Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:07 AM Tuesday 26-October 2021

ಶಿಕ್ಷಕರ ದಿನಾಚರಣೆ : ಪಾಲಿಬೆಟ್ಟ ಲಯನ್ಸ್ ಕ್ಲಬ್ ನಿಂದ ಮುಖ್ಯ ಶಿಕ್ಷಕ ಪ್ರೇಮಕುಮಾರ್ ಗೆ ಸನ್ಮಾನ

25/09/2021

ಮಡಿಕೇರಿ ಸೆ.25 :  ದಕ್ಷಿಣ ಕೊಡಗಿನ ಪಾಲಿಬೆಟ್ಟ ಲಯನ್ಸ್ ಕ್ಲಬ್ ವತಿಯಿಂದ ಸೆ.23ರಂದು  ಶಿಕ್ಷಕರ ದಿನಾಚರಣೆ ಆಚರಿಸಲಾಯಿತು.
ಶಾಲಾ ಮಕ್ಕಳು ಹಾಗೂ ಸಮುದಾಯದಲ್ಲಿ ವಿಜ್ಞಾನ ಮತ್ತು ಪರಿಸರ ಚಟುವಟಿಕೆಗಳಲ್ಲಿ ಜಾಗೃತಿ ಮೂಡಿಸಲು ತಮ್ಮನ್ನು‌ ಎರಡು ದಶಕಗಳಿಂದ ನಿರಂತರವಾಗಿ ತೊಡಗಿಸಿಕೊಂಡಿರುವ ವಿಜ್ಞಾನ ಕಾರ್ಯಕ್ರಮಗಳ ಸಂಘಟಕ, ಕೂಡುಮಂಗಳೂರು ಸರ್ಕಾರಿ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ, ಕರ್ನಾಟಕ ರಾಜ್ಯ ಪರಿಸರ ಪ್ರಶಸ್ತಿ ಪುರಸ್ಕೃತ  ಟಿ.ಜಿ.ಪ್ರೇಮಕುಮಾರ್ ಅವರನ್ನು ಲಯನ್ಸ್ ಕ್ಲಬ್ ವತಿಯಿಂದ ಕ್ಲಬ್ ನ ಪ್ರಾಂತೀಯ ಅಧ್ಯಕ್ಷ ಧನು ಉತ್ತಯ್ಯ ಸನ್ಮಾನಿಸಿ ಗೌರವಿಸಿದರು.
ನಂತರ ಮಾತನಾಡಿದ ಲಯನ್ಸ್ ಕ್ಲಬ್ ನ ಪ್ರಾಂತೀಯ ಅಧ್ಯಕ್ಷ ಧನು ಉತ್ತಯ್ಯ, ವಿದ್ಯಾರ್ಥಿಗಳ ಉಜ್ವಲ ಭವಿಷ್ಯ ರೂಪಿಸುವ ದಿಸೆಯಲ್ಲಿ ತಮ್ಮ ನಿಸ್ವಾರ್ಥ ಸೇವೆಯನ್ನು ಸಮಾಜಕ್ಕೆ ನೀಡುವ ಮೂಲಕ ಶೈಕ್ಷಣಿಕ ಕ್ಷೇತ್ರದ ಪ್ರಗತಿಗೆ ದುಡಿಯುವ ಶಿಕ್ಷಕರನ್ನು ಗೌರವಿಸುವುದು ಉತ್ತಮ ಕಾರ್ಯವಾಗಿದೆ. ಇಂತಹ ಕಾರ್ಯದಲ್ಲಿ ತೊಡಗಿರುವ ಈ ಕ್ಲಬ್ ನ ಸೇವಾ ಕಾರ್ಯದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಪ್ರತಿ ಮಗುವಿನ ವಿಭಿನ್ನ ಸಾಮರ್ಥ್ಯ ಹಾಗೂ ಪ್ರತಿಭೆಗಳಿರುವುದನ್ನು ಮತ್ತು ಅವರ ಅಗತ್ಯತೆ ಹಾಗೂ ಆಸಕ್ತಿಗಳನ್ನು ಗಮನದಲ್ಲಿರಿಸಿ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಯತ್ತ ಗಮನಹರಿಸುವಲ್ಲಿ ತೊಡಗಿಸಿಕೊಳ್ಳಲು ಶಿಕ್ಷಕರ ಸೇವಾ ಕಾರ್ಯ ಶ್ಲಾಘನೀಯ ಎಂದರು.
ಶಿಕ್ಷಕ ಪ್ರೇಮಕುಮಾರ್  ತಮ್ಮನ್ನು ಶಿಕ್ಷಕ ವೃತ್ತಿಯೊಂದಿಗೆ ಶಿಕ್ಷಣ ಮತ್ತಿತರ ಇಲಾಖೆಗಳ ಮೂಲಕ ಮಕ್ಕಳಲ್ಲಿ ವಿಜ್ಞಾನ ಮತ್ತು ಪರಿಸರ ಚಟುವಟಿಕೆಗಳಲ್ಲಿ ಆಸಕ್ತಿ ಬೆಳೆಸಲು ಕೈಗೊಂಡಿರುವ ಸಮರ್ಪಣಾ ಸೇವಾ ಮನೋಭಾವ ಶ್ಲಾಘನೀಯ  ಎಂದರು.
ಲಯನ್ಸ್ ಕ್ಲಬ್ ನ ಮಾಜಿ ಅಧ್ಯಕ್ಷ ಡಾ ಎ.ಸಿ.ಗಣಪತಿ ಮಾತನಾಡಿ, ಜಿಲ್ಲೆಯಲ್ಲಿ  ಪ್ರೇಮಕುಮಾರ್ ಅವರು ವಿಜ್ಞಾನ ಪರಿಷತ್ತಿನ ಮೂಲಕ ಪ್ರತಿ ವರ್ಷ ಸಂಘಟಿಸುತ್ತಿರುವ ರಾಷ್ಟ್ರೀಯ ಮಕ್ಕಳ ವಿಜ್ಞಾನ ಸಮಾವೇಶದಲ್ಲಿ ಜಿಲ್ಲೆಯ ಮಕ್ಕಳನ್ನು  ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದಲ್ಲಿ ಉತ್ತಮ ಸಾಧನೆ ಪ್ರದರ್ಶಿಸುತ್ತಿರುವುದು ಹೆಮ್ಮೆಯ ಸಂಗತಿ . ಹಾಗೆಯೇ, ವಿದ್ಯಾರ್ಥಿಗಳು ಮತ್ತು ಜನರಲ್ಲಿ ಗಣೇಶ ಹಬ್ಬದಲ್ಲಿ ಪರಿಸರ ಸ್ನೇಹಿ ಅರಿಶಿಣ ಗಣೇಶ ಮೂರ್ತಿ ಅಭಿಯಾನ ಹಾಗೂ ದೀಪಾವಳಿ ಸಂದರ್ಭದಲ್ಲಿ ಪಟಾಕಿ ತ್ಯಜಿಸುವ ಮೂಲಕ ಮಾಲಿನ್ಯ ತಡೆಗೆ ನಿರಂತರವಾಗಿ ಪರಿಸರ ಜಾಗೃತಿ ಮೂಡಿಸುತ್ತಿರುವುದಕ್ಕೆ ಜಿಲ್ಲೆಯಲ್ಲಿ ಉತ್ತಮ ಸ್ಪಂದನೆ ಲಭಿಸಿದೆ. ಇಂತಹ ಚಟುವಟಿಕೆಗಳು ಶಿಕ್ಷಕರ ಸೇವಾ ಕಾರ್ಯಕ್ಕೆ ಮಾದರಿ  ಎಂದರು.
ಅಧ್ಯಕ್ಷತೆ ವಹಿಸಿದ್ದ ಕ್ಲಬ್ ನ ಅಧ್ಯಕ್ಷ ಕೆ.ಆರ್.ಬಾಬು ಮಾತನಾಡಿ, ಕ್ಲಬ್ ವತಿಯಿಂದ ಶಿಕ್ಷಣ, ಪರಿಸರ ಸಂರಕ್ಷಣೆ ಹಾಗೂ ಸಾಮಾಜಿಕ ಚಟುವಟಿಕೆಗಳಿಗೆ ಒತ್ತು ನೀಡಲಾಗುತ್ತಿದೆ. ಪರಿಸರ ಕ್ಷೇತ್ರದಲ್ಲಿ ವಿಶೇಷ ಛಾಪು ಮೂಡಿಸುತ್ತಿರುವ ಶಿಕ್ಷಕ ಪ್ರೇಮಕುಮಾರ್ ಅವರ ಕಾರ್ಯವು ಮಾದರಿಯಾದುದು ಎಂದರು. ಕ್ಲಬ್ ನ ಕಾರ್ಯದರ್ಶಿ ಡಾ ಜಿ.ಎಂ.ದೇವಗಿರಿ ಮಾತನಾಡಿ, ಪೊನ್ನಂಪೇಟೆ ಅರಣ್ಯ ಕಾಲೇಜಿನಲ್ಲಿ ಪರಿಸರ ಶಿಕ್ಷಣ ಕೇಂದ್ರದ ವತಿಯಿಂದ ನಡೆದ ಪರಿಸರ ಶಿಕ್ಷಣ ತರಬೇತಿ ಹಾಗೂ ವಿವಿಧ ಪರಿಸರಾತ್ಮಕ ಚಟುವಟಿಕೆಗಳಿಂದ ಪ್ರೇರಿತರಾದ ಶಿಕ್ಷಕ ಪ್ರೇಮಕುಮಾರ್ , ಡಿ.ಕೃಷ್ಣ ಚೈತನ್ಯ ಸೇರಿದಂತೆ ಹಲವು ಶಿಕ್ಷಕರು ಜಿಲ್ಲೆಯಲ್ಲಿ ಶಾಲಾ ಇಕೋ ಕ್ಲಬ್ ಮೂಲಕ ಪರಿಸರ ಚಟುವಟಿಕೆಗಳನ್ನು ಕೈಗೊಂಡು ಮಕ್ಕಳಲ್ಲಿ ಪರಿಸರ ಪ್ರಜ್ಞೆ ಮೂಡಿಸುತ್ತಿರುವುದು ಉತ್ತಮವಾದುದು ಎಂದರು.
ಸನ್ಮಾನ ಸ್ವೀಕರಿಸಿ ಮಾತನಾಡಿದ ಮುಖ್ಯ ಶಿಕ್ಷಕ ಟಿ.ಜಿ.ಪ್ರೇಮಕುಮಾರ್, ಜಿಲ್ಲೆಯ ಶಾಲೆಗಳಲ್ಲಿ ವಿಜ್ಞಾನ ಮತ್ತು ಪರಿಸರ ಕಾರ್ಯಕ್ರಮಗಳ ಮೂಲಕ ಮಕ್ಕಳಲ್ಲಿ ವಿಜ್ಞಾನ ಕಲಿಕೆ ಬಗ್ಗೆ ಆಸಕ್ತಿ ಹಾಗೂ ಪರಿಸರದ ಕುರಿತು ಜಾಗೃತಿ ಮೂಡಿಸಲು ಸಂಘಟನೆಗಳು, ಶಿಕ್ಷಕರು, ಪೋಷಕರು ನೀಡುತ್ತಿರುವ ಪ್ರೋತ್ಸಾಹದಿಂದಾಗಿ ಕೊಡಗಿನ ಮಕ್ಕಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದ ವಿಜ್ಞಾನದ ವಿವಿಧ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಪ್ರದರ್ಶಿಸಲು ಸಹಕಾರಿಯಾಗಿದೆ ಎಂದರು.
ಮಕ್ಕಳಲ್ಲಿ ಎಳೆಯ ವಯಸ್ಸಿನಲ್ಲಿಯೇ ವೈಜ್ಞಾನಿಕ ಮನೋಭಾವ ಬೆಳೆಸಿದರೆ ಭವಿಷ್ಯದಲ್ಲಿ ಅವರು ಉತ್ತಮ ವ್ಯಕ್ತಿಗಳಾಗಿ ರೂಪುಗೊಳ್ಳಲು ಸಾಧ್ಯ ಎಂದರು. ಕ್ಲಬ್ ನ ಪ್ರಾಂತೀಯ ಮೊದಲ ಮಹಿಳೆ ಜ್ಯೋತಿ ಉತ್ತಯ್ಯ,
ವಲಯ ಅಧ್ಯಕ್ಷರಾದ ಶ್ಯಾಮ್ ಅಯ್ಯಪ್ಪ, ಪಂಚಮ್, ಸವಿತ ಬೋಪಣ್ಣ , ಕ್ಲಬ್ ನ ಖಜಾಂಚಿ ಎಂ.ಎನ್.ಅಚ್ಚಯ್ಯ ಇದ್ದರು. ಶಿಕ್ಷಕರಾದ ಟಿ.ಬಿ.ಮಂಜುನಾಥ್, ಜಿ.ಶ್ರೀಹರ್ಷ,ಎಂ.ಎನ್.ವೆಂಕಟನಾಯಕ್ ಇತರರು  ಹಾಜರಿದ್ದರು.