Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:15 AM Tuesday 26-October 2021

ಬಂದ್ ಬದಲು ಹೋರಾಟಕ್ಕೆ ಬೆಂಬಲ : ಚೇಂಬರ್ ಆಫ್ ಕಾಮರ್ಸ್ ಸ್ಪಷ್ಟನೆ

25/09/2021

ಮಡಿಕೇರಿ ಸೆ.25 : ರೈತಪರ ಕಾಳಜಿಯಿಂದ ವಿವಿಧ ಸಂಘಟನೆಗಳು ಸೆ.27 ರಂದು ಭಾರತ ಬಂದ್ ಗೆ ಕರೆ ನೀಡಿದ್ದು, ಕೊಡಗು ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ ಹೋರಾಟಕ್ಕೆ ಬೆಂಬಲ ಸೂಚಿಸುತ್ತದೆ. ಆದರೆ ನಷ್ಟದ ನಡುವೆ ಅಂಗಡಿ ಮುಂಗಟ್ಟುಗಳನ್ನು ಬಂದ್ ಮಾಡುವುದು ಬೇಡ ಎನ್ನುವ ನಿರ್ಧಾರಕ್ಕೆ ಬಂದಿರುವುದಾಗಿ ಚೇಂಬರ್ ಜಿಲ್ಲಾಧ್ಯಕ್ಷ ಎಂ.ಬಿ.ದೇವಯ್ಯ ಹಾಗೂ ಪ್ರಧಾನ ಕಾರ್ಯದರ್ಶಿ ಅಂಬೆಕಲ್ಲು ನವೀನ್ ತಿಳಿಸಿದ್ದಾರೆ.
ಪತ್ರಿಕಾ ಪ್ರಕಟಣೆ ನೀಡಿರುವ ಅವರು ಕಳೆದ ಮೂರು ವರ್ಷಗಳಿಂದ ಅತಿವೃಷ್ಟಿ ಮತ್ತು ಕೋವಿಡ್ ಸಂದಿಗ್ಧ ಪರಿಸ್ಥಿತಿಯಿಂದ ನಿರಂತರವಾಗಿ ಅಂಗಡಿ, ಮುಂಗಟ್ಟುಗಳನ್ನು ಮುಚ್ಚಿ ವರ್ತಕರು ಸಾಕಷ್ಟು ಕಷ್ಟ, ನಷ್ಟಗಳಿಗೆ ಸಿಲುಕಿದ್ದಾರೆ. ಆದ್ದರಿಂದ ಸೋಮವಾರ ಬಂದ್ ಬದಲು ಹೋರಾಟಕ್ಕೆ ಬೆಂಬಲ ಸೂಚಿಸುತ್ತಿರುವುದಾಗಿ ಸ್ಪಷ್ಟಪಡಿಸಿದ್ದಾರೆ.
ದೇಶದ ಅನ್ನದಾತರಾಗಿರುವ ರೈತರ ಬಗ್ಗೆ ವರ್ತಕರಿಗೆ ಅಪಾರ ಗೌರವವಿದೆ. ಕೃಷಿಕರು ಅನುಭವಿಸುತ್ತಿರುವ ಸಮಸ್ಯೆಗಳ ಬಗ್ಗೆ ಅನುಕಂಪವಿದೆ. ಆದರೆ ವರ್ತಕ ಸಮುದಾಯ ಕೂಡ ನಷ್ಟದಲ್ಲಿರುವುದರಿಂದ ಈ ನಿರ್ಧಾರಕ್ಕೆ ಬಂದಿರುವುದಾಗಿ ಹೇಳಿದ್ದಾರೆ.