Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:31 PM Tuesday 26-October 2021

ಜಿಲ್ಲಾಡಳಿತದ ವಿರುದ್ಧ ಪ್ರತಿಭಟನಾಕಾರರ ಅಸಮಾಧಾನ

27/09/2021

ಮಡಿಕೇರಿ ಸೆ.27 : ಜನರಲ್ ತಿಮ್ಮಯ್ಯ ವೃತ್ತದಲ್ಲಿ ಕೆಲಕಾಲ ಪ್ರತಿಭಟನೆ ನಡೆಸಿ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಬಳಿಕ ಕಾಲ್ನಡಿಗೆಯ ಮೂಲಕ ಜಿಲ್ಲಾಡಳಿತ ಭವನಕ್ಕೆ ತೆರಳಿದರು. ಜಿಲ್ಲಾಡಳಿತ ಭವನಕ್ಕೆ ಆಗಮಿಸಿದ ಪ್ರತಿಭಟನಾಕಾರರನ್ನು ಭವನದ ಪ್ರವೇಶ ದ್ವಾರವನ್ನು ಮುಚ್ಚುವ ಮೂಲಕ ತಡೆಹಿಡಿಯಲಾಯಿತು. ಇದಕ್ಕೆ ತೀವ್ರ ಆಕ್ರೋಷ ವ್ಯಕ್ತಪಡಿಸಿದ ಪ್ರತಿಭಟನಾಕಾರರು ಜಿಲ್ಲಾಡಳಿತದ ವಿರುದ್ಧವೂ ಧಿಕ್ಕಾರ ಕೂಗಿದರು.
ಸ್ಥಳಕ್ಕೆ ಜಿಲ್ಲಾಧಿಕಾರಿಗಳು ಖುದ್ದಾಗಿ ಆಗಮಿಸಿ ಮನವಿ ಪತ್ರ ಸ್ವೀಕರಿಸಬೇಕು. ಇಲ್ಲವಾದಲ್ಲಿ ಇಲ್ಲಿಯೇ ಧರಣಿ ನಡಸುವುದಾಗಿ ಎಚ್ಚರಿಸಿದರು. ಬಳಿಕ ಅಪರ ಜಿಲ್ಲಾಧಿಕಾರಿ ಪ್ರವೇಶದ್ವಾರದ ಬಳಿ ಆಗಮಿಸಿ ಪ್ರತಿಭಟನಾಕಾರರ ಅಹವಾಲು ಆಲಿಸಿದರು. ಈ ಸಂದರ್ಭ ಕೊಡಗು ಜಿಲ್ಲೆಗೆ ಬೇರೆ ಕಡೆಗಳಿಂದ ವರ್ಗವಾಗಿ ಬಂದು ಇಲ್ಲಿನ ಜನರ ಜೊತೆ ಅಧಿಕಾರಿಗಳು ಚೆಲ್ಲಾಟವಾಡುತ್ತಿದ್ದಾರೆ. ರೈತರನ್ನು ಜಿಲ್ಲಾಡಳಿತ ಭವನಕ್ಕೆ ಪ್ರವೇಶ ತಡೆ ಹಿಡಿದು ಹೋರಾಟವನ್ನು ಹತ್ತಿಕ್ಕುವ ಪ್ರಯತ್ನ ನಡೆಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ಇದಕ್ಕೆ ಪ್ರತಿಕ್ರಿಯಿಸಿದ ಎಡಿಸಿ ರಾಜುಮೊಗವೀರ, ಜಿಲ್ಲಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿ ಲಭ್ಯವಿಲ್ಲ. ಕೋವಿಡ್ ಹಿನ್ನೆಲೆಯಲ್ಲಿ ಮಾತ್ರವೇ ಹೆಚ್ಚು ಜನರು ಬರುವುದನ್ನು ತಡೆಯಲು ಈ ಕ್ರಮ ಕೈಗೊಳ್ಳಾಗಿದೆ. ಇದರಲ್ಲಿ ರೈತರನ್ನು ಕಡೆಗಣಿಸುವ ಅಂಶ ಇಲ್ಲ ಎಂದು ಸ್ಪಷ್ಟಪಡಿಸಿರು. ಬಳಿಕ ಪ್ರತಿಭಟನಾಕಾರರನ್ನು ಆಡಳಿತ ಭವನದ ಒಳಕ್ಕೆ ತೆರಳಲು ಅನುವು ಮಾಡಿಕೊಡಲಾಯಿತು. ತದನಂತರ ಪ್ರತಿಭಟನೆಯ ಮನವಿ ಪತ್ರವನ್ನು ಅಪರ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಸಲ್ಲಿಸಲಾಯಿತು.