Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:09 AM Tuesday 26-October 2021

ತಲಕಾವೇರಿಯಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗೆ ದಕ್ಕೆಯಾಗುತ್ತಿಲ್ಲ : ಸಚಿವೆ ಶಶಿಕಲಾ ಜೊಲ್ಲೆ ಸ್ಪಷ್ಟನೆ

22/09/2021

ಮಡಿಕೇರಿ ಸೆ.22 : ನಾಡಿನ ಪವಿತ್ರ ಕ್ಷೇತ್ರವಾದ ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಯಲ್ಲಿ ಪ್ರವಾಸಿಗರಿಂದ ಧಾರ್ಮಿಕ ಭಾವನೆಗೆ ದಕ್ಕೆಯಾಗಿರುವ ಯಾವುದೇ ಪ್ರಕರಣಗಳು ಕಂಡು ಬಂದಿಲ್ಲವೆಂದು ರಾಜ್ಯ ಮುಜರಾಯಿ ಸಚಿವೆ ಶಶಿಕಲಾ ಅ.ಜೊಲ್ಲೆ ಸ್ಪಷ್ಟಪಡಿಸಿದ್ದಾರೆ.
ವಿಧಾನ ಪರಿಷತ್ ಸದಸ್ಯೆ ಶಾಂತೆಯಂಡ ವೀಣಾಅಚ್ಚಯ್ಯ ಅವರು ವಿಧಾನ ಪರಿಷತ್ ನಲ್ಲಿ ವಿಷಯ ಪ್ರಸ್ತಾಪಿಸಿ ತಲಕಾವೇರಿ ಕ್ಷೇತ್ರವನ್ನು ಪ್ರವಾಸಿತಾಣದ ರೀತಿಯಲ್ಲಿ ಪರಿಗಣಿಸಲಾಗಿದೆ. ಇಲ್ಲಿಗೆ ಬರುವ ಪ್ರವಾಸಿಗರು ಧಾರ್ಮಿಕ ಶ್ರದ್ಧೆಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿರುವ ಬಗ್ಗೆ ಮಾಹಿತಿ ಇದೆಯೇ ಮತ್ತು ಮುಜರಾಯಿ ಇಲಾಖೆ ಇದನ್ನು ನಿಯಂತ್ರಿಸಲು ಯಾವ ಕ್ರಮ ಕೈಗೊಂಡಿದೆ ಎಂದು ಪ್ರಶ್ನಿಸಿದರು.
ಇದಕ್ಕೆ ಉತ್ತರಿಸಿದ ಸಚಿವರು ಪ್ರವಾಸಿಗರು ತಲಕಾವೇರಿಯಲ್ಲಿ ಧಾರ್ಮಿಕ ನಂಬಿಕೆಗಳಿಗೆ ದಕ್ಕೆ ತರುವ ರೀತಿಯಲ್ಲಿ ನಡೆದುಕೊಂಡ ಪ್ರಕರಣಗಳು ಕಂಡು ಬಂದಿಲ್ಲ. ಅಲ್ಲದೆ ಕ್ಷೇತ್ರದಲ್ಲಿ ಧಾರ್ಮಿಕ ಚಟುವಟಿಕೆಗಳಿಗೆ ಮಾತ್ರ ಅವಕಾಶ ನೀಡಲಾಗಿದ್ದು, ಕಡ್ಡಾಯವಾಗಿ ಶ್ರದ್ಧಾಭಕ್ತಿಯಿಂದ ನಡೆದುಕೊಳ್ಳುವಂತೆ ಮತ್ತು ಮಾರ್ಗಸೂಚಿಗಳನ್ನು ಪಾಲಿಸುವಂತೆ ಫಲಕಗಳನ್ನು ಅಳವಡಿಸಲಾಗಿದೆ ಎಂದು ಗಮನ ಸೆಳೆದರು.