Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
8:48 PM Sunday 17-October 2021

ಹುದಿಕೇರಿ : ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ : ಆರೋಪಿಗೆ ಜೈಲು ಶಿಕ್ಷೆ

21/09/2021

ಮಡಿಕೇರಿ ಸೆ.21 : ಮದುವೆಯಾಗುವುದಾಗಿ ನಂಬಿಸಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪಿಗೆ ವಿರಾಜಪೇಟೆ ನ್ಯಾಯಾಲಯ ಜೈಲು ಶಿಕ್ಷೆ ವಿಧಿಸಿದೆ.
ಪರಿಶಿಷ್ಟ ಪಂಗಡದ ಅಪ್ರಾಪ್ತ ಬಾಲಕಿಯನ್ನು ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರ ಮಾಡಿದ್ದ ಅಸ್ಸಾಂ ರಾಜ್ಯದ ಸುಹರ್ ಅಲಿ (ಚಹರ್ ಅಲಿ) (31) ಎಂಬಾತನೇ ಶಿಕ್ಷೆಗೆ ಗುರಿಯಾದ ವ್ಯಕ್ತಿ.
ಅಸ್ಸಾಂ ರಾಜ್ಯದಿಂದ ಕೊಡಗಿನ ಹುದಿಕೇರಿ ಹೈಸೊಡ್ಲೂರು ಗ್ರಾಮಕ್ಕೆ ಬಂದಿದ್ದ ಈತ ಕಾಫಿ ತೋಟದಲ್ಲಿ ಕೂಲಿ ಕಾರ್ಮಿಕನಾಗಿ ಕಾರ್ಯ ನಿರ್ವಹಿಸುತ್ತಿದ್ದ. 2016 ನೇ ಇಸವಿಯಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪದಡಿ ಸುಹರ್ ಅಲಿ ವಿರುದ್ಧ ಶ್ರೀಮಂಗಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ವಿರಾಜಪೇಟೆಯ ಅಂದಿನ ಪೊಲೀಸ್ ಉಪ ಅಧೀಕ್ಷಕ ನಾಗಪ್ಪ ಅವರು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಾಣಾ ಪತ್ರ ಸಲ್ಲಿಸಿದ್ದರು. ವಿರಾಜಪೇಟೆಯ 2 ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಆರೋಪಿ ಸುಹರ್ ಅಲಿ ವಿರುದ್ಧ ಆರೋಪ ಸಾಬೀತಾದ ಕಾರಣ ನ್ಯಾಯಾಧೀಶ ಎಸ್.ಆರ್.ದಿಂಡಲ್ ಕೊಪ್ಪ ಅವರು ಶಿಕ್ಷೆ ವಿಧಿಸಿದರು.

ಕಲಂ 363 ಐಪಿಸಿ ಯಡಿಯಲ್ಲಿ 5 ವರ್ಷಗಳ ಸಾದಾ ಜೈಲು ಶಿಕ್ಷೆ 5 ಸಾವಿರ ದಂಡ, ದಂಡವನ್ನು ಪಾವತಿ ಮಾಡಲು ತಪ್ಪಿದ್ದಲ್ಲಿ 6 ತಿಂಗಳ ಸಾದಾ ಜೈಲು ಶಿಕ್ಷೆ. ಕಲಂ 376 ಐಪಿಸಿ ಯಡಿಯಲ್ಲಿ 10 ವರ್ಷ ಕಠಿಣ ಸಜೆ ಮತ್ತು ರೂ. 20 ಸಾವಿರ ದಂಡ, ದಂಡವನ್ನು ಪಾವತಿ ಮಾಡಲು ತಪ್ಪಿದ್ದಲ್ಲಿ 2 ವರ್ಷ ಸಾದಾ ಜೈಲು ಶಿಕ್ಷೆ. ಕಲಂ 6 ಪೋಕ್ಸೋ ಕಾಯಿದೆಯಡಿ 10 ವರ್ಷ ಕಠಿಣ ಸಜೆ ಮತ್ತು 20 ಸಾವಿರ ದಂಡ, ದಂಡವನ್ನು ಪಾವತಿ ಮಾಡಲು ತಪ್ಪಿದ್ದಲ್ಲಿ 1 ವರ್ಷ ಸಾದಾ ಜೈಲು ಶಿಕ್ಷೆ. ಎಸ್.ಸಿ/ಎಸ್.ಟಿ ಕಾಯಿದೆಯಡಿಯಲ್ಲಿ 1 ವರ್ಷ ಸಾದಾ ಸಜೆ ನೀಡಿದ್ದಾರೆ.
ಸರ್ಕಾರದ ಪರವಾಗಿ ಅಭಿಯೋಜಕ ಯಾಸೀನ್ ಅಹಮದ್ ವಾದ ಮಂಡಿಸಿದರು.