Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:18 AM Tuesday 26-October 2021

ಕೊಡಗು ಜಿಲ್ಲಾ ಪತ್ರಕರ್ತರ ಸಂಘದ ವಾರ್ಷಿಕ ಪ್ರಶಸ್ತಿ ಪ್ರದಾನ

23/09/2021

ಮಡಿಕೇರಿ ಸೆ.23 : ಕೊಡಗು ಜಿಲ್ಲಾ ಪತ್ರಕರ್ತರ ಸಂಘದ 2020ನೇ ಸಾಲಿನ ವಾರ್ಷಿಕ ಪ್ರಶಸ್ತಿಯನ್ನು ಪ್ರದಾನ ಮಾಡಲಾಯಿತು.
ನಗರದ ಪತ್ರಿಕಾ ಭವನದಲ್ಲಿ ನಡೆದ ವಾರ್ಷಿಕ ಮಹಾಸಭೆ ಹಾಗೂ ಪ್ರಶಸ್ತಿ ಪ್ರದಾನ ಕಾರ್ಯಕ್ರಮದಲ್ಲಿ ಗಣ್ಯರು ಪ್ರಶಸ್ತಿ ಪ್ರದಾನ ಮಾಡಿದರು.
ಜಿಲ್ಲಾ ಪತ್ರಕರ್ತರ ಸಂಘದಿoದ ನೀಡಲಾಗುವ ಪಂದ್ಯoಡ ಬೆಳ್ಯಪ್ಪ ಸ್ಮರಣಾರ್ಥ ಅತ್ಯುತ್ತಮ ಗ್ರಾಮೀಣ ವರದಿಯ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ ”ಡಾಂಬರು ಕಾಣದೆ ದಶಕಗಳೇ ಕಳೆದಿದೆ-ಜೀವದ ಹಂಗು ತೊರೆದು ಚಾಲಕರ ಸಂಚಾರ” ವರದಿಗೆ ಕೆ.ಆರ್.ಪ್ರಸಿನ್, ಸಂಘದ ಮಾಜಿ ಅಧ್ಯಕ್ಷರಾದ ಕೆ.ಕೆ.ಶಶಿಧರ್ ಸ್ಮರಣಾರ್ಥ ಕ್ರೀಡಾ ವರದಿ ಪ್ರಶಸ್ತಿಯನ್ನು ಪ್ರಜಾಸತ್ಯ ಪತ್ರಿಕೆಯಲ್ಲಿ ಪ್ರಕಟವಾದ” ಶೆಟಲ್ ಬ್ಯಾಡ್‌ಮೆಂಟನ್-ಸ್ಮ್ಯಾಶ್ ಸ್ಟಾರ್ ಸಂತು” ವರದಿಗೆ ಕೆ.ಎಂ.ವಿನೋದ್, ಸಂಘದ ಮಾಜಿ ಉಪಾಧ್ಯಕ್ಷರಾದ ಸಿ.ಎನ್.ಸುನಿಲ್ ಕುಮಾರ್ ಸ್ಮರಣಾರ್ಥ ಅತ್ಯುತ್ತಮ ವಿಡಿಯೋಗ್ರಫಿ ಪ್ರಶಸ್ತಿಯನ್ನು ಟಿವಿ9 ಕ್ಯಾಮರಾಮೆನ್ ನವೀನ್ ಸುವರ್ಣ ಅವರು ” ಜನರಲ್ ತಿಮ್ಮಯ್ಯ ಮ್ಯೂಸಿಯಂ” ವರದಿಗೆ ಪಡೆದುಕೊಂಡರು.
