Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:33 PM Tuesday 26-October 2021

ಅಣ್ಣನೊಂದಿಗೆ ಕೆರೆಗೆ ಸ್ನಾನಕ್ಕಿಳಿದ ತಮ್ಮನ ದಾರುಣ ಸಾವು : ಹೊಸಕೋಟೆ ಗ್ರಾಮದಲ್ಲಿ ಘಟನೆ

23/09/2021

ಮಡಿಕೇರಿ ಸೆ.23 : ಅಣ್ಣನೊಂದಿಗೆ ತಮ್ಮನು ಜೊತೆಯಾಗಿ ಕೆರೆಗೆ ಸ್ನಾನಕ್ಕೆ ತೆರಳಿದ್ದು, ತಮ್ಮ ದಾರುಣವಾಗಿ ಸಾವನ್ನಪ್ಪಿದ ಘಟನೆ ವಿರಾಜಪೇಟೆ ಹೊಸಕೋಟೆ ಗ್ರಾಮದಲ್ಲಿ ನಡೆದಿದೆ.
ವಿರಾಜಪೇಟೆಯ ಶಾಂತಿ ನಗರದ ನಿವಾಸಿ ಬಿ.ಎಸ್.ಎಫ್ ನಿವೃತ್ತ ಯೋಧ ದಿ. ಡಿ.ಎ.ಮಜೀದ್ ಎಂಬವರ ಪುತ್ರ ಮೊಹಮ್ಮದ್ ಜಿಯಾನ್ (19)ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಯುವಕ.
ಮಜೀದ್ ಅವರ ಪುತ್ರ ಮೊಹಮ್ಮದ್ ಜಿಷಾನ್ (20) ಮತ್ತು ದ್ವೀತಿಯ ಸಹೋದರ ಮೊಹಮ್ಮದ್ ಜಿಯಾನ್ ನಲ್ವತೊಕ್ಲು ಹೊಸಕೋಟೆ ಗ್ರಾಮದಲ್ಲಿರುವ ಕಾಫಿ ತೋಟದ ಅಂಚಿನಲ್ಲಿರುವ ಕೆರೆಯಲ್ಲಿ ಸ್ನಾನ ಮಾಡುವ ಸಂದರ್ಭ ಜಿಯಾನ್ ಆಳವಾದ ಸ್ಥಳದಲ್ಲಿ ಮುಳುಗಿ ಸಾವನ್ನಾಪ್ಪಿದ್ದಾನೆ ಎನ್ನಲಾಗಿದೆ.
ಮೃತನ ಅಣ್ಣ ಮೊಹಮ್ಮದ್ ಜಿಷಾನ್ ನೀಡಿದ ದೂರಿನ ಅನ್ವಯ ವಿರಾಜಪೇಟೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಮರಣ ಪ್ರಕರಣ ದಾಖಲಾಗಿದೆ.
ವಿರಾಜಪೇಟೆ ಸರ್ಕಾರಿ ಆಸ್ಪತ್ರೆಯಲ್ಲಿ ಮೃತ ಶರೀರವನ್ನು ಪರೀಕ್ಷೆಗೆ ಒಳಪಡಿಸಿ ಕುಟುಂಬಸ್ಥರಿಗೆ ಹಸ್ತಾಂತರ ಮಾಡಲಾಯಿತು.