Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:25 AM Tuesday 26-October 2021

ಕೊಡಗು : ಪ್ರತಿಭಟನೆಯ ಮೂಲಕ ಸರ್ಕಾರದ ಕ್ರಮವನ್ನು ಖಂಡಿಸಿದ ಸಂಘಟನೆಗಳು

27/09/2021

ಮಡಿಕೇರಿ ಸೆ.27 : ಕೇಂದ್ರ ಸರಕಾರ ಜಾರಿಗೆ ತಂದಿರುವ 3 ಕೃಷಿ ಮಸೂದೆಗಳು ರೈತರಿಗೆ ಮಾರಕವಾಗಿದ್ದು, ಈ ಮಸೂದೆಗಳನ್ನು ತಕ್ಷಣವೇ ಹಿಂದಕ್ಕೆ ಪಡೆಯುವಂತೆ ಆಗ್ರಹಿಸಿ ರೈತ ಸಂಘದ ಮುಂದಾಳತ್ವದಲ್ಲಿ ವಿವಿಧ ರಾಜಕೀಯ ಪಕ್ಷಗಳ ಸಹಿತ ಸಂಘ ಸಂಸ್ಥೆಗಳು ಕೊಡಗು ಜಿಲ್ಲೆಯ ವಿವಿಧೆಡೆ ಪ್ರತಿಭಟನೆ ನಡೆಸಿದವು.
ಸುರಿಯುತ್ತಿದ್ದ ಮಳೆಯ ನಡುವೆಯೇ ನಗರದ ಜನರಲ್ ತಿಮ್ಮಯ್ಯ ವೃತ್ತದ ಬಳಿ ಮಾನವ ಸರಪಳಿ ರಚಿಸಿ ಮಸೂದೆ ಖಂಡಿಸಿದ ಪ್ರತಿಭಟನಾಕಾರರು, ಕೇಂದ್ರ ಸರಕಾರದ ವಿರುದ್ದ ತೀವ್ರ ಆಕ್ರೋಷ ವ್ಯಕ್ತಪಡಿಸಿದರು. ಜಾರಿಗೆ ತರಲಾಗಿರುವ ಕೃಷಿ ಮಸೂದೆ ಕಾರ್ಪೋರೇಟ್ ಸಂಸ್ಥೆಗಳಿಗೆ ಕೃಷಿ ಕ್ಷೇತ್ರವನ್ನು ಸಮರ್ಪಿಸುವಂತಿದೆ. ಈ ಮಸೂದೆ ಸಂಪೂರ್ಣವಾಗಿ ರೈತ ವಿರೋಧಿಯಾಗಿದೆ ಎಂದು ಆರೋಪಿಸಿದ ಪ್ರತಿಭಟನಾಕಾರರು ತಕ್ಷಣವೇ ಅದನ್ನು ಹಿಂಪಡೆಯಬೇಕು ಅಥವಾ ಸಂಪೂರ್ಣವಾಗಿ ಮಾರ್ಪಡಿಸಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭ ಮಾತನಾಡಿದ ಕೊಡಗು ಜಿಲ್ಲಾ ರೈತ ಸಂಘದ ಜಿಲ್ಲಾದ್ಯಕ್ಷ ಕಾಡ್ಯಮಾಡ ಮನು ಸೋಮಯ್ಯ, ರೈತ ವಿರೋಧಿ ಕೃಷಿ ಮಸೂದೆಯನ್ನು ಕೇಂದ್ರ ಸರಕಾರ ಜಾರಿಗೆ ತರುವ ಮೂಲಕ ಕೃಷಿ ಕ್ಷೇತ್ರವನ್ನು ಖಾಸಗಿ ಸಂಸ್ಥೆಗಳಿಗೆ ವಹಿಸಲು ಹೊರಟಿದೆ ಎಂದು ಆರೋಪಿಸಿದರು.
