ವಾಷಿಂಗ್ಟನ್ ಗೆ ಪ್ರಧಾನಿ ನರೇಂದ್ರ ಮೋದಿ ಭೇಟಿ

23/09/2021

ವಾಷಿಂಗ್ಟನ್: ಮೂರು ದಿನಗಳ ಅಮೆರಿಕ ಪ್ರವಾಸ ಕೈಗೊಂಡಿರುವ ಪ್ರಧಾನಿ ನರೇಂದ್ರ ಮೋದಿ ವಾಷಿಂಗ್ಟನ್ ಡಿಸಿಗೆ ಬಂದಿಳಿದಿದ್ದಾರೆ.

ವಾಷಿಂಗ್ಟನ್ ಡಿಸಿಯಲ್ಲಿನ ಜಾಯಿಂಟ್ ಬೇಸ್ ಆಂಡ್ರ್ಯೂಸ್ ನಲ್ಲಿ ಅಮೆರಿಕ ರಾಜ್ಯ ಇಲಾಖೆ ಅಧಿಕಾರಿಗಳು ಪ್ರಧಾನಿ ಮೋದಿಯವರನ್ನು ಬರಮಾಡಿಕೊಂಡರು. ಭಾರತದ ಅಮೆರಿಕ ರಾಯಭಾರಿ ತರಂಜಿತ್ ಸಿಂಗ್ ಸಂಧು, ಬ್ರಿಗೇಡಿಯರ್ ಅನೂಪ್ ಸಿಂಘಾಲ್, ಏರ್ ಕಮಾಂಡರ್ ಅಂಜನ್ ಭದ್ರ ಮತ್ತು ನೌಕಾ ಅಟ್ಯಾಚ್ ಕಮೋಡೋರ್ ನಿರ್ಭಯಾ ಬಪ್ನಾ ಸೇರಿದಂತೆ ರಕ್ಷಣಾ ಅಧಿಕಾರಿಗಳು ಉಪಸ್ಥಿತರಿದ್ದರು.

ಅವರ ಭೇಟಿಯ ಸಮಯದಲ್ಲಿ, ಕ್ವಾಡ್ ಲೀಡರ್ಸ್ ಶೃಂಗಸಭೆಯಲ್ಲಿ ಭಾಗವಹಿಸುತ್ತಾರೆ, ವಿಶ್ವಸಂಸ್ಥೆ ಸಾಮಾನ್ಯ ಸಭೆಯಲ್ಲಿ ಭಾಗವಹಿಸಿದ ನಂತರ ಶ್ವೇತಭವನದಲ್ಲಿ ಅಮೆರಿಕ ಅಧ್ಯಕ್ಷ ಜೊ ಬೈಡನ್ ಜೊತೆ ದ್ವಿಪಕ್ಷೀಯ ಸಭೆ ನಡೆಸಲಿದ್ದಾರೆ.