Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:05 AM Tuesday 26-October 2021

ಕೊಡಗರಹಳ್ಳಿ : ಕಾಡಾನೆಗಳ ದಾಳಿಯಿಂದ ಕೃಷಿಕರಿಗೆ ನಷ್ಟ

22/09/2021

ಸುಂಟಿಕೊಪ್ಪ ಸೆ.22 : ಕೊಡಗರಹಳ್ಳಿ ಗ್ರಾ.ಪಂ ವ್ಯಾಪ್ತಿಯ ಅಂದಗೋವೆ ಗ್ರಾಮದಲ್ಲಿ ಕಾಡಾನೆಗಳ ದಾಳಿಯ ಆತಂಕದಿಂದ ತೋಟ ಮತ್ತು ಗದ್ದೆ ಕೆಲಸಗಳಿಗೆ ಹಿನ್ನಡೆಯಾಗಿದೆ.
ಸುತ್ತಮುತ್ತಲ ಕೃಷಿ ಪ್ರದೇಶಗಳಲ್ಲಿ ದಾಂಧಲೆ ನಡೆಸುತ್ತಿರುವ ಕಾಡಾನೆಗಳ ಹಿಂಡು ಫಸಲು ನೀಡುವ ಎಲ್ಲಾ ಪೈರನ್ನು ತಿಂದು ತೇಗಿದೆ. ಸ್ಥಳೀಯ ಕೃಷಿಕ ಚಿಕ್ಕಂಡ ಮೇದಪ್ಪ ಎಂಬುವವರ ತೋಟ ಮತ್ತು ಗದ್ದೆಗಳಿಗೆ ನುಗ್ಗಿದ ಎರಡು ಕಾಡಾನೆಗಳು ಅಡಿಕೆಗಿಡ, ಜೋಳ, ಭತ್ತದ ಕೃಷಿಯನ್ನು ನಾಶ ಪಡಿಸಿವೆ. ಮನೆಯ ಬಳಿಯ ಸೋಲಾರ್ ದೀಪದ ವ್ಯವಸ್ಥೆಗೆ ಹಾನಿ ಮಾಡಿದೆ.
ಸುಮಾರು 2 ಲಕ್ಷ ರೂ.ಗಳಿಗೂ ಅಧಿಕ ನಷ್ಟವುಂಟಾಗಿದೆ ಎಂದು ಚಿಕ್ಕಂಡ ಮೇದಪ್ಪ ಬೇಸರ ವ್ಯಕ್ತಪಡಿಸಿದ್ದಾರೆ. ಗ್ರಾಮಸ್ಥರು ಧೈರ್ಯವಾಗಿ ಹೊರ ಬರುವಂತ್ತಿಲ್ಲ, ಕಾರ್ಮಿಕರು ತೋಟಗಳಲ್ಲಿ ಕಾರ್ಯ ನಿರ್ವಹಿಸುವಂತ್ತಿಲ್ಲ, ವಿದ್ಯಾರ್ಥಿಗಳು ಶಾಲೆಗೆ ತೆರಳುವಂತ್ತಿಲ್ಲ ಎನ್ನುವ ಪರಿಸ್ಥಿತಿ ಸೃಷ್ಟಿಯಾಗಿದೆ. ವನ್ಯಜೀವಿಗಳನ್ನು ಕಾಡಿಗಟ್ಟುವ ಕಾರ್ಯಾಚರಣೆ ಕೈಗೊಳ್ಳಬೇಕೆಂದು ಗ್ರಾಮಸ್ಥರು ಅರಣ್ಯ ಇಲಾಖೆಯನ್ನು ಒತ್ತಾಯಿಸಿದ್ದಾರೆ.
ಅರಣ್ಯ ಇಲಾಖೆಯವರು ಕಾಡಾನೆಯಿಂದ ಕೃಷಿಕರಿಗಾಗುವ ತೊಂದರೆಯನ್ನು ಗಂಬೀರವಾಗಿ ಪರಿಗಣಿ¸ಬೇಕೆಂದು ಒತ್ತಯಿಸಿದ್ದಾರೆ.