Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
10:38 PM Tuesday 26-October 2021

ಮಡಿಕೇರಿಯಲ್ಲಿ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆಗೆ ಚಾಲನೆ

23/09/2021

ಮಡಿಕೇರಿ ಸೆ.23 : ಪೌಷ್ಟಿಕ ಆಹಾರದ ಮಹತ್ವದ ಕುರಿತು ಅರಿವು ಮೂಡಿಸುವ ಸಲುವಾಗಿ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆ ಆಚರಿಸಲಾಗುತ್ತಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಆರ್.ವೆಂಕಟೇಶ್ ಅವರು ಹೇಳಿದರು.
ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆ ಹಾಗೂ ಜಿಲ್ಲಾ ಆರೋಗ್ಯ ಮ್ತತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ನಗರದ ಜಿಲ್ಲಾಸ್ಪತ್ರೆಯ ಮಹಿಳಾ ಮತ್ತು ಮಕ್ಕಳ ವಿಭಾಗದಲ್ಲಿ ಗುರುವಾರ ರಾಷ್ಟ್ರೀಯ ಪೌಷ್ಟಿಕ ಮಾಸಾಚರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ಪೌಷ್ಟಿಕಾಂಶದ ಕೊರತೆಯಿಂದ ಕ್ರೋನಿಕ್ ಕಾಯಿಲೆಗೆ ತುತ್ತಾಗುತ್ತಿದ್ದಾರೆ. ಈ ಸಂಬಂಧ ಮಕ್ಕಳಲ್ಲಿ ಆರೋಗ್ಯ ವೃದ್ಧಿಗಾಗಿ ಎನ್‍ಆರ್‍ಸಿ ಕೇಂದ್ರಗಳನ್ನು ತೆರೆಯಲಾಗಿದ್ದು ಪೌಷ್ಠಿಕಾಂಶದ ಕೊರತೆಯಿಂದ ಬಳಲುತ್ತಿರುವ ಮಕ್ಕಳಿಗೆ ಆರೈಕೆ ಮಾಡಲಾಗುವುದು ಎಂದರು.
ಪೌಷ್ಟಿಕಾಂಶ ಕೊರತೆ ಇರುವ ಮಕ್ಕಳನ್ನು ಎನ್‍ಆರ್‍ಸಿ (ರಾಷ್ಟ್ರೀಯ ಪೌಷ್ಟಿಕ ಪುನಶ್ಚೇತನ) ಕೇಂದ್ರಗಳಲ್ಲಿ ದಾಖಲು ಮಾಡುವ ಪೋಷಕರಿಗೆ 7 ರಿಂದ 14 ದಿನಗಳವರೆಗೆ ಉಚಿತ ಊಟ ಮತ್ತು ಕೂಲಿ ಕಾರ್ಮಿಕರ ಸಂಬಳವನ್ನು ಸಹ ಭರಿಸಲಾಗುತ್ತದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾದಿಕಾರಿ ಅವರು ತಿಳಿಸಿದರು.
ಕೊಡಗು ಜಿಲ್ಲಾ ವೈದ್ಯಕೀಯ ಕಾಲೇಜಿನ ನಿರ್ದೇಶಕರಾದ ಡಾ.ಕಾರ್ಯಪ್ಪ ಅವರು ಮಾತನಾಡಿ, ಮಕ್ಕಳ ಆರೋಗ್ಯದ ಕುರಿತು ಪೋಷಕರಲ್ಲಿ ಅರಿವು ಮೂಡಿಸುವುದು ಅತ್ಯಗತ್ಯವಾಗಿದೆ ಎಂದು ಹೇಳಿದರು.
ಎನ್‍ಆರ್‍ಸಿ ಕೇಂದ್ರಗಳಲ್ಲಿ ತಾಯಂದಿರಿಗೆ ಹಾಗೂ ಮಗುವಿನ ಆರೋಗ್ಯಕ್ಕೆ ಸಂಬಂಧಿಸಿದಂತೆ ಅಗತ್ಯ ಪ್ರಮಾಣದ ಆಹಾರ ಪದಾರ್ಥ ಹಾಗೂ ಎದೆ ಹಾಲುಣಿಸುವಿಕೆಯ ಕುರಿತು ಎಲ್ಲಾ ರೀತಿಯ ಮಾಹಿತಿಯನ್ನು ನೀಡಿ ಆರೈಕೆ ಮಾಡಲಾಗುತ್ತದೆ ಎಂದು ಮಾಹಿತಿ ನೀಡಿದರು.
ಜಿಲ್ಲಾ ಆರ್‍ಸಿಎಚ್ ಅಧಿಕಾರಿ ಡಾ.ಗೋಪಿನಾಥ್, ಜಿಲ್ಲಾ ಕೋವಿಡ್ ಆಸ್ಪತ್ರೆಯ ಅಧೀಕ್ಷಕರಾದ ಡಾ.ಮಂಜುನಾಥ್, ಕೊಡಗು ವೈದ್ಯಕೀಯ ಕಾಲೇಜಿನ ಪ್ರಾಂಶುಪಾಲರಾದ ಡಾ.ವಿಶಾಲ್ ಕುಮಾರ್, ಮಕ್ಕಳ ವಿಭಾಗದ ಮುಖ್ಯಸ್ಥರಾದ ಡಾ.ಪುರುಷೋತ್ತಮ, ಡಾ.ಕುಶ್ವಂತ್ ಕೋಳಿಬೈಲು, ಎನ್‍ಆರ್‍ಸಿ ವಿಭಾಗದ ವೈದ್ಯಾಧಿಕಾರಿ ಡಾ.ಡಾಲಿ ಪ್ರಿಯದರ್ಶಿನಿ, ಪೌಷ್ಟಿಕ ಪುನಶ್ಚೇತನ ಶುಶ್ರೂಷಕರು, ಕೌನ್ಸಿಲರ್‍ಗಳು ಇತರರು ಇದ್ದರು.
ಪೌಷ್ಟಿಕ ಮಾಸಾಚರಣೆ ಅಂಗವಾಗಿ ವಿವಿಧ ಸ್ಪರ್ಧೆಗಳನ್ನು ಏರ್ಪಡಿಸಲಾಗಿತ್ತು, ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಬಹುಮಾನ ವಿತರಿಸಲಾಯಿತು. ಪ್ರಜ್ಞಾ ಪ್ರಾರ್ಥಿಸಿದರು, ಡಾ.ಪೂಜಾ ನಿರೂಪಿಸಿ, ಸ್ವಾಗತಿಸಿ ವಂದಿಸಿದರು.