Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
8:29 PM Sunday 17-October 2021

ಸಿರಿ ಧಾನ್ಯಗಳ ರಫ್ತಿಗೆ ಆದ್ಯತೆಯ ಅಗತ್ಯವಿದೆ: ಸಚಿವೆ ಶೋಭಾ ಕರಂದ್ಲಾಜೆ

22/09/2021

ಬೆಂಗಳೂರು: 2023ರ ವೇಳೆಗೆ ಕರ್ನಾಟಕದಿಂದ ಸಿರಿಧಾನ್ಯಗಳ ಉತ್ಪಾದನೆ ಮತ್ತು ರಫ್ತು ಪ್ರಮಾಣ ಹೆಚ್ಚಬೇಕು. ಕೃಷಿ ಕ್ಷೇತ್ರದ ಪ್ರಗತಿ ಮತ್ತು ರೈತ ಸಮುದಾಯದ ಕಲ್ಯಾಣಕ್ಕಾಗಿ ಕರ್ನಾಟಕ ಕೈಗೊಳ್ಳುವ ಕ್ರಮಗಳಿಗೆ ಅಗತ್ಯ ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಖಾತೆ ರಾಜ್ಯ ಸಚಿವೆ ಶೋಭಾ ಕರಂದ್ಲಾಜೆ ಅವರು ಮಂಗಳವಾರ ಹೇಳಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವ ಆಚರಣೆಯ ಭಾಗವಾಗಿ ಕೇಂದ್ರ ವಾಣಿಜ್ಯ ಇಲಾಖೆಯು ಕರ್ನಾಟಕ ಸರ್ಕಾರದ ಸಹಯೋಗದೊಂದಿಗೆ ನಗರ ‘ದಿ ಲಲಿತ್‌ ಅಶೋಕ್‌’ ಹೋಟೆಲ್‌ನಲ್ಲಿ ನಿನ್ನೆ ಆಯೋಜಿಸಿದ್ದ “ವಾಣಿಜ್ಯ ಉತ್ಸವ” ಉದ್ಘಾಟಿಸಿ ಅವರು ಮಾತನಾಡಿದ್ದಾರೆ.

2023ನೇ ವರ್ಷವನ್ನು ಅಂತಾರಾಷ್ಟ್ರೀಯ ಸಿರಿಧಾನ್ಯ ವರ್ಷ ಎಂದು ವಿಶ್ವಸಂಸ್ಥೆ ಘೋಷಿಸಿದೆ. ಕರ್ನಾಟಕ ಸಿರಿಧಾನ್ಯಗಳ ತವರೂರು. ಜೋಳ, ರಾಗಿ ನಮ್ಮ ಪ್ರಮುಖ ಆಹಾರ. ಇವುಗಳ ಉತ್ಪಾದನೆ ಹಾಗೂ ರಫ್ತು ಹೆಚ್ಚಬೇಕಾಗಿದೆ. ಕೃಷಿ ಕ್ಷೇತ್ರದ ಪ್ರಗತಿ ಮತ್ತು ನಮ್ಮ ರೈತ ಸಮುದಾಯದ ಕಲ್ಯಾಣಕ್ಕಾಗಿ ಕರ್ನಾಟಕ ಕೈಗೊಳ್ಳುವ ಕ್ರಮಗಳಿಗೆ ಅಗತ್ಯ ಸಹಕಾರ ನೀಡಲು ಕೇಂದ್ರ ಸರ್ಕಾರ ಸಿದ್ಧ ಎಂದು ಹೇಳಿದ್ದಾರೆ.