Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:18 PM Tuesday 26-October 2021

ಶಾಸಕರಿಂದ ಕಾಂಗ್ರೆಸ್ಸಿಗರನ್ನು ಹತ್ತಿಕ್ಕುವ ಯತ್ನ : ವಿ.ಪಿ.ಶಶಿಧರ್ ಆರೋಪ

22/09/2021

ಮಡಿಕೇರಿ ಸೆ.22 : ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರು ಅಧಿಕಾರಿಗಳನ್ನು ಬಳಸಿಕೊಂಡು ಕಾಂಗ್ರೆಸಿಗರನ್ನು ಹತ್ತಿಕ್ಕುವ ಯತ್ನ ಮಾಡುತ್ತಿದ್ದಾರೆ ಎಂದು ಜಿಲ್ಲಾ ಕಾಂಗ್ರೆಸ್ ಪ್ರಮುಖ ವಿ.ಪಿ.ಶಶಿಧರ್ ಆರೋಪಿಸಿದ್ದಾರೆ.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕುಶಾಲನಗರ ನೂತನ ತಾಲ್ಲೂಕು ಉದ್ಘಾಟನೆಯ ಸಂದರ್ಭ ಹೋರಾಟ ಸಮಿತಿಯ ಕಾರ್ಯಕರ್ತರೊಂದಿಗೆ ದುರ್ವರ್ತನೆ ತೋರಿದ ಪೊಲೀಸ್ ಅಧಿಕಾರಿಯನ್ನು ಶಾಸಕರು ರಕ್ಷಣೆ ಮಾಡುತ್ತಿದ್ದಾರೆ ಎಂದು ದೂರಿದರು.
ಪೊಲೀಸ್ ಅಧಿಕಾರಿಯ ನಡೆಯನ್ನು ಖಂಡಿಸಿ ಪ್ರತಿಭಟನೆ ನಡೆಸಿದ ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಅಧಿಕಾರಿಗಳನ್ನು ಸಾಕ್ಷಿಯನ್ನಾಗಿಸಿ ಕೋವಿಡ್ ನಿಯಾಮಾವಳಿಯ ಉಲ್ಲಂಘನೆ ಆರೋಪದಡಿ ಮೊಕದ್ದಮೆ ದಾಖಲಿಸಲಾಗಿದೆ. ಕೊಡಗಿಗೆ ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಬಿಜೆಪಿ ಕಾರ್ಯಕರ್ತರನ್ನು ಬೆಂಗಳೂರಿಗೆ ಕರೆದುಕೊಂಡು ಹೋಗುವಾಗ ಕೊವೀಡ್ ನಿಯಮಾವಳಿ ಇರಲ್ಲಿಲ್ಲವೇ ಎಂದು ಪ್ರಶ್ನಿಸಿದ ಅವರು, ಆಡಳಿತ ಪಕ್ಷದವರಿಗೆ ಒಂದು ಕಾನೂನು, ವಿರೋಧ ಪಕ್ಷವರಿಗೆ ಮತ್ತೊಂದು ಕಾನೂನು ರಚಿಸಲಾಗಿದೆಯೇ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಬಿಜೆಪಿ ಮಂದಿ ತಮಗೆ ಬೇಕಾದ ಅಧಿಕಾರಿಗಳನ್ನು ಜಿಲ್ಲೆಯಲ್ಲಿರಿಸಿಕೊಂಡು ಅಧಿಕಾರ ದುರ್ಬಳಕೆ ಮಾಡಿಕೊಳ್ಳುತ್ತಿದ್ದಾರೆ. ಅಧಿಕಾರಿ ವರ್ಗ ಶಾಸಕರ ಪರವಾಗಿ ಕಾರ್ಯ ನಿರ್ವಹಿಸುತ್ತಿದ್ದು, ವರ್ಗಾವಣೆ ದಂಧೆ ಮಿತಿ ಮೀರಿದೆ ಎಂದು ಶಶಿಧರ್ ಆರೋಪಿಸಿದರು.