2020ರ ಸೆ,27ರಂದು ಈ ಮಸೂದೆಗೆ ರಾಷ್ಟ್ರಪತಿಗಳು ಅಂಕಿತ ಹಾಕಿದ್ದಾರೆ. ಈ ಮಸೂದೆಯಿಂದ ರೈತರಿಗೆ ದ್ವಿಗುಣ ಲಾಭ ದೊರೆಯುತ್ತದೆ ಎಂದು ಕೇಂದ್ರ ಸರಕಾರ ಪ್ರತಿಪಾದಿಸಿತ್ತು. ಆ ಬಳಿಕ ರೈತರು, ಬೆಳೆಗಾರರು ಬೆಳೆಗಳನ್ನು ಬೆಳೆದಿದ್ದು, ಮಸೂದೆಯಲ್ಲಿ ಹೇಳಿದಂತೆ ಯಾವುದೇ ದ್ವಿಗುಣ ಲಾಭ ರೈತರಿಗೆ ದೊರೆಯಲಿಲ್ಲ ಎಂದು ಮನು ಸೋಮಯ್ಯ ಹೇಳಿದರು. ಗೊಬ್ಬರ, ಕೃಷಿ ಉಪಕರಣ, ಇಂಧನಗಳ ಬೆಲೆಗಳು ಮಾತ್ರವೇ ಏರಿಕೆಯಾಗಿದೆ ಎಂದು ಹೇಳಿದ ಮನು ಸೋಮಯ್ಯ, ರೈತರ ಸ್ಥಿತಿಯಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು. ಕಾಫಿ ಬೆಳೆಯುವಲ್ಲಿ ಕೊಡಗು ಜಿಲ್ಲೆ ಪ್ರಮುಖ ಪಾತ್ರ ವಹಿಸುತ್ತಿದೆ. ಅಡಕೆ ಬೆಳೆಯುವಲ್ಲಿ ಭಾರತ ವಿಶ್ವದಲ್ಲೇ ಪ್ರಥಮ ಸ್ಥಾನದಲ್ಲಿದ್ದರೆ, ಕರಿಮೆಣಸು ಬೆಳೆಯುವ ದೇಶಗಳ ಪೈಕಿ ಭಾರತ ವಿಶ್ವದಲ್ಲೇ 4ನೇ ಸ್ಥಾನದಲ್ಲಿದೆ. ಈ ಎಲ್ಲಾ ಸ್ಥಾನಗಳು ರೈತರ ಶ್ರಮ ಮತ್ತು ಬೆವರಿನ ಹನಿಯ ಫಲವೇ ಹೊರತು ಕೃಷಿ ಮಸೂದೆಗಳಿಂದ ಆದ ಬದಲಾವಣೆ ಅಲ್ಲ ಎಂದು ಮನು ಸೋಮಯ್ಯ ಪ್ರತಿಪಾದಿಸಿದರು. ರೈತ ವಿರೋಧಿ ಕೃಷಿ ಮಸೂದೆಗಳನ್ನು ತಕ್ಷಣವೇ ಹಿಂದಕ್ಕೆ ಪಡೆಯಬೇಕು ಅಥವಾ ಅದನ್ನು ಸಂಪೂರ್ಣವಾಗಿ ಮಾರ್ಪಡಿಸಬೇಕು. ರೈತ ಮುಖಂಡರ ಜೊತೆ ಚರ್ಚಿಸಿ ಮಸೂದೆಗಳನ್ನು ಜಾರಿಗೊಳಿಸಬೇಕು ಎಂದು ಆಗ್ರಹಿಸಿದ ಮನು ಸೋಮಯ್ಯ, ರೈತರು ಮುಕ್ತ ಚರ್ಚೆಗೆ ಸಿದ್ದರಿದ್ದರೂ ಕೇಂದ್ರ ಸರಕಾರ ಮಾತುಕತೆ ನಡೆಸುತ್ತಿಲ್ಲ ಎಂದು ಆರೋಪಿಸಿದರು.
ಭೂಮಿ ಮತ್ತು ವಸತಿ ಹಕ್ಕು ವಂಚಿತರ ಹೋರಾಟ ಸಮಿತಿ ಅಧ್ಯಕ್ಷ ನಿರ್ವಾಣಪ್ಪ ಮಾತನಾಡಿ, ಉದ್ದೇಶಿತ ಕೃಷಿ ಮಸೂದೆಗಳು ಅದಾನಿ ಅಂಬಾನಿ ಸಂಸ್ಥೆಗಳಿಗೆ ನೆರವಾಗುತ್ತದೆ ಹೊರತು ರೈತರಿಗೆ ಇದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಟೀಕಿಸಿದರು. ಇಂದು ದೆಹಲಿ, ಹರಿಯಾಣ ಪಂಜಾಬ್‌ಗಳಲ್ಲಿ ಮಾತ್ರವೇ ರೈತರು ಹೊರಾಟ ಮಾಡುತ್ತಿದ್ದಾರೆ ಎಂದು ಬಿಂಬಿಸಲಾಗುತ್ತಿದೆ. ಆದರೆ ಹೋರಾಟ ದೇಶದ ಮೂಲೆ ಮೂಲೆಗಳಲ್ಲೂ ನಡೆಯುತ್ತಿದೆ. ಕೃಷಿ ಮಸೂದೆಗಳನ್ನು ಹಿಂಪಡೆಯುವ ವೆರೆಗೂ ಈ ಹೋರಾಟ ಮುಂದುವರೆಯುತ್ತದೆ ಎಂದು ಹೇಳಿದರು.
