Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
12:43 AM Tuesday 26-October 2021

ಅಯ್ಯಂಗೇರಿ ಅಮೀರ ಪ್ರಕರಣ : ಡಿವೈಎಸ್‌ಪಿಗೆ ದೂರು : ತಲೆ ಮರೆಸಿಕೊಂಡಿರುವವರ ಪತ್ತೆಗೆ ತನಿಖೆ ಚುರುಕು

09/10/2021

ಮಡಿಕೇರಿ ಅ.9 : ಇತ್ತೀಚೆಗೆ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಅಯ್ಯಂಗೇರಿ ಗ್ರಾಮದ ನಿವಾಸಿ ಎಂ.ಎಸ್.ಮೊಹಮ್ಮದ್ ಹಾಗೂ ಅಲೀಮಾ ದಂಪತಿಗಳ ಪ್ರಥಮ ಪುತ್ರಿ ಎಂ.ಎo.ಅಮೀರಾ (21) ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳನ್ನು ತಕ್ಷಣ ಬಂಧಿಸಬೇಕೆಂದು ಒತ್ತಾಯಿಸಿ ಈಕೆಯ ಕುಟುಂಬ ವರ್ಗ ಮಡಿಕೇರಿ ಡಿವೈಎಸ್‌ಪಿ ಗಜೇಂದ್ರ ಪ್ರಸಾದ್ ಅವರಿಗೆ ಮನವಿ ಪತ್ರ ಸಲ್ಲಿಸಿದೆ.
ವರದಕ್ಷಿಣೆ ಕಿರುಕುಳ ಮಹಿಳೆಯ ಸಾವಿಗೆ ಕಾರಣವೆಂದು ಪೋಷಕರು ಆರೋಪಿಸಿದ್ದು, ಪತಿ, ಮಾವ ಮತ್ತು ಅತ್ತೆ ನಾಪತ್ತೆಯಾಗಿದ್ದಾರೆ. ಇವರುಗಳನ್ನು ಬಂಧಿಸಬೇಕೆದು ಒತ್ತಾಯಿಸಿ ಅಮೀರಾಳ ತಾಯಿ ಅಲೀಮಾ ಡಿವೈಎಸ್‌ಪಿಗೆ ದೂರು ನೀಡಿದ್ದಾರೆ.
ಕಕ್ಕಬ್ಬೆ ಕುಂಜಿಲ ಗ್ರಾಮದ ನಿವಾಸಿ ಕುಂಡಂಡ ಅಬ್ದುಲ್ಲಾ ಹಾಗೂ ಜಮೀಲಾ ದಂಪತಿಗಳ ಪುತ್ರ ರುವೈಜ್ ಕೆ.ಎ ಮತ್ತು ಅಯ್ಯಂಗೇರಿಯ ಅಮೀರ ನಾಪೋಕ್ಲು ಕಾಲೇಜಿನ ವಿದ್ಯಾರ್ಥಿಗಳಾಗಿದ್ದ ಅವಧಿಯಿಂದಲೇ ಪರಸ್ಪರ ಪ್ರೀತಿಸುತ್ತಿದ್ದರು. ಇವರ ವಿವಾಹ ಕಳೆದ 2020ರ ನವೆಂಬರ್ 1 ರಂದು ಅಯ್ಯಂಗೇರಿ ಮದ್ರಸದಲ್ಲಿ ನಡೆದಿತ್ತು.

ವಿವಾಹದ ಬಳಿಕ ಪತಿ ಮನೆಯವರು ವರದಕ್ಷಿಣೆಗಾಗಿ ಅಮೀರಳಿಗೆ ಕಿರುಕುಳ ನೀಡುತ್ತಿದ್ದರು, ಇದರಿಂದ ಮನನೊಂದ ಆಕೆ ತವರು ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ ಎಂದು ಕುಟುಂಬದ ಸದಸ್ಯರು ಆರೋಪಿಸಿ ಪೊಲೀಸರಿಗೆ ದೂರು ನೀಡಿದ್ದಾರೆ.
ಪತಿ ಹಾಗೂ ಮಾವ ನಾಪತ್ತೆಯಾಗಿದ್ದು, ಭಾಗಮಂಡಲ ಪೊಲೀಸರು ತನಿಖೆ ಮುಂದುವರೆಸಿದ್ದಾರೆ.