Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:29 PM Tuesday 26-October 2021

ಮಡಿಕೇರಿ ಲಯನ್ಸ್ ಸಂಸ್ಥೆಯಿಂದ ವಲಯ ಸಮಿತಿ ಸಭೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ

22/09/2021

ಮಡಿಕೇರಿ ಸೆ.22 : ಮಡಿಕೇರಿ ಲಯನ್ಸ್ ಸಂಸ್ಥೆ ವತಿಯಿಂದ ಜಿಲ್ಲಾ ರಾಜ್ಯಪಾಲರ ಪ್ರಥಮ ವಲಯ ಸಮಿತಿ ಸಭೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಿತು.
ನಗರದ ಲಯನ್ಸ್ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದ ಲಯನ್ಸ್ ವಲಯ 2ರ ಅಧ್ಯಕ್ಷ ಲಯನ್ ಗ್ಲೆನ್.ನಿಶಾಂತ್ ಮೆನೆಜಸ್ ಮುಂದಿನ ಯೋಜನೆಗಳು ಮತ್ತು ಲಯನ್ಸ್ ಧ್ಯೇಯೋದ್ದೇಶಗಳ ಕುರಿತು ಮಾಹಿತಿ ನೀಡಿದರು. ಸಂಸ್ಥೆಯ ಕಾರ್ಯದರ್ಶಿ ಲಯನ್ ಪಿ.ಪಿ.ಸೋಮಣ್ಣ ಲಯನ್ಸ್ ಚಟುವಟಿಕೆ ಬಗ್ಗೆ ವಿವರಿಸಿದರು.
ಇದೇ ಸಂದರ್ಭ ಕೂಡಿಗೆ ಕ್ರೀಡಾ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಕುಂತಿ ಬೋಪಯ್ಯ ಹಾಗೂ ಕಡಗದಾಳು ಸರ್ಕಾರಿ ಪೌಢಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯಿನಿ ಎಂ.ಜೆ.ಗಂಗಮ್ಮ ಅವರನ್ನು ಲಯನ್ಸ್ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು.
ಪ್ರಾಂತೀಯ ಪ್ರಥಮ ಮಹಿಳೆ ಡಾ.ಟೀನ, ಲಯನ್ಸ್ ನಿಕಟ ಪೂರ್ವ ಅಧ್ಯಕ್ಷೆ ಅನಿತಾ ಸೋಮಣ್ಣ, ಪ್ರಾಂತೀಯ ಮಾರ್ಗದರ್ಶಿ ನವೀನ್ ಅಂಬೆಕಲ್ಲು ಹಾಗೂ ವಲಯ 2 ರ ಮಡಿಕೇರಿ, ಸೋಮವಾರಪೇಟೆ, ಕುಶಾಲನಗರ, ಸುಂಟಿಕೊಪ್ಪ ಪದಾಧಿಕಾರಿಗಳು ಮತ್ತು ಸದಸ್ಯರು ಉಪಸ್ಥಿತರಿದ್ದರು.
ಲಯನ್ಸ್ ಸಂಸ್ಥೆಯ ಅಧ್ಯಕ್ಷ ನಟರಾಜ್ ಕೆಸ್ತೂರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಪದಾಧಿಕಾರಿಗಳಾದ ಗೀತಾ ಮಧುಕರ್, ಕನ್ನಂಡ ಕವಿತಾ ಕಾವೇರಮ್ಮ, ಡಿ.ಮಧುಕರ್ ಶೇಟ್ ಅತಿಥಿಗಳ ಪರಿಚಯ ಮಾಡಿದರು.
ಪ್ರತಿಭಾ ಮಧುಕರ್ ಪ್ರಾರ್ಥಿಸಿ, ಖಜಾಂಚಿ ಲಯನ್ ಕೆ.ಕೆ.ದಾಮೋದರ್ ವಂದಿಸಿದರು.