Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:34 AM Tuesday 26-October 2021

ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗೆ ಅರ್ಜಿ ಆಹ್ವಾನ

23/09/2021

ಮಡಿಕೇರಿ ಸೆ.23 : ಪ್ರಸಕ್ತ(2021-22) ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಇಲಾಖೆಯ ಪರೀಕ್ಷಾ ಪೂರ್ವ ತರಬೇತಿ ಕೇಂದ್ರದ ಮೂಲಕ ಜೆಇಇ ಮತ್ತು ನೀಟ್ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಆನ್‍ಲೈನ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.
ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ (2021-22) ಪ್ರಥಮ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ ದ್ವಿತೀಯ ಪಿಯುಸಿ ಮುಕ್ತಾಯದವರೆಗೂ 24 ತಿಂಗಳು ಅಥವಾ 2023 ರ ಏಪ್ರಿಲ್ /ಮೇ ಮಾಹೆಯಲ್ಲಿ ನಡೆಯಲಿರುವ ಜೆಇಇ/ ನೀಟ್ ಪ್ರವೇಶ ಪರೀಕ್ಷೆಯವರೆಗೂ ಹಾಗೂ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ವ್ಯಾಸಂಗ ಮಾಡುತ್ತಿರುವ ಅಭ್ಯರ್ಥಿಗಳಿಗೆ 10 ತಿಂಗಳು ಅಥವಾ 2022 ರ ಏಪ್ರಿಲ್/ ಮೇ ಮಾಹೆಯಲ್ಲಿ ನಡೆಯಲಿರುವ ಜೆ.ಇ.ಇ/ ನೀಟ್ ಪ್ರವೇಶ ಪರೀಕ್ಷೆಯವರೆಗೂ ಆನ್‍ಲೈನ್ ತರಬೇತಿ ಪಡೆಯಲು ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿಯನ್ನು ಸಮಾಜ ಕಲ್ಯಾಣ ಇಲಾಖೆಯ ವೆಬ್‍ಸೈಟ್ www.sw.kar.nic.in ನಲ್ಲಿ ಸೆಪ್ಟೆಂಬರ್ 30 ರ ಸಂಜೆ 5.30 ರೊಳಗೆ ಸಲ್ಲಿಸಲು ಅವಕಾಶವಿದೆ.
ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಕೊಡಗು ಜಿಲ್ಲೆ, ಮಡಿಕೇರಿ-08272-225531. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ, ಮಡಿಕೇರಿ-08272-223552. ಸಹಾಯಕ ನಿರ್ದೇಶಕರ ಕಚೇರಿ, ಸಮಾಜ ಕಲ್ಯಾಣ ಇಲಾಖೆ ಸೋಮವಾರಪೇಟೆ-08276-281115 ಹಾಗೂ ಸಹಾಯಕ ನಿರ್ದೇಶಕರ ಕಚೇರಿ ಸಮಾಜ ಕಲ್ಯಾಣ ಇಲಾಖೆ ಪೊನ್ನಂಪೇಟೆ-08274-249476 ನ್ನು  ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕರಾದ ಶೇಖರ್ ಅವರು ತಿಳಿಸಿದ್ದಾರೆ.