Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:37 PM Tuesday 26-October 2021

ಪ್ರಧಾನಿ ಮೋದಿ ಜನ್ಮದಿನಾಚರಣೆ : ಕೊಡಗು ಬಿಜೆಪಿ ಯುವ ಮೋರ್ಚಾದಿಂದ ರಕ್ತದಾನ

23/09/2021

ಮಡಿಕೇರಿ ಸೆ.23 : ಪ್ರಧಾನಿ ನರೇಂದ್ರ ಮೋದಿ ಅವರ 71ನೇ ಜನ್ಮ ದಿನದ ಅಂಗವಾಗಿ ಕೊಡಗು ಜಿಲ್ಲಾ ಬಿಜೆಪಿ ಯುವ ಮೋರ್ಚಾದಿಂದ ನಗರದ ರೋಟರಿ ಭವನದಲ್ಲಿ ರಕ್ತದಾನ ಶಿಬಿರ ನಡೆಯಿತು.
ಜಿಲ್ಲಾಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಮತ್ತು ಮಡಿಕೇರಿ ನಗರ ಬಿಜೆಪಿ ಅಧ್ಯಕ್ಷ ಮನುಮಂಜುನಾಥ್ ಶಿಬಿರಕ್ಕೆ ಚಾಲನೆ ನೀಡಿದರು.
ಸುಮಾರು 60ಕ್ಕೂ ಅಧಿಕ ಮಂದಿ ರಕ್ತದಾನ ಮಾಡಿದರು. ಜಿಲ್ಲಾ ಯುವ ಮೋರ್ಚಾ ಅಧ್ಯಕ್ಷ ದರ್ಶನ್ ಜೋಯಪ್ಪ ಮಾತನಾಡಿ, ರಕ್ತದಾನ ಶ್ರೇಷ್ಟದಾನವಾಗಿದ್ದು, ಮತ್ತೊಬ್ಬರಿಗೆ ಜೀವದಾನ ಮಾಡಲು ಯುವಕರು ಮುಂದಾಗಬೇಕು ಎಂದು ಹೇಳಿದರು.
ಮೋದಿ ಜನ್ಮದಿನದ ಅಂಗವಾಗಿ 6 ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ನವಭಾರತ ಮೇಳ, ರಕ್ತದಾನ ಶಿಬಿರ, ಆಜಾದಿಕೆ ಅಮೃತ್ ಮಹೋತ್ಸವ, ದೀನ್ ದಯಾಳ್ ಉಪಾಧ್ಯಯರ ಅಂತ್ಯೋದಯ ಕಲ್ಪನೆ, ಸ್ವಚ್ಛತಾ ಕಾರ್ಯಕ್ರಮ, ನಮೋಕ್ವಿಜ್ ಕಾರ್ಯಕ್ರಮ ನಡೆಸಲು ತೀರ್ಮಾನಿಸಿದ್ದು, ಸಾರ್ವಜನಿಕರು ಸಹಕರಿಸಬೇಕು ಎಂದು ಹೇಳಿದರು.
ಈ ಕಾರ್ಯಕ್ರಮದಲ್ಲಿ ಬಿಜೆಪಿ ರಾಜ್ಯ ಯುವ ಮೋರ್ಚಾ ಸದಸ್ಯ ಮಹೇಶ್ ತಿಮ್ಮಯ್ಯ, ಮಡಿಕೇರಿ ನಗರ ಅಧ್ಯಕ್ಷರಾದ ಮನು ಮಂಜುನಾಥ್, ಮುಡಾ ಅಧ್ಯಕ್ಷರಾದ ರಮೇಶ್ ಹೊಳ್ಳ, ಜಿಲ್ಲಾ ಯುವಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಯಶ್ವಿನ್, ಜಿಲ್ಲಾ ಯುವ ಮೋರ್ಚಾ ಉಪಾಧ್ಯಕ್ಷ ಅಂಜನ್, ವಿನಯ್ ರಾಜ್, ಪವನ್, ಜಿಲ್ಲಾ ಕಾರ್ಯದರ್ಶಿ ಪ್ರೀತಮ್, ವಿಷ್ಣು, ಹಿತೇಶ್ ಜಿಲ್ಲಾ ಸದಸ್ಯರಾದ ಸುನಿಲ್, ಹೇಮಂತ್, ಮಡಿಕೇರಿ ಯುವ ಮೋರ್ಚಾ ಅಧ್ಯಕ್ಷ ನವೀನ್ ಪೂಜಾರಿ, ಪ್ರಧಾನ ಕಾರ್ಯದರ್ಶಿ ಪ್ರೀತು, ವಿಘ್ನೇಶ್, ಮಡಿಕೇರಿ ಗ್ರಾಮಾಂತರ ಅಧ್ಯಕ್ಷ ಹೇಮಂತ್, ಚೇತನ್, ಸೋಮವಾರಪೇಟೆ ಮಂಡಲ ಪ್ರಧಾನ ಕಾರ್ಯದರ್ಶಿ ಪದ್ಮಾನಾಭ ಹಾಗೂ ಕಾರ್ಯಕರ್ತರು ಪಾಲ್ಗೊಂಡಿದ್ದರು.