ಸೆ.24 ರಂದು ಮಡಿಕೇರಿಯಲ್ಲಿ ಜಿಲ್ಲಾ ಮಟ್ಟದ ರಫ್ತುದಾರರ ಸಮಾವೇಶ

23/09/2021

ಮಡಿಕೇರಿ ಸೆ.23 : ವಾಣಿಜ್ಯ ಮತ್ತು ಕೈಗಾರಿಕೆ ಮಂತ್ರಾಲಯ, ಭಾರತ ಸರ್ಕಾರ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕರ್ನಾಟಕ ಸರ್ಕಾರ ವಿಶ್ವೇಶರಯ್ಯ ವ್ಯಾಪಾರ ಉತ್ತೇಜನ ಕೇಂದ್ರ, ಬೆಂಗಳೂರು ಹಾಗೂ ಜಿಲ್ಲಾ ಕೈಗಾರಿಕಾ ಕೇಂದ್ರ, ಮಡಿಕೇರಿ ಇವರ ಸಂಯುಕ್ತ ಆಶ್ರಯದಲ್ಲಿ ಅಜಾದಿ ಕಾ ಅಮೃತ್ ಮಹೋತ್ಸವ್ ಕಾರ್ಯಕ್ರಮದ ಅಂಗವಾಗಿ ಜಿಲ್ಲಾ ಮಟ್ಟದ ರಫ್ತುದಾರರ ಸಮಾವೇಶ ಮತ್ತು ರಫ್ತು ಉತ್ಪನ್ನಗಳ ವಸ್ತು ಪ್ರದರ್ಶನವು ಸೆಪ್ಟೆಂಬರ್ 24 ರಂದು ಮಧ್ಯಾಹ್ನ 12.30 ಗಂಟೆಗೆ ನಗರದ ಜಿಲ್ಲಾ ಕೈಗಾರಿಕಾ ಕೇಂದ್ರದ ಸಭಾಂಗಣದಲ್ಲಿ ನಡೆಯಲಿದೆ.
ಜಿಲ್ಲಾಧಿಕಾರಿ ಚಾರುಲತಾ ಸೋಮಲ್, ಜಿ.ಪಂ.ಸಿಇಒ ಭನ್ವರ್ ಸಿಂಗ್ ಮೀನಾ, ಜಿಲ್ಲಾ ಸಣ್ಣ ಕೈಗಾರಿಕಾ ಉದ್ದಿಮೆದಾರರ ಸಂಘದ ಅಧ್ಯಕ್ಷರಾದ ಪ್ರವೀಣ್ ಎ.ಎನ್, ಜಿಲ್ಲಾ ಚೇಂಬರ್ ಆಫ್ ಕಾಮರ್ಸ್‍ನ ಎಂ.ಬಿ.ದೇವಯ್ಯ, ಕುಶಾಲನಗರ ಎಸ್.ಎಲ್.ಎನ್. ಕಾಫಿ ವ್ಯವಸ್ಥಾಪಕ ನಿರ್ದೇಶಕರಾದ ಸಾತಪ್ಪನ್ ಎನ್. ಇತರರು ಪಾಲ್ಗೊಳ್ಳಲಿದ್ದಾರೆ.