Advertisement
ಜಾಹೀರಾತು *** ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ, ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು – ನಿಮ್ಮ ಸಮಸ್ಯೆ ಯಾವುದೇ ಇರಲಿ ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ನೀಡುತ್ತೇವೆ. ಇಂದೇ ಕರೆ ಮಾಡಿ ಪಂಡಿತ ಶ್ರೀಗೋಪಾಲ ಕೃಷ್ಣ ಭಟ್, ಶ್ರೀಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರ – 95354 02066. ನಿಮ್ಮ ಸಮಸ್ಯೆಗಳಾದ ವಿದ್ಯೆ, ಉದ್ಯೋಗ, ವ್ಯಾಪಾರ, ಶತ್ರು ಕಾಟ, ಮಾಟ, ಮಂತ್ರ ನಿವಾರಣೆ ಮನೇಲಿ ಕಿರಿಕಿರಿ, ಅತ್ತೆ, ಸೊಸೆ ಜಗಳ, ಸಂತಾನ ಪ್ರಾಪ್ತಿ, ಬಿಸಿನೆಸ್ ಪ್ರಾಬ್ಲಮ್, ಡ್ರೈವರ್ಸ್ ಪ್ರಾಬ್ಲಮ್, ಪ್ರೀತಿ-ಪ್ರೇಮ ವಿಚಾರಗಳಿಗೆ ಶೀಘ್ರ ಪರಿಹಾರ ನೀಡಲಾಗುವುದು. ಇಂದೇ ಕರೆ ಮಾಡಿ ನಿಮ್ಮ ಸರ್ವ ಸಮಸ್ಯೆಗಳಿಗೆ ಪರಿಹಾರ ಪಡೆದುಕೊಳ್ಳಿ. ದೂರದ ಊರಿನವರಿಗೆ ಫೋನ್ ಕರೆ ಅಥವಾ ವ್ಯಾಟ್ಸ್ ಪ್ ಮೂಲಕ ಪರಿಹಾರ ತಿಳಿಸಲಾಗುವುದು. ಇಂದೇ ಸಂಪರ್ಕಿಸಿ : ಪಂಡಿತ ಶ್ರೀಗೋಪಾಲಕೃಷ್ಣ ಭಟ್, (95354 02066) 1 ನೇ ಮಹಡಿ ಆರ್.ವಿ.ಭದ್ರಯ್ಯ ಸ್ಟೋರ್ ಎದುರು, ಬಾಷ್ಯಂ ಸರ್ಕಲ್, ರಾಜಾಜಿನಗರ, ಬೆಂಗಳೂರು.
11:41 PM Tuesday 26-October 2021

ಸುಂಟಿಕೊಪ್ಪ : ಮಿತಿ ಮೀರಿದ ಮರಗಳ್ಳರ ಹಾವಳಿ : ಅರಣ್ಯ ಅಧಿಕಾರಿಗಳ ದಾಳಿ

09/10/2021

ಸುಂಟಿಕೊಪ್ಪ ಅ.9 : ಸುಂಟಿಕೊಪ್ಪ ವ್ಯಾಪ್ತಿಯಲ್ಲಿ ಮರಗಳ್ಳರ ಹಾವಳಿ ಹೆಚ್ಚಾಗಿದ್ದು, ತೋಟಗಳನ್ನು ಗುರಿ ಮಾಡಿಕೊಂಡು ಮರಗಳನ್ನು ಕತ್ತರಿಸಿ ಸಾಗಿಸುವ ಪ್ರಯತ್ನಗಳು ನಡೆಯುತ್ತಿದೆ.
ಬಾಳೆಕಾಡು ಬಳಿಯ ಸ್ಯಾಂಡಲ್ ವುಡ್ ತೋಟದಲ್ಲಿ ಲಕ್ಷಾಂತರ ರೂ. ಬೆಲೆ ಬಾಳುವ ಭಾರೀ ಗಾತ್ರದ ಬೀಟೆ ಮರಗಳನ್ನು ಕಡಿದು ದಿಮ್ಮಿಗಳನ್ನಾಗಿ ಕತ್ತರಿಸಿ ಅಕ್ರಮ ಸಾಗಾಟ ಮಾಡಲು ಹೊಂಚು ಹಾಕಿರುವ ಪ್ರಕರಣ ಬೆಳಕಿಗೆ ಬಂದಿದೆ.
ತೋಟದ ವ್ಯವಸ್ಥಾಪಕರು ನೀಡಿದ ಮಾಹಿತಿಯಾಧರಿಸಿ ಅರಣ್ಯ ಇಲಾಖೆ ಅಧಿಕಾರಿಗಳು ಪರಿಶೀಲನೆ ನಡೆಸಿದರು. ಕತ್ತರಿಸಿಟ್ಟಿದ್ದ ಬೀಟೆ ಮರವನ್ನು ವಶಕ್ಕೆ ಪಡೆದರು.
ಕಳ್ಳರು ಮರ ಸಾಗಿಸುವ ಸಲುವಾಗಿ ಪಕ್ಕದ ಯಂಕನ ಕುಟುಂಬದ ಕುಶಾಲಪ್ಪ ಅವರ ಕಾಫಿ ತೋಟದಲ್ಲಿ ರೋಬಸ್ಟಾ ಕಾಫಿ ಗಿಡಗಳನ್ನು ಕಡಿದು ನಾಶಗೊಳಿಸಿದ್ದಾರೆ. ಈ ಭಾಗದಲ್ಲಿ ಬೀಟೆ ಮರಗಳು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಮರಗಳ್ಳರ ಹಾವಳಿ ಮಿತಿ ಮೀರಿದೆ. ಇದಕ್ಕೆ ಅರಣ್ಯ ಇಲಾಖೆಯ ನಿರ್ಲಕ್ಷ್ಯವೇ ಕಾರಣ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.