ಜೆಡಿಎಸ್ ಅಲ್ಪಸಂಖ್ಯಾತರ ಘಟಕದ ಜಿಲ್ಲಾಧ್ಯಕ್ಷ ಇಸಾಕ್ ಖಾನ್ ಮಾತನಾಡಿ, ಕೇಂದ್ರ ಸರಕಾರ ರೈತರ ಹಸಿರು ಶಾಲನ್ನು ಹೊದ್ದು ಅಧಿಕಾರಕ್ಕೆ ಏರಿದೆ. ಆ ಸಂದರ್ಭ ರೈತರೇ ದೇಶದ ಬೆನ್ನೆಲುಬು ಎಂದು ಹೇಳಿತ್ತು. ಆದರೆ ಇಂದು ರೈತ ವಿರೋಧಿ ಕೃಷಿ ಮಸೂದೆಯನ್ನು ಜಾರಿಗೆ ತರುವ ಮೂಲಕ ರೈತರ ಬೆನ್ನು ಮೂಳೆಯನ್ನು ಮುರಿಯುವ ಕೆಲಸ ಮಾಡುತ್ತಿದೆ ಎಂದು ಆರೋಪಿಸಿದರು.
ಎಸ್‌ಡಿಪಿಐ ರಾಜ್ಯ ಸಮಿತಿ ಸದಸ್ಯ ಅಮೀನ್ ಮೊಹಿಸಿನ್ ಮಾತನಾಡಿ, ಕೃಷಿ ಮಸೂದೆಗಳನ್ನು ಜಾರಿಗೆ ತರುವ ಮೂಲಕ ಎಪಿಎಂಸಿಗಳನ್ನು ಶಾಶ್ವತವಾಗಿ ರದ್ದು ಮಾಡುವ ಉದ್ದೇಶ ಕೇಂದ್ರ ಸರಕಾರಕ್ಕೆ ಇದೆ. ಕಾರ್ಪೋರೇಟರ್ ಸಂಸ್ಥೆಗಳು ಕೃಷಿ ಕೇತ್ರದ ಮೇಲೆ ಹಿಡಿತ ಸಾಧಿಸಲಿದ್ದು, ಖಾಸಗಿ ಮಂಡಿಗಳ ಮೂಲಕ ರೈತರ ಉತ್ಪನ್ನಗಳನ್ನು ಕಾರ್ಪೋರೇಟ್ ಸಂಸ್ಥೆಗಳು ಖರೀದಿಸಲು ಹುನ್ನಾರ ನಡೆಸಲಾಗಿದೆ. ಇದಕ್ಕಾಗಿಯೇ ಬೃಹತ್ ಗೋದಾಮುಗಳ ನಿರ್ಮಾಣ ಮಾಡಲಾಗುತ್ತಿದ್ದು, ಅಲ್ಲಿ ರೈತರ ಉತ್ಪನ್ನಗಳನ್ನು ಸಂಗ್ರಹಿಸಿ ಕೃತಕ ಅಭಾವ ಸೃಷ್ಟಿಸಿ ಅಧಿಕ ಲಾಭವನ್ನು ಖಾಸಗಿ ಸಂಸ್ಥೆಗಳು ಮಾಡಿಕೊಳ್ಳುತ್ತವೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ತೆನ್ನಿರ ಮೈನಾ ಮಾತನಾಡಿ, ರೈತರು ದೇಶದ ಅಭಿವೃದ್ದಿಗೆ ದೊಡ್ಡ ಕೊಡುಗೆಯನ್ನು ಭಿಕ್ಷೆಯ ರೂಪದಲ್ಲಿ ನೀಡಿದ್ದಾರೆ. ರೈತರು ತಿರುಗಿ ಬಿದ್ದರೆ ಎಲ್ಲರೂ ಮನೆಗೆ ಹೋಗ ಬೇಕಾದೀತು ಎಂದು ಹೇಳಿದ ಅವರು, ರೈತರ ಹೋರಾಟಕ್ಕೆ ಬೆಂಬಲಿಸುವುದು ಎಲ್ಲರ ಹೊಣೆಯಾಗಿದೆ ಎಂದು ಹೇಳಿದರು.
ಪ್ರತಿಭಟನೆಯಲ್ಲಿ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀತರ ಧರ್ಮಜಾ ಉತ್ತಪ್ಪ, ಕೃಷಿ ಮೋರ್ಚಾದ ನೆರವಂಡ ಉಮೇಶ್, ಫ್ಯಾನ್ಸಿ ಮುತ್ತಣ್ಣ, ವಸತಿ ಹಕ್ಕು ಹೋರಾಟ ಸಮಿತಿಯ ಜಯಪ್ಪ ಹಾನಗಲ್, ಎಸ್‌ಡಿಪಿಐನ ಮನ್ಸೂರ್, ಕಾಂಗ್ರೇಸ್‌ನ ನಗರ ಸಭಾ ಸದಸ್ಯ ರಾಜೇಶ್ ಯಲ್ಲಪ್ಪ, ದಲಿತ ಪರ ಸಂಘಟನೆಯ ಹೆಚ್.ಎಂ ಕಾವೇರಿ, ರೈತ ಸಂಘದ ಪದಾಧಿಕಾರಿಗಳು, ವಿವಿಧ ಸಂಘ-ಸoಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು.