Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:48 AM Tuesday 26-October 2021

ರಾಜಾರಾವ್ ಹೇಳಿಕೆ ಹಾಸ್ಯಾಸ್ಪದ : ಬಿಜೆಪಿ ಎಸ್.ಟಿ ಮೋರ್ಚಾ ಅಸಮಾಧಾನ

25/09/2021

ಮಡಿಕೇರಿ ಸೆ.25 : ಸೋಮವಾರಪೇಟೆ ತಾಲ್ಲೂಕಿನ ಬಸವನಹಳ್ಳಿ ಗಿರಿಜನ ಲ್ಯಾಂಪ್ಸ್ ಸಹಕಾರ ಸಂಘದಲ್ಲಿ ನಡೆದಿರುವ ಹಣ ದುರುಪಯೋಗ ಪ್ರಕರಣದ ಕುರಿತು ಶಾಸಕ ಎಂ.ಪಿ.ಅಪ್ಪಚ್ಚುರoಜನ್ ಅವರು ವಿಧಾನಸಭಾ ಅಧಿವೇಶನದಲ್ಲಿ ವಿಷಯ ಪ್ರಸ್ತಾಪಿಸುವ ಮೂಲಕ ತಮ್ಮ ಜವಾಬ್ದಾರಿಯನ್ನು ಮೆರೆದಿದ್ದಾರೆ. ಇದನ್ನೇ ಕ್ಷುಲ್ಲಕ ರಾಜಕಾರಣವೆಂದು ಟೀಕಿಸುತ್ತಿರುವ ಲ್ಯಾಂಪ್ಸ್ ಸಹಕಾರ ಸಂಘದ ಮಾಜಿ ಅಧ್ಯಕ್ಷ ಹಾಗೂ ಹಾಲಿ ನಿರ್ದೇಶಕ ಎಸ್.ಎನ್.ರಾಜಾರಾವ್ ಅವರ ಹೇಳಿಕೆ ಹಾಸ್ಯಾಸ್ಪದವಾಗಿದೆ ಎಂದು ಬಿಜೆಪಿ ಎಸ್.ಟಿ ಮೋರ್ಚಾದ ರಾಜ್ಯ ನಿರ್ದೇಶಕ ಹಾಗೂ ಕೊಡಗು ಜಿಲ್ಲಾಧ್ಯಕ್ಷ ಮಿಟ್ಟುರಂಜಿತ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು, ದುರ್ಬಲರ ಏಳಿಗೆಗಾಗಿ ಇರುವ ಗಿರಿಜನ ಲ್ಯಾಂಪ್ಸ್ ಸಹಕಾರ ಸಂಘದಲ್ಲಿ ಹಣ ದುರುಪಯೋಗವಾಗಿರುವುದು ಖಂಡನೀಯವಾಗಿದ್ದು, ಜನಪರ ಕಾಳಜಿ ಇರುವ ಶಾಸಕರು ಈ ಕುರಿತು ಪ್ರಶ್ನಿಸಿರುವುದು ಸ್ವಾಗತಾರ್ಹವೆಂದು ತಿಳಿಸಿದ್ದಾರೆ.
ಹಗರಣಕ್ಕೆ ಸಂಬoಧಿಸಿದoತೆ ಸಂಘದ ಆಡಳಿತ ಮಂಡಳಿ ಸರ್ಕಾರದ ಗಮನ ಸೆಳೆದಿದೆ. ಶಾಸಕರು ಕೂಡ ನ್ಯಾಯಬದ್ಧವಾಗಿ ಹಣ ದುರುಪಯೋಗದ ವಿರುದ್ಧ ಮಾತನಾಡಿದ್ದಾರೆ. ಸಹಕಾರ ಸಚಿವರು ಸಂಬoಧಪಟ್ಟ ಇಲಾಖೆಯ ಅಧಿಕಾರಿಗಳಿಗೆ ಕ್ರಮ ಕೈಗೊಳ್ಳುವಂತೆ ಈಗಾಗಲೇ ಸೂಚನೆ ನೀಡಿದ್ದಾರೆ. ಆದ್ದರಿಂದ ತಪ್ಪಿತಸ್ಥರಿಂದಲೇ ತಕ್ಷಣ ಹಣ ವಸೂಲಿ ಮಾಡಿ ಶಿಕ್ಷೆಗೆ ಗುರಿ ಮಾಡುವ ಮೂಲಕ ಗಿರಿಜನರಿಗೆ ನ್ಯಾಯ ದೊರಕಿಸಿಕೊಡಬೇಕೆಂದು ಮಿಟ್ಟುರಂಜಿತ್ ಒತ್ತಾಯಿಸಿದ್ದಾರೆ.
ಜನಪರ ರಾಜಕಾರಣ ಮಾಡುತ್ತಿರುವ ಶಾಸಕರ ಬಗ್ಗೆ ಇಲ್ಲಸಲ್ಲದ ಆರೋಪ ಮಾಡುತ್ತಿರುವ ರಾಜಾರಾವ್ ಅವರೇ ಪಕ್ಷದಿಂದ ಪಕ್ಷಕ್ಕೆ ಹಾರುವ ಮೂಲಕ ಅಧಿಕಾರ ದಾಹದ ಕ್ಷುಲ್ಲಕ ರಾಜಕಾರಣ ಮಾಡುತ್ತಿದ್ದಾರೆ ಎಂದು ಅವರು ಟೀಕಿಸಿದ್ದಾರೆ.
ಜಿಲ್ಲೆಯ ಶಾಸಕದ್ವಯರಾದ ಎಂ.ಪಿ.ಅಪ್ಪಚ್ಚುರoಜನ್ ಹಾಗೂ ಕೆ.ಜಿ.ಬೋಪಯ್ಯರಿಂದ ಗಿರಿಜನ ಸಮುದಾಯಕ್ಕೆ ಯಾವುದೇ ರೀತಿಯಲ್ಲಿ ಅನ್ಯಾಯವಾಗಿಲ್ಲ. ಸರ್ಕಾರದಿಂದ ದೊರೆಯುವ ಎಲ್ಲಾ ಸೌಲಭ್ಯಗಳನ್ನು ದುರ್ಬಲ ವರ್ಗಕ್ಕೆ ತಲುಪಿಸುವ ಕಾರ್ಯ ಮಾಡುತ್ತಿದ್ದಾರೆ. ಕಾಡಿನ ಮಕ್ಕಳಿಗೆ ಮೂಲಭೂತ ಸೌಲಭ್ಯ ದೊರೆಯಬೇಕೆಂದು ಹೋರಾಟ ನಡೆಸುತ್ತಲೇ ಬಂದಿದ್ದಾರೆ. ಇತ್ತೀಚೆಗೆ ಕೆ.ಜಿ.ಬೋಪಯ್ಯ ಅವರು ಕೊಡಗಿನ ಗಡಿಯ ನಾಗರಹೊಳೆ ವ್ಯಾಪ್ತಿಯ 600 ಕ್ಕೂ ಅಧಿಕ ಆದಿವಾಸಿಗಳಿಗೆ ಭೂಮಿಯ ಹಕ್ಕುಪತ್ರವನ್ನು ನೀಡಿ ಆಶ್ರಯ ದೊರೆಯುವಂತೆ ಮಾಡಿದ್ದಾರೆ.
ಅಪ್ಪಚ್ಚುರಂಜನ್ ಅವರು ಜಿಲ್ಲೆಯ ಜ್ವಲಂತ ಸಮಸ್ಯೆಗಳ ಬಗ್ಗೆ ಅಧಿವೇಶನದಲ್ಲಿ ಧ್ವನಿ ಎತ್ತುತ್ತಲೇ ಇದ್ದಾರೆ. ಇದರ ಜೊತೆಯಲ್ಲೇ ಭ್ರಷ್ಟಾಚಾರದ ವಿರುದ್ಧವೂ ಮಾತನಾಡಿದ್ದಾರೆ. ಇದನ್ನು ಸಹಿಸಿಕೊಳ್ಳಲಾಗದ ರಾಜಾರಾವ್ ಅವರು ಬಾಯಿಗೆ ಬಂದoತೆ ಮಾತನಾಡುತ್ತಿದ್ದಾರೆ ಎಂದು ಆರೋಪಿಸಿರುವ ಮಿಟ್ಟುರಂಜಿತ್, ಲ್ಯಾಂಪ್ಸ್ ಸಹಕಾರ ಸಂಘದ ಹಣ ದುರುಪಯೋಗದ ಕುರಿತು ಉನ್ನತ ಮಟ್ಟದ ತನಿಖೆಯಾಗಲಿ ಎಂದು ಒತ್ತಾಯಿಸಿದ್ದಾರೆ.
ಜಿ.ಪಂ ಮಾಜಿ ಸದಸ್ಯರು ಹಾಗೂ ರಾಜ್ಯ ಬಿಜೆಪಿ ಎಸ್.ಟಿ ಮೋರ್ಚಾದ ಕಾರ್ಯದರ್ಶಿ ಮಂಜುಳಾ, ರಾಜ್ಯ ಸದಸ್ಯ ಹಾಗೂ ಲ್ಯಾಂಪ್ಸ್ ಮಾಜಿ ನಿರ್ದೇಶಕ ಬಿ.ಕೆ.ಮೋಹನ್, ಮೋರ್ಚಾದ ಜಿಲ್ಲಾ ಸಂಚಾಲಕ ಪಿ.ಎಸ್.ಮುತ್ತ, ಪ್ರಧಾನ ಕಾರ್ಯದರ್ಶಿಗಳಾದ ಪರಮೇಶ್ವರ್, ಡಿ.ಆರ್.ಪ್ರಭಾಕರ್, ಉಪಾಧ್ಯಕ್ಷ ಕೆ.ಜಿ.ಕುಮಾರಸ್ವಾಮಿ ಹಾಗೂ ಲ್ಯಾಂಪ್ಸ್ ಸದಸ್ಯ ಆರ್.ಪ್ರಭಾಕರ್ ಇದಕ್ಕೆ ಧ್ವನಿಗೂಡಿಸಿದ್ದಾರೆ.