ಬೆಂಗಳೂರಿನಲ್ಲಿ ಸಿಲಿಂಡರ್ ಸ್ಫೋಟಕ್ಕೆ ಮೂವರು ಬಲಿ : ಇಬ್ಬರಿಗೆ ಗಂಭೀರ ಗಾಯ

23/09/2021

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಗುರುವಾರ ಮತ್ತೊಂದು ಘೋರ ದುರಂತ ಸಂಭವಿಸಿದೆ. ಗ್ಯಾಸ್ ಸಿಲಿಂಡರ್ ಸ್ಫೋಟವಾಗಿ ಮೂವರು ಮೃತಪಟ್ಟಿದ್ದಾರೆ.ಸ್ಫೋಟದ ತೀವ್ರತೆಗೆ ಹತ್ತಾರು ಬೈಕ್ ಗಳು ಸುಟ್ಟು ಕರಕಲಾಗಿವೆ.

ಬೆಂಗಳೂರಿನ ಚಾಮರಾಜಪೇಟೆಯ ರಾಯನ್ ಸರ್ಕಲ್ ಬಳಿಯ ನ್ಯೂ ತಗರುಪೇಟೆಯಲ್ಲಿ ಇಂದು ಮಧ್ಯಾಹ್ನ ಈ ದುರ್ಘಟನೆ ಸಂಭವಿಸಿದೆ. ಸ್ಫೋಟಕ್ಕೆ ಹಲವರಿಗೆ ಗಾಯಗಳಾಗಿದ್ದು ಅವರನ್ನು ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ.

ಸಿಲಿಂಡರ್ ಸ್ಫೋಟದ ತೀವ್ರತೆಗೆ ಮೂವರ ದೇಹಗಳು ಛಿದ್ರಗೊಂಡು ಒಂದಷ್ಟು ದೂರ ಹಾರಿ ಹೋಗಿ ಬಿದ್ದಿದೆ ಎಂದು ಪ್ರತ್ಯಕ್ಷದರ್ಶಿಗಳು ಹೇಳುತ್ತಾರೆ, ಸ್ಥಳೀಯ ಜನರು ತೀವ್ರ ಆತಂಕಗೊಂಡಿದ್ದಾರೆ.