ಕೆಪಿಸಿಸಿ ಪ್ರಮುಖರಾದ ಕೆ.ಪಿ.ಚಂದ್ರಕಲಾ ಮಾತನಾಡಿ, ನಮ್ಮ ಹೋರಾಟದ ಫಲವಾಗಿ ನೂತನ ತಾಲ್ಲೂಕು ರಚನೆಯಾಗಿದೆ, ಇದರಲ್ಲಿ ಬಿಜೆಪಿ ಕೊಡುಗೆ ಏನಿದೆ ಎಂದು ಪ್ರಶ್ನಿಸಿದರು.
ಸೌಜನ್ಯಕ್ಕೂ ಹೊರಾಟಗಾರರಿಗೆ ಅಭಿನಂದನೆ ಸಲ್ಲಿಸದ ಶಾಸಕರು, ಉದ್ಘಾಟನೆ ಸಂದರ್ಭ ನಮ್ಮನ್ನು ಹೊರ ಕಳುಹಿಸುವ ಕೆಲಸ ಮಾಡಿದ್ದಾರೆ. ಕಾಂಗ್ರೆಸ್ ಆಡಳಿತಾವಧಿಯಲ್ಲಿ ಕೊಡಗಿಗೆ ಸಾಕಷ್ಟು ಅನುದಾನವನ್ನು ನೀಡಲಾಗಿದೆ. ಆದರೆ ಬಿಜೆಪಿಯ ಇಬ್ಬರು ಶಾಸಕರಿದ್ದರೂ, ರಾಜ್ಯದಲ್ಲಿ ಅವರದ್ದೇ ಸರ್ಕಾರವಿದ್ದರೂ ಕೊಡಗಿನ ಅಭಿವೃದ್ಧಿ ಕುಂಟಿತಗೊಂಡಿದೆ. ಶಾಸಕರಿಗೆ ಜೈಕಾರ, ಕಾಂಗ್ರೆಸ್‌ಗೆ ದಿಕ್ಕಾರ ಕೂಗಲಾಗುತ್ತಿದೆಯೇ ಹೊರತು ಅಭಿವೃದ್ಧಿ ಕಾರ್ಯಗಳು ಮಾತ್ರ ನಡೆಯುತ್ತಿಲ್ಲವೆಂದು ಟೀಕಿಸಿದರು.
ಜಿಲ್ಲಾ ಕಾಂಗ್ರೆಸ್ ಕಾರ್ಯಾಧ್ಯಕ್ಷ ಧರ್ಮಜಾ ಉತ್ತಪ್ಪ ಮಾತನಾಡಿ, ಕುಶಾಲನಗರ ತಾಲ್ಲೂಕು ಉದ್ಘಾಟನೆ ಸಂದರ್ಭ ಅಧಿಕಾರಿಗಳು ವರ್ತಿಸಿದ ರೀತಿಯಿಂದ ನೋವುಂಟಾಗಿದೆ. ಶಾಸಕರ ನಿರ್ದೇಶನದಂತೆ ಅಧಿಕಾರಿಗಳು ದುರ್ವತನೆ ತೋರಿದ್ದಾರೆ ಎಂದು ಆರೋಪಿಸಿದರು.
::: ತೀರ್ಪು ಸ್ವಾಗತಾರ್ಹ :::
ಕೊಡವರ ಸಂಸ್ಕೃತಿಯ ಪ್ರತೀಕವಾಗಿರುವ ಕೋವಿಯ ಹಕ್ಕಿನ ಕುರಿತು ನ್ಯಾಯಾಲಯ ನೀಡಿರುವ ತೀರ್ಪು ಆದೇಶ ಸ್ವಾಗತಾರ್ಹವಾಗಿದ್ದು, ಇದು ಕೋವಿಯನ್ನು ಪೂಜಿಸುವ ಕೊಡಗಿನ ಜನರಿಗೆ ಸಂದ ಗೌರವವಾಗಿದೆ ಎಂದು ಧರ್ಮಜ ಉತ್ತಪ್ಪ ಹರ್ಷ ವ್ಯಕ್ತಪಡಿಸಿದರು.
ಕಾನೂನು ಹೋರಾಟದಲ್ಲಿ ಭಾಗಿಯಾದ ಎಲ್ಲಾ ವಕೀಲರಿಗೆ ಧನ್ಯವಾದ ಸಲ್ಲಿಸುವುದಾಗಿ ತಿಳಿಸಿದರು.
ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಸಂಯೋಜಕ ಹೆಚ್.ಎಂ.ನಂದಕುಮಾರ್ ಉಪಸ್ಥಿತರಿದ್ದರು.