ಕಂಡುಬಂದಲ್ಲಿ ಜಿ.ಪಂ.ಸಿಇಒ ಅವರ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ತಹಶೀಲ್ದಾರ್, ತಾ.ಪಂ.ಇಒಗಳು ಸಮಸ್ಯೆಗೆ ಪರಿಹಾರ ಕಂಡುಕೊಳ್ಳಬೇಕೆಂದು ಮಾರ್ಗದರ್ಶನ ನೀಡಿದರು.
ಜಿ.ಪಂ ಸಿಇಒ ಭನ್ವರ್ ಸಿಂಗ್ ಮೀನಾ, ಅಪರ ಜಿಲ್ಲಾಧಿಕಾರಿ ರಾಜು ಮೊಗವೀರ, ಭೂ ದಾಖಲೆಗಳ ಉಪ ನಿರ್ದೇಶಕರಾದ ಪಿ.ಶ್ರೀನಿವಾಸ್, ಜಿ.ಪಂ.ಯೋಜನಾ ನಿರ್ದೇಶಕರಾ ಶ್ರೀಕಂಠಮೂರ್ತಿ ತಹಶೀಲ್ದಾರ್ ಮಹೇಶ್, ಗೋವಿಂದರಾಜು, ಇತರರು ಇದ್ದರು.