ಶೌರ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

15/09/2021

ಮಡಿಕೇರಿ ಸೆ.15 : ಪ್ರಸಕ್ತ(2021-22) ಸಾಲಿನಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್‍ಫೇರ್ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಐಸಿಸಿಡಬ್ಲ್ಯು ನ್ಯಾಷನಲ್ ಬ್ರೇವರಿ ಅವಾಡ್ರ್ಸ್ ಫಾರ್ ಚಿಲ್ಡ್ರನ್(2021) ಪ್ರಶಸ್ತಿ ಪ್ರಧಾನ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.
2021-22 ನೇ ಸಾಲಿನಲ್ಲಿ ಇಂಡಿಯನ್ ಕೌನ್ಸಿಲ್ ಫಾರ್ ಚೈಲ್ಡ್ ವೆಲ್‍ಫೇರ್ ವತಿಯಿಂದ 6 ರಿಂದ 18 ವರ್ಷದೊಳಗಿನ ಮಕ್ಕಳು ತಮ್ಮ ಪ್ರಾಣದ ಹಂಗನ್ನು ತೊರೆದು ಹಾಗೂ ಸಮಯ ಪ್ರಜ್ಞೆಯಿಂದ ಇತರರ ಪ್ರಾಣ ರಕ್ಷಣೆಗಾಗಿ ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಶೌರ್ಯ ಪ್ರಶಸ್ತಿ ಪ್ರಧಾನ ಮಾಡಲಾಗುತ್ತಿದೆ. ಈ ಪ್ರಶಸ್ತಿಗೆ ಅರ್ಜಿ ಸಲ್ಲಿಸಲು ಪ್ರಕರಣವು ಜುಲೈ 2020 ರಿಂದ 2021 ರ ಸೆಪ್ಟೆಂಬರ್ 30 ರೊಳಗೆ ನಡೆದಿರಬೇಕು. 2003 ರ ಆಗಸ್ಟ್, 01 ರಂದು ಹಾಗೂ ನಂತರ ಜನಿಸಿದ ಮಕ್ಕಳು ಈ ಪ್ರಶಸ್ತಿಗೆ ಅರ್ಹರಾಗಿರುತ್ತಾರೆ. ಧೈರ್ಯ ಸಾಹಸ ಪ್ರದರ್ಶಿಸಿದ ಮಕ್ಕಳಿಗೆ ಪ್ರಶಸ್ತಿ ನೀಡಲು ಅವರ ಸಾಧನೆಯ ಬಗ್ಗೆ ದಿನಪತ್ರಿಕೆಗಳಲ್ಲಿ ವರದಿಯಾಗಿರಬೇಕು. ಅಥವಾ ಸಂಬಂಧಪಟ್ಟ ಕ್ಷೇತ್ರದ ತಜ್ಞರಿಂದ ಪರೀಕ್ಷಿಸಿರಬೇಕು. ಮಕ್ಕಳ ವಯಸ್ಸಿನ ಪ್ರಮಾಣ ಪತ್ರವನ್ನು ಪತ್ರಾಂಕಿತ ಅಧಿಕಾರಿಗಳಿಂದ ದೃಢೀಕರಿಸಿ ಸಲ್ಲಿಸಬೇಕು. ಪ್ರಕರಣ ನಡೆದಿರುವ ಬಗ್ಗೆ ಪೊಲೀಸ್ ಇಲಾಖೆಯಲ್ಲಿ ಎಫ್‍ಐಆರ್ ದಾಖಲಾಗಿರಬೇಕು. ಪ್ರಶಸ್ತಿಯು ಪದಕ(ಚಿನ್ನ, ಬೆಳ್ಳಿ ಪದಕ), ಪ್ರಶಸ್ತಿ ಪತ್ರ ಹಾಗೂ ನಗದು ಬಹುಮಾನ ಒಳಗೊಂಡಿರುತ್ತದೆ.
ಐಸಿಸಿಡಬ್ಲ್ಯು ಭಾರತ್ ಅವಾರ್ಡ್ ರೂ.1 ಲಕ್ಷ, ಐಸಿಸಿಡಬ್ಲ್ಯು ದ್ರುವ ಅವಾರ್ಡ್, ಐಸಿಸಿಡಬ್ಲ್ಯು ಮಾರ್ಕಾಂಡೇಯ ಅವಾರ್ಡ್, ಐಸಿಸಿಡಬ್ಲ್ಯು ಶ್ರವಣ ಅವಾರ್ಡ್, ಐಸಿಸಿಡಬ್ಲ್ಯು ಪ್ರಹ್ಲಾದ್ ಅವಾರ್ಡ್, ಐಸಿಸಿಡಬ್ಲ್ಯು ಏಕಲವ್ಯ ಅವಾರ್ಡ್, ಐಸಿಸಿಡಬ್ಲ್ಯು ಅಭಿಮನ್ಯು ಅವಾರ್ಡ್ ತಲಾ ರೂ.75 ಸಾವಿರಗಳು ಮತ್ತು ಸಾಮಾನ್ಯ ಅವಾರ್ಡ್ ರೂ.40 ಸಾವಿರ ಆಗಿರುತ್ತದೆ.
2021-22 ನೇ ಸಾಲಿನ ಪ್ರಶಸ್ತಿಗೆ ನಿಗದಿಪಡಿಸಿರುವ ಇಂಗ್ಲೀಷ್ ಆವೃತ್ತಿಯ ಅರ್ಜಿ ನಮೂನೆಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಇವರಿಂದ ಪಡೆದು ಅಥವಾ ವೆಬ್‍ಸೈಟ್: www.iccw.co.in  ನಿಂದ ಪಡೆದು ಭರ್ತಿ ಮಾಡಿದ ಅರ್ಜಿಗಳನ್ನು ಉಪ ನಿರ್ದೇಶಕರು, ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಚೈನ್‍ಗೇಟ್ ಹತ್ತಿರ, ಮೈಸೂರು ರಸ್ತೆ, ಮಡಿಕೇರಿ, ಕೊಡಗು ಜಿಲ್ಲೆ ದೂ.ಸಂ. 08272-298379 ಇವರಿಗೆ ಅಕ್ಟೋಬರ್, 15 ರೊಳಗೆ ಸಲ್ಲಿಸಬೇಕು ಎಂದು ಮಹಿಳೆಯರ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ತಿಳಿಸಿದ್ದಾರೆ.