ರಾಜ್ಯ ಪತ್ರಕರ್ತರ ಸಂಘದ ಉಪಾಧ್ಯಕ್ಷರಾಗಿದ್ದ ಮಂಡಿಬೆಲೆ ರಾಜಣ್ಣ ತಮ್ಮ ತಂದೆ ಮಂಡಿಬೆಲೆ ಶಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ಕ್ಷಮಿಸಿ ಈ ವ್ಯಥೆಯ ಕಥೆಗೆ ಶೀರ್ಷಿಕೆ ನೀಡುವ ಮನಸ್ಸಿಲ್ಲ”ವರದಿಗೆ ಹೆಚ್.ಟಿ.ಅನಿಲ್, ಕೈಬುಲೀರ ಪಾರ್ವತಿ ಬೋಪಯ್ಯ ತಂದೆ-ತಾಯಿ ಉತ್ತಯ್ಯ-ಸುಬ್ಬವ್ವ ಹೆಸರಿನಲ್ಲಿ ಸ್ಥಾಪಿಸಿರುವ ಪರಿಸರ ಮತ್ತು ನೈರ್ಮಲ್ಯ ವರದಿ ಪ್ರಶಸ್ತಿಯನ್ನು ಪ್ರಜಾವಾಣಿ ಪತ್ರಿಕೆಯಲ್ಲಿ ಪ್ರಕಟವಾದ ”ಪಾಳುಬಿದ್ದ ಕೆರೆಯಲ್ಲಿ ಜೀವಕಳೆ ”ವರದಿಗೆ ರೆಜಿತ್‌ಕುಮಾರ್ ಗುಹ್ಯ, ರಾಷ್ಟ್ರೀಯ ಪತ್ರಕರ್ತ ಸಂಘದ ಸದಸ್ಯರಾಗಿರುವ ಎಸ್.ಎ.ಮುರುಳೀಧರ್ ತಮ್ಮ ತಾಯಿ ಪಾರ್ವತಮ್ಮ ಅಪ್ಪಸ್ವಾಮಿ ಹೆಸರಿನಲ್ಲಿ ಸ್ಥಾಪಿಸಿರುವ ಕೃಷಿ ವರದಿ ಪ್ರಶಸ್ತಿಯನ್ನು ವಿಜಯವಾಣಿ ಪತ್ರಿಕೆಯಲ್ಲಿ ಪ್ರಕಟವಾದ ”ಅಂಗವೈಕಲ್ಯ ಮೆಟ್ಟಿನಿಂತ ಕೃಷಿ ಪ್ರೀತಿ ”ವರದಿಗೆ ಸಣ್ಣುವಂಡ ಕಿಶೋರ್ ನಾಚಪ್ಪ, ಮರಗೋಡು ಹಾಲು ಉತ್ಪಾದಕರ ಸಹಕಾರ ಸಂಘದ ಸ್ಥಾಪಕಾಧ್ಯಕ್ಷರಾದ ಮಂದ್ರೀರ ಮೋಹನ್ ದಾಸ್ ಅವರು ಪ್ರಗತಿಪರ ಹಾಲು ಉತ್ಪಾದಕರಾಗಿದ್ದ ಉಳುವಾರನ ಶೇಷಗಿರಿ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಹೈನುಗಾರಿಕೆ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ಹಸಿದ ಹೊಟ್ಟೆ ಕಲಿಸಿತು ದುಡಿಮೆ-ಕೈಹಿಡಿಯಿತು ಹೈನುಗಾರಿಕೆ”ವರದಿಗೆ ಅಮ್ಮುಣಿಚಂಡ ಪ್ರವೀಣ್ ಚಂಗಪ್ಪ, ಶಕ್ತಿ ಸಂಪಾದಕ ಬಿ.ಜಿ.ಅನಂತಶಯನ ತಮ್ಮ ಹೋಂಸ್ಟೇ ಆಲ್ಫೆನ್ ಗ್ಲೋ ಹೆಸರಿನಲ್ಲಿ ಸ್ಥಾಪಿಸಿರುವ ಸುದ್ದಿಛಾಯಾಚಿತ್ರ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ಹೆಡೆಬಿಚ್ಚಿದ ನಾಗನಿಗೆ ತಡೆಯೊಡ್ಡಿದ ಮಾರ್ಜಾಲ” ಚಿತ್ರಕ್ಕೆ ಎಂ.ಎo.ಚನ್ನನಾಯಕ್ ಪಡೆದುಕೊಂಡರು.
ಸ್ವಸ್ಥ ಸಂಸ್ಥೆಯ ಮುಖ್ಯಸ್ಥೆ ಕಾಕಮಾಡ ಗಂಗಾ ಚಂಗಪ್ಪ ತಮ್ಮ ಮಾವ ಕಾಕಮಾಡ ನಾಣಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಶೈಕ್ಷಣಿಕ ವರದಿ ಪ್ರಶಸ್ತಿಯನ್ನು ಕೊಡಗುಧ್ವನಿ ಪತ್ರಿಕೆಯಲ್ಲಿ ಪ್ರಕಟವಾದ”ಶಿಕ್ಷಣ ಕ್ರಾಂತಿಯತ್ತ ಆದಿವಾಸಿ ವಿದ್ಯಾರ್ಥಿಗಳು”ವರದಿಗೆ ಹೆಚ್.ಕೆ.ಜಗದೀಶ್, ಸಮಾಜಸೇವಕ ಮೇರಿಯಂಡ ಸಂಕೇತ್ ಪೂವಯ್ಯ ತಮ್ಮ ತಂದೆ ಮೇರಿಯಂಡ ಪೂವಯ್ಯ ಹೆಸರಿನಲ್ಲಿ ಸ್ಥಾಪಿಸಿರುವ ಹುಲಿ ಸಂರಕ್ಷಣೆ ಕುರಿತ ವರದಿ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ವಯಸ್ಸು-ಅಸಾಮರ್ಥ್ಯದಿಂದ ನಾಡಿನತ್ತ ವ್ಯಾಘ್ರನ ಹೆಜ್ಜೆ”ವರದಿಗೆ ಕಾಯಪಂಡ ಶಶಿ ಸೋಮಯ್ಯ, ಬೆಳೆಗಾರ ಅಜ್ಜಮಾಡ ಕಟ್ಟಿ ಮಂದಯ್ಯ ತಮ್ಮ ತಂದೆ ತಾಯಿ ಅಜ್ಜಮಾಡ ಸುಬ್ಬಯ್ಯ ಬೊಳ್ಳಮ್ಮ ಹೆಸರಿನಲ್ಲಿ ಸ್ಥಾಪಿಸಿರುವ ತೋಟಗಾರಿಕಾ ಪ್ರಶಸ್ತಿಯನ್ನು ಶಕ್ತಿ ಪತ್ರಿಕೆಯಲ್ಲಿ ಪ್ರಕಟವಾದ ”ಗುಮ್ಮನಕೊಲ್ಲಿಯಲ್ಲಿ ಅಪರೂಪದ ಸಸ್ಯವನ”ವರದಿಗೆ ಕೆ.ಎಸ್.ಮೂರ್ತಿ, ಕೋವರ್ ಕೊಲ್ಲಿ ಇಂದ್ರೇಶ್ ತಮ್ಮ ತಂದೆ ಚಂದ್ರಶೇಖರ್ ಅವರ ಹೆಸರಿನಲ್ಲಿ ಸ್ಥಾಪಿಸಿದ ಮಾನವೀಯ ವರದಿ ಪ್ರಶಸ್ತಿಯನ್ನು ವಿಜಯಕರ್ನಾಟಕ ಪತ್ರಿಕೆಯಲ್ಲಿ ಪ್ರಕಟವಾದ ”ಸಿಗದ ಅತಿವೃಷ್ಟಿ ಪರಿಹಾರ-ಬೇರೆಯವರ ಜಗುಲಿಯಲ್ಲಿ ವಾಸ”ವರದಿಗೆ ಜಗದೀಶ್ ಜೋಡುಬೆಟ್ಟಿ, ಮಂಡಿಬೆಲೆ ರಾಜಣ್ಣ ತಮ್ಮ ತಾಯಿ ದ್ಯಾವಮ್ಮ ಶ್ಯಾಮಣ್ಣ ಅವರ ಹೆಸರಿನಲ್ಲಿ ಸ್ಥಾಪಿಸಿರುವ ಅರಣ್ಯ ವನ್ಯಜೀವಿ ದೃಶ್ಯಮಾಧ್ಯಮ ವರದಿ ಪ್ರಶಸ್ತಿಯನ್ನು ದಿಗ್ವಿಜಯ ಚಾನಲ್ ನಲ್ಲಿ ಪ್ರಸಾರವಾದ ”ಬ್ರಹ್ಮಗಿರಿ ಬೆಟ್ಟ ಕುಸಿತಕ್ಕೆ ಕಾರಣವೇನು?ತಜ್ಞರ ವರದಿಯಲ್ಲಿ ಏನಿದೆ”ವರದಿಗೆ ಬಾಚರಣಿಯಂಡ ಅನುಕಾರ್ಯಪ್ಪ, ತೇನನ ರಾಜೇಶ್ ಅವರು ತಮ್ಮ ತಂದೆ ದಿವಂಗತ ತೇನನ ಸೋಮಣ್ಣ ಹೆಸರಿನಲ್ಲಿ ಸ್ಥಾಪಿಸಿರುವ ಸೇನೆಗೆ ಸಂಬAಧಿಸಿದ ದೃಶ್ಯ ಮಾಧ್ಯಮ ವರದಿ ಪ್ರಶಸ್ತಿಯನ್ನು ದಿಗ್ವಿಜಯ ಚಾನಲ್ ನಲ್ಲಿ ಪ್ರಸಾರವಾದ ”ಯೋಧರ ನಾಡಲ್ಲಿ ತಲೆಎತ್ತಿದ ರಾಜ್ಯದ ಪ್ರಥಮ ವಾರ್ ಮ್ಯೂಸಿಯಂ” ವರದಿಗೆ ಬಾಚರಣಿಯಂಡ ಅನುಕಾರ್ಯಪ್ಪ, ವಕೀಲರಾದ ಪಿ.ಕೃಷ್ಣಮೂರ್ತಿ ಅವರು ತಮ್ಮ ತಂದೆ ದಿವಂಗತ ಟಿ.ಕೆ.ಸುಬ್ರಹ್ಮಣ್ಯ ಭಟ್ ಪಂಜಿತ್ತಡ್ಕ ಅವರ ಸ್ಮರಣಾರ್ಥ ಸ್ಥಾಪಿಸಿರುವ ದೃಶ್ಯ ಮಾಧ್ಯಮದಲ್ಲಿ ಪ್ರಸಾರವಾಗುವ ಮಾನವೀಯ ವರದಿ ಪ್ರಶಸ್ತಿಯನ್ನು ಚಿತ್ತಾರ ವಾಹಿನಿಯಲ್ಲಿ ಪ್ರಸಾರವಾದ” ತಿಂಗಳಿoದ ಕಾಣದ ಅಮ್ಮನ ಮುಖ ದರ್ಶನವಾಗಿದ್ದು ಸ್ಮಶಾನದಲ್ಲಿ ”ವರದಿಗೆ ಶಿವರಾಜ್ ಪಡೆದುಕೊಂಡರು.
ಪತ್ರಕರ್ತರ ಸಂಘದ ಅಧ್ಯಕ್ಷೆ ಸವಿತಾರೈ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಕೊಡಗು ಪ್ರೆಸ್ ಕ್ಲಬ್ ಅಧ್ಯಕ್ಷ ರಮೇಶ್ ಕುಟ್ಟಪ್ಪ, ನಗರಸಭಾ ಪೌರಾಯುಕ್ತ ರಾಮದಾಸ್, ಸದಸ್ಯ ಬಿ.ವೈ.ರಾಜೇಶ್ ಮತ್ತಿತರರು ಉಪಸ್ಥಿತರಿದ್ದರು.