ಕೊಡಗು : ಕೋವಿಡ್ ಪಾಸಿಟಿವಿಟಿ ಪ್ರಮಾಣ ಶೇ.2.52

11/10/2021

ಮಡಿಕೇರಿ ಅ.11  : ಕೊಡಗು ಜಿಲ್ಲೆಯಲ್ಲಿ  ಸೋಮವಾರ  14 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿದೆ. ಪ್ರಸ್ತುತ 262 ಸಕ್ರಿಯ ಪ್ರಕರಣಗಳಿವೆ.
ಪಾಸಿಟಿವಿಟಿ ಪ್ರಮಾಣ ಶೇ 2.52ರಷ್ಟಿದ್ದು, ಕಳೆದ 24 ಗಂಟೆಗಳಲ್ಲಿ 29 ಮಂದಿ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ.

ಮಡಿಕೇರಿ ತಾಲ್ಲೂಕು 8, ಸೋಮವಾರಪೇಟೆ 1, ಹಾಗೂ ವಿರಾಜಪೇಟೆ ತಾಲ್ಲೂಕಿನಲ್ಲಿ  5 ಹೊಸ ಸೋಂಕಿತರು ಪತ್ತೆಯಾಗಿದ್ದಾರೆ. ಇಲ್ಲಿಯವರೆಗೆ ಜಿಲ್ಲೆಯಲ್ಲಿ ಒಟ್ಟು 426  ಮಂದಿ ಸೋಂಕಿನಿಂದ ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಮಾಹಿತಿ ನೀಡಿದ್ದಾರೆ.