ಸಾಲ ಸೌಲಭ್ಯಕ್ಕೆ ಅರ್ಜಿ ಅರ್ಜಿ ಆಹ್ವಾನ

15/09/2021

ಮಡಿಕೇರಿ ಸೆ.15 : ಪ್ರಸಕ್ತ(2021-22) ಸಾಲಿನಲ್ಲಿ ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದಿಂದ ಪರಿಶಿಷ್ಟ ಜಾತಿಯ ಭೋವಿ ಜನಾಂಗದ ಆರ್ಥಿಕ ಅಭಿವೃದ್ಧಿಗೆ ವಿವಿಧ ಯೋಜನೆಗಳಾದ ಸ್ವಯಂ ಉದ್ಯೋಗ ನೇರಸಾಲ, ಉದ್ಯಮ ಶೀಲತಾ ಅಭಿವೃದ್ಧಿ ಯೋಜನೆ ಹಾಗೂ ಮೈಕ್ರೋ ಕ್ರೆಡಿಟ್(ಪ್ರೇರಣಾ ಮಹಿಳಾ ಸ್ವ-ಸಹಾಯ ಗುಂಪುಗಳಿಗೆ) ಯೋಜನೆ(ನೋಂದಾಯಿತ ಸ್ವ-ಸಹಾಯ ಮಹಿಳಾ ಸಂಘಗಳು), ಭೂ ಒಡೆತನ ಯೋಜನೆ ಹಾಗೂ ಗಂಗಾ ಕಲ್ಯಾಣ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ಫಲಾಪೇಕ್ಷಿಗಳು ಆನ್‍ಲೈನ್ ಮೂಲಕ ಅರ್ಜಿ ಮತ್ತು ದಾಖಲಾತಿಗಳನ್ನು ನಿಗಮದ ವೆಬ್‍ಸೈಟ್    https://kbdc.karnataka.gov.in ಮೂಲಕ ಅಪ್‍ಲೋಡ್ ಮಾಡಿ ಅರ್ಜಿಗಳನ್ನು ಅಕ್ಟೋಬರ್, 14 ರೊಳಗೆ ನಿಗಮದ ಜಿಲ್ಲಾ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗೆ ಜಿಲ್ಲಾ ವ್ಯವಸ್ಥಾಪಕರು, ಕರ್ನಾಟಕ ಭೋವಿ ಅಭಿವೃದ್ಧಿ ನಿಗಮ, ಮಡಿಕೇರಿ, ಕೊಡಗು ಜಿಲ್ಲೆ-571201 ದೂ.ಸಂ.08272-228857 ನ್ನು ಸಂಪರ್ಕಿಸಬಹುದು ಎಂದು ಕರ್ನಾಟಕ ಭೋವಿ